You are currently viewing KOPPAL NEWS : ಮರ್ಯಾದಾಗೇಡು ಹತ್ಯೆ ತಡೆಗೆ ಕಾಯ್ದೆ ಜಾರಿಗೆ ಒತ್ತಾಯಿಸಿ ಶಾಸಕರಿಗೆ AIMSS ಆಗ್ರಹ!

KOPPAL NEWS : ಮರ್ಯಾದಾಗೇಡು ಹತ್ಯೆ ತಡೆಗೆ ಕಾಯ್ದೆ ಜಾರಿಗೆ ಒತ್ತಾಯಿಸಿ ಶಾಸಕರಿಗೆ AIMSS ಆಗ್ರಹ!

KOPPAL NEWS : ಮರ್ಯಾದಾಗೇಡು ಹತ್ಯೆ ತಡೆಗೆ ಕಾಯ್ದೆ ಜಾರಿಗೆ ಒತ್ತಾಯಿಸಿ ಶಾಸಕರಿಗೆ AIMSS ಆಗ್ರಹ!

ಪ್ರಜಾವೀಕ್ಷಣೆ ಡಿಜಿಟಲ್ ಸುದ್ದಿ : 

ಕೊಪ್ಪಳ, ಫೆ.25: ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (AIMSS)ಯ ಜಿಲ್ಲಾ ಸಂಘಟನಾ ಸಮಿತಿ ವತಿಯಿಂದ ಮಹಿಳೆಯರು ಮತ್ತು ಮಕ್ಕಳ ಸಮಸ್ಯೆಗಳ ಪರಿಹಾರಕ್ಕಾಗಿ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್ ಅವರಿಗೆ ಬುಧವಾರ ಮನವಿ ಪತ್ರ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ AIMSS ಜಿಲ್ಲಾಧ್ಯಕ್ಷೆ ಮಂಜುಳಾ ಮಜ್ಜಿಗಿ ಮಾತನಾಡಿ, ಉದ್ಯೋಗದ ಸ್ಥಳಗಳು ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ಮಹಿಳೆಯರ ಸಮಸ್ಯೆಗಳ ಪರಿಹಾರಕ್ಕಾಗಿ ಆಂತರಿಕ ದೂರು ಸಮಿತಿ (ICC) ರಚನೆ ಕಡ್ಡಾಯಗೊಳಿಸಬೇಕು ಎಂದು ಆಗ್ರಹಿಸಿದರು.

ರಾಜ್ಯದಾದ್ಯಂತ ಹೆಚ್ಚುತ್ತಿರುವ ಮರ್ಯಾದಾಗೇಡು ಹತ್ಯೆಗಳನ್ನು ತಡೆಗಟ್ಟಲು ಮಾನ್ಯ ಕಾಯ್ದೆಯನ್ನು ಜಾರಿಗೊಳಿಸಬೇಕು. ಬಾಲ್ಯ ವಿವಾಹ, ಅಪ್ರಾಪ್ತ ವಯಸ್ಕರ ಗರ್ಭಧಾರಣೆ ಹಾಗೂ ಸ್ತ್ರೀ ಭ್ರೂಣ ಹತ್ಯೆ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದರು.

ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಕೈಬಿಟ್ಟು ಸರ್ಕಾರಿ ಶಾಲೆ–ಕಾಲೇಜುಗಳನ್ನು ಬಲಪಡಿಸಿ, ಎಲ್ಲಾ ಹೆಣ್ಣು ಮಕ್ಕಳಿಗೂ ಉಚಿತ ಶಿಕ್ಷಣ ಖಾತ್ರಿಪಡಿಸಬೇಕು. ಸ್ವಾವಲಂಬಿ ಜೀವನ ಕಟ್ಟಿಕೊಳ್ಳಲು ಬಯಸುವ ಹೆಣ್ಣು ಮಕ್ಕಳಿಗೆ ಉದ್ಯೋಗ ಭದ್ರತೆ ಒದಗಿಸಬೇಕು ಎಂದು ಒತ್ತಾಯಿಸಿದರು.

ಆರೋಗ್ಯದ ಖಾಸಗೀಕರಣದಿಂದ ಬಡ ವರ್ಗದ ಮಹಿಳೆಯರು ಸೂಕ್ತ ಚಿಕಿತ್ಸಾ ಸೌಲಭ್ಯಗಳಿಂದ ವಂಚಿತರಾಗುತ್ತಿರುವ ಹಿನ್ನೆಲೆಯಲ್ಲಿ PHCಗಳೂ ಸೇರಿದಂತೆ ಸರ್ಕಾರಿ ಆಸ್ಪತ್ರೆಗಳನ್ನು ಬಲಪಡಿಸಿ, ತಜ್ಞ ವೈದ್ಯರು ಹಾಗೂ ಸ್ತ್ರೀರೋಗ ತಜ್ಞರನ್ನು ಲಭ್ಯವಿರಿಸಬೇಕು. ಹೆಣ್ಣು ಮಕ್ಕಳ ಅಪೌಷ್ಟಿಕತೆಯನ್ನು ತಡೆಗಟ್ಟಲು ಮಧ್ಯಾಹ್ನದ ಬಿಸಿ ಊಟ ಯೋಜನೆಯನ್ನು ಪದವಿ ಕಾಲೇಜು ಹಂತದವರೆಗೂ ವಿಸ್ತರಿಸಬೇಕೆಂದರು.

ಹೆಣ್ಣು ಮಕ್ಕಳ ಮೇಲಿನ ಅಪರಾಧಗಳನ್ನು ತಡೆಯಲು ಅಶ್ಲೀಲ ಸಿನಿಮಾ–ಸಾಹಿತ್ಯ, ಮದ್ಯ ಹಾಗೂ ಮಾದಕ ವಸ್ತುಗಳ ನಿಷೇಧಕ್ಕೆ ಕ್ರಮ ಕೈಗೊಳ್ಳಬೇಕು. ಆತ್ಮರಕ್ಷಣಾ ಕೌಶಲ್ಯಗಳ ತರಬೇತಿ ನೀಡಬೇಕು. ಶುಚಿ ವಿತರಣಾ ಯೋಜನೆಯನ್ನು ಕೂಡಲೇ ಆರಂಭಿಸಬೇಕು.

ಉದ್ಯೋಗಸ್ಥ ಮಹಿಳೆಯರಿಗೆ ವಿಶ್ರಾಂತಿ ಕೊಠಡಿ ಹಾಗೂ ಶಿಶು ಪಾಲನಾ ಕೇಂದ್ರಗಳಂತಹ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು ಎಂದು ಆಗ್ರಹಿಸಿದರು.

ಈ ಮೇಲಿನ ಹಕ್ಕೊತ್ತಾಯಗಳನ್ನು ಈಡೇರಿಸಲು 2026ರ ಮಾರ್ಚ್ ರಾಜ್ಯ ಬಜೆಟ್‌ನಲ್ಲಿ ಸೂಕ್ತ ಅನುದಾನ ಹಾಗೂ ಕ್ರಮಗಳನ್ನು ಕೈಗೊಳ್ಳಬೇಕು ಎಂದು AIMSS ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಶಾರದಾ ಗಡ್ಡಿ, ಸದಸ್ಯರಾದ ಪವಿತ್ರಾ ಹಾಗೂ ಹುಲಿಗೆಮ್ಮ ಉಪಸ್ಥಿತರಿದ್ದರು

Prajavikshane

Chandru R Bhanapaur

Leave a Reply

error: Content is protected !!