You are currently viewing BREAKING NEWS : ಶಹಾಪುರ |ಬಾಲಕಿಯೊಂದಿಗೆ ಅನುಚಿತ ವರ್ತನೆ ವೀಡಿಯೋ ವೈರಲ್: ಆಯೋಗದಿಂದ ಸ್ವಯಂ ಪ್ರೇರಿತ ದೂರು!

BREAKING NEWS : ಶಹಾಪುರ |ಬಾಲಕಿಯೊಂದಿಗೆ ಅನುಚಿತ ವರ್ತನೆ ವೀಡಿಯೋ ವೈರಲ್: ಆಯೋಗದಿಂದ ಸ್ವಯಂ ಪ್ರೇರಿತ ದೂರು!

BREAKING NEWS : ಶಹಾಪುರ |ಬಾಲಕಿಯೊಂದಿಗೆ ಅನುಚಿತ ವರ್ತನೆ ವೀಡಿಯೋ ವೈರಲ್: ಆಯೋಗದಿಂದ ಸ್ವಯಂ ಪ್ರೇರಿತ ದೂರು!

ಪ್ರಜಾವೀಕ್ಷಣೆ ಡಿಜಿಟಲ್ ಸುದ್ದಿ :

ಶಹಾಪುರ, ಫೆ.25 : ತಾಲ್ಲೂಕಿನ ರೋಜಾಮೆಹಲ್ ಗ್ರಾಮದಲ್ಲಿ ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿರುವುದಾಗಿ ಹೇಳಲಾಗುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಹಿನ್ನೆಲೆ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿದೆ.

ಸಾಮಾಜಿಕ ಜಾಲತಾಣಗಳು ಹಾಗೂ ಕೆಲವು ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾದ ವೀಡಿಯೋ ತುಣುಕು ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಪ್ರಕರಣದ ಬಗ್ಗೆ ಕಠಿಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಹಾಗೂ ವಿವಿಧ ಸಂಘಟನೆಗಳಿಂದ ಒತ್ತಾಯ ವ್ಯಕ್ತವಾಗಿದೆ.

ಘಟನೆ ಆಯೋಗದ ಗಮನಕ್ಕೆ ಬಂದ ತಕ್ಷಣ, ವೈರಲ್ ವೀಡಿಯೋ ಆಧರಿಸಿ ಸ್ವಯಂ ಪ್ರೇರಿತ ದೂರು ದಾಖಲಿಸಲಾಗಿದ್ದು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಈ ಸಂಬಂಧ ಜಿಲ್ಲಾ ಆಡಳಿತ ಹಾಗೂ ಪೊಲೀಸ್ ಅಧಿಕಾರಿಗಳಿಗೆ ತಕ್ಷಣ ಪರಿಶೀಲನೆ ನಡೆಸುವಂತೆ ಸೂಚನೆ ನೀಡಲಾಗಿದೆ.

ವೀಡಿಯೋ ಕುರಿತು ಸಮಗ್ರ ತನಿಖೆ ನಡೆಸಿ, ಸತ್ಯಾಸತ್ಯತೆ ಪರಿಶೀಲಿಸಿ, ಅಗತ್ಯ ಕಾನೂನು ಕ್ರಮ ಕೈಗೊಳ್ಳುವಂತೆ ಆಯೋಗ ನಿರ್ದೇಶಿಸಿದೆ. ಜೊತೆಗೆ ಕೈಗೊಂಡ ಕ್ರಮಗಳ ವಿವರವಾದ ವರದಿಯನ್ನು ಮರು ಟಪಾಲಿನ ಮೂಲಕ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ಆಯೋಗದ ಅಧ್ಯಕ್ಷ ಶಶಿಧರ ಕೋಸಂಬೆ ತಿಳಿಸಿದ್ದಾರೆ.

ಘಟನೆ ಜಿಲ್ಲೆಯಾದ್ಯಂತ ಚರ್ಚೆಗೆ ಗ್ರಾಸವಾಗಿದ್ದು, ಬಾಲಕಿಯರ ಸುರಕ್ಷತೆ ಕುರಿತು ಮತ್ತೆ ಆತಂಕ ವ್ಯಕ್ತವಾಗುತ್ತಿದೆ.

Prajavikshane

Chandru R Bhanapaur

Leave a Reply

error: Content is protected !!