LOCAL NEWS : ಕುಕನೂರು : ಪಟ್ಟಣದ ಸಮಗ್ರ ಅಭಿವೃದ್ಧಿಗೆ ಬದ್ಧತೆ : ಅಧ್ಯಕ್ಷೆ ಲೀಲಾವತಿ ಮುಧೋಳ್
ಪ್ರಜಾ ವೀಕ್ಷಣೆ ಸುದ್ದಿ :
ಕುಕನೂರು, ಫೆ. 21 : ಪಟ್ಟಣ ಪಂಚಾಯಿತಿ ನೂತನ ಅಧ್ಯಕ್ಷೆಯಾಗಿ ಲೀಲಾವತಿ ಮುಧೋಳ್ ಹಾಗೂ ಉಪಾಧ್ಯಕ್ಷೆ ಮಂಜುಳಾ ಕಲ್ಮನಿ ಅವರ ಅಧಿಕಾರ ಪದಗ್ರಹಣ ಸಮಾರಂಭ ಸೋಮವಾರ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.
ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾಗೇಶ್ ಅವರು ನೂತನ ಪದಾಧಿಕಾರಿಗಳಿಗೆ ಅಧಿಕಾರ ಸ್ವೀಕಾರದ ಪ್ರಮಾಣ ವಚನ ಬೋಧಿಸಿದರು.
ನಂತರ ಮಾತನಾಡಿದ ನೂತನ ಅಧ್ಯಕ್ಷೆ ಲೀಲಾವತಿ ಮುಧೋಳ್, ಪಟ್ಟಣದ ಮೂಲಸೌಕರ್ಯ ಅಭಿವೃದ್ಧಿ, ಸ್ವಚ್ಛತೆ, ಶುದ್ಧ ಕುಡಿಯುವ ನೀರು ಸೇರಿದಂತೆ ಜನಪರ ಯೋಜನೆಗಳಿಗೆ ಆದ್ಯತೆ ನೀಡುವುದಾಗಿ ತಿಳಿಸಿದರು.
ಉಪಾಧ್ಯಕ್ಷೆ ಮಂಜುಳಾ ಕಲ್ಮನಿ ಅವರುಮಾತನಾಡಿ , ಸದಸ್ಯರ ಸಹಕಾರದೊಂದಿಗೆ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಬದ್ಧರಾಗಿರುವುದಾಗಿ ಹೇಳಿದರು.
ಕಾರ್ಯಕ್ರಮದಲ್ಲಿ ತಾಲ್ಲೂಕು ಗ್ಯಾರಂಟಿ ಯೋಜನೆ ಅಧ್ಯಕ್ಷ ಸಂಗಮೇಶ ಗುತ್ತಿ, ಸತ್ಯನಾರಾಯಣ ಹರಪನಹಳ್ಳಿ, ಗಗನ್ ನೋಟಗಾರ, ಲಲಿತಮ್ಮ ಯಡಿಯಾಪುರ, ಸಿರಾಜ್, ರಾಮಣ್ಣ ಕಲ್ಮನಿ, ಪ್ರಶಾಂತ ಆರ್., ಬೆರಳಿನ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು. ಪ.ಪಂ. ಸದಸ್ಯರು, ಕಾಂಗ್ರೆಸ್ ಮುಖಂಡರು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.