Post Views: 30
BIG NEWS : ಇಂದು ಮತ್ತು ನಾಳೆ ಹೈಕೋರ್ಟ್ ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರ ಜಿಲ್ಲಾ ಪ್ರವಾಸ!

ಪ್ರಜಾವೀಕ್ಷಣೆ ಡಿಜಿಟಲ್ ಸುದ್ದಿ :
ಕೊಪ್ಪಳ ಮಾರ್ಚ್ 14 : ಹೈಕೋರ್ಟ್ನ ನ್ಯಾಯಮೂರ್ತಿಗಳು ಹಾಗೂ ಕೊಪ್ಪಳ ಜಿಲ್ಲೆಯ ಆಡಳಿತಾತ್ಮಕ ನ್ಯಾಯಾಧೀಶರಾದ ಸಿ .ಎಂ. ಪೂಣಚ್ಚ ಅವರು ಮಾರ್ಚ್ 14 ಮತ್ತು 15 ರಂದು ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ನ್ಯಾಯಮೂರ್ತಿಗಳು ಮಾರ್ಚ್ 14 ರಂದು ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನಿಂದ ಹೊರಟು ಸಂಜೆ 7.30 ಗಂಟೆಗೆ ಕೊಪ್ಪಳಕ್ಕೆ ಆಗಮಿಸುವರು. ಬಳಿಕ ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ವಾಸ್ತವ್ಯ ಮಾಡುವರು.

ಮಾ.15 ರಂದು ಬೆಳಿಗ್ಗೆ ಕೊಪ್ಪಳದಲ್ಲಿ ಹೊಸದಾಗಿ ನಿರ್ಮಿಸಲಾಗುತ್ತಿರುವ ಜಿಲ್ಲಾ ನ್ಯಾಯಾಲಯ ಸಂಕೀರ್ಣ ಕಟ್ಟಡ ನಿರ್ಮಾಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವರು. ನಂತರ ಕೊಪ್ಪಳ ಘಟಕದ ನ್ಯಾಯಾಂಗ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ಬಳಿಕ ಕುಕನೂರು, ಯಲಬುರ್ಗಾ, ಕುಷ್ಟಗಿ, ಕನಕಗಿರಿ, ಕಾರಟಗಿ ಹಾಗೂ ಗಂಗಾವತಿಗೆ ಭೇಟಿ ನೀಡಿ ಆಯಾ ಪ್ರದೇಶದಲ್ಲಿ ಉದ್ದೇಶಿತ ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ ಪ್ರಸ್ತಾವಿತ ಜಾಗಗಳು ಹಾಗೂ ನ್ಯಾಯಾಲಯ ಸಂಕೀರ್ಣಗಳನ್ನು ಪರಿಶೀಲಿಸುವರು. ನಂತರ ಸಂಜೆ 6 ಗಂಟೆಗೆ ಗಂಗಾವತಿಯಿಂದ ನಿರ್ಗಮಿಸಿ ಬೆಂಗಳೂರಿನ ಕಡೆಗೆ ಪ್ರಯಾಣ ಬೆಳೆಸುವರು ಎಂದು ಪ್ರಕಟಣೆ ತಿಳಿಸಿದೆ.