LOCAL EXPRESS : ಕುಕನೂರು | ಪ. ಪಂ. ಅಧ್ಯಕ್ಷ–ಉಪಾಧ್ಯಕ್ಷರ ಚುನಾವಣೆ : ಅಧ್ಯಕ್ಷರಾಗಿ ಲೀಲಾವತಿ ಮುಧೋಳ್, ಉಪಾಧ್ಯಕ್ಷರಾಗಿ ಮಂಜುಳಾ ಕಲ್ಮನಿ..!
ಪ್ರಜಾವೀಕ್ಷಣೆ ಡಿಜಿಟಲ್ ಸುದ್ದಿ ಮಾಧ್ಯಮ :
ಕುಕನೂರು: ಇಂದು ಪಟ್ಟಣ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆ ನಡೆದಿದ್ದು, ಅಧ್ಯಕ್ಷರಾಗಿ ಲೀಲಾವತಿ ಮುಧೋಳ್, ಉಪಾಧ್ಯಕ್ಷರಾಗಿ ಮಂಜುಳಾ ಕಲ್ಮನಿ ಆಯ್ಕೆಯಾಗಿದ್ದಾರೆ.
ಈ ಪ್ರಕ್ರಿಯೆಯು ತಹಶೀಲ್ದಾರ್ ಬಸವರಾಜ್ ಬೆಣ್ಣೆಶಿರೂರು ಅವರ ಸಮ್ಮುಖದಲ್ಲಿ ನಡೆಯಿತು. ತೆರವಾದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಒಟ್ಟು ನಾಲ್ಕು ಜನ ಸದಸ್ಯರು ನಾಮಪತ್ರ ಸಲ್ಲಿಕೆ ಮಾಡಿದ್ದೂ, ಅದರಲ್ಲಿ ಕಾಂಗ್ರೆಸ್-ಬಿಜೆಪಿ ಪಕ್ಷದ ತಲಾ ಎರಡು ಎರಡೂ ಜನ ಸದಸ್ಯರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಅಧ್ಯಕ್ಷರಾಗಿ ಆಯ್ಕೆಯಾದ ಲೀಲಾವತಿ ಮುಧೋಳ್ ಅವರಿಗೆ 12 ಮತಗಳು, ಉಪಾಧ್ಯಕ್ಷರಾಗಿ ಆಯ್ಕೆಯಾದ ಮಂಜುಳಾ ಕಲ್ಮನಿ ಅವರಿಗೆ 12 ಮತಗಳು, ಪರಾಜಿತರಾದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡಿದ್ದ ಲಕ್ಷ್ಮಿ ಸಬರದ್ ಅವರಿಗೆ 9 ಮತಗಳು, ಅದೇ ರೀತಿ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡಿದ್ದ ಕುಮಾರಿ ನೇತ್ರಾವತಿ ಮಾಲಗತ್ತಿಗೆ 9 ಮತಗಳು ಪಡೆದುಕೊಂಡಿದ್ದರು.
ಈ ವೇಳೆಯಲ್ಲಿ ಶಾಸಕ ಬಸವರಾಜ ರಾಯರೆಡ್ಡಿ, ಸಂಸದರಾದ ರಾಜಶೇಖರ ಹಿಟ್ನಾಳ ಮತ ಚಲಾಯಿಸಿ, ಗೆದ್ದ ಅಭ್ಯರ್ಥಿಗಳಿಗೆ ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅಧಿಕಾರಿಗಳಾದ ಪ. ಪಂ. ಮುಖ್ಯಾಧಿಕಾರಿ ನಾಗೇಶ ಸೇರಿದಂತೆ ಕಂದಾಯ ಇಲಾಖೆ ಸಿಬ್ಬಂದಿಗಳು ಇದ್ದರು. ಪೊಲೀಸ್ ಬಂದೋಬಸ್ತ್ ನಲ್ಲಿ ನಡೆಯಿತು.
“ಪಟ್ಟಣ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯಲ್ಲಿ ನಮ್ಮ ಪಕ್ಷದ ಸದಸ್ಯರುಗಳು ಉತ್ಸಾಹದಿಂದ ಹಾಗೂ ಒಗ್ಗಟ್ಟಿನಿಂದ ಪಾಲ್ಗೊಂಡು, ಮತ ಚಲಾಯಿಸಿ ನಮ್ಮ ಸದಸ್ಯರನ್ನು ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆ ಮಾಡಿದ್ದಾರೆ. ಪಟ್ಟಣದ ಅಭಿವೃದ್ಧಿಯ ಹಿತದೃಷ್ಟಯಿಂದ ಅಧ್ಯಕ್ಷರಿಗೆ ಹಾಗೂ ಉಪಾಧ್ಯಕ್ಷರಿಗೆ ಬಹಳಷ್ಟು ಸವಾಲುಗಳಿದ್ದು, ಸರ್ಕಾರದಿಂದ ಆಗಬೇಕಾದ ಅಭಿವೃದ್ಧಿಪರ ಕೆಲಸಗಳಿಗೆ ಬೆಂಬಲವನ್ನ ನೀಡಲಿದ್ದೇನೆ. ಇವರಿಗೆ ಹಾರ್ದಿಕ ಅಭಿನಂದನೆ ಸಲ್ಲಿಸುತ್ತೇನೆ”