You are currently viewing BREAKING NEWS : ಕುಕನೂರು | ರಸ್ತೆ ಅಪಘಾತ : ತಳ್ಳುಗಾಡಿ ಹಾಗೂ ಬೈಕ್ ನಡುವೆ ಭೀಕರ ಡಿಕ್ಕಿ : ಓರ್ವ ಸಾವು..!!

BREAKING NEWS : ಕುಕನೂರು | ರಸ್ತೆ ಅಪಘಾತ : ತಳ್ಳುಗಾಡಿ ಹಾಗೂ ಬೈಕ್ ನಡುವೆ ಭೀಕರ ಡಿಕ್ಕಿ : ಓರ್ವ ಸಾವು..!!

BREAKING NEWS : ಕುಕನೂರು | ರಸ್ತೆ ಅಪಘಾತ : ತಳ್ಳುಗಾಡಿ ಹಾಗೂ ಬೈಕ್ ನಡುವೆ ಭೀಕರ ಡಿಕ್ಕಿ : ಓರ್ವ ಸಾವು..!!

ಪ್ರಜಾವೀಕ್ಷಣೆ ಡಿಜಿಟಲ್ ಸುದ್ದಿ :

​ಕುಕನೂರು, ಮಾರ್ಚ್ 19 : ಪಟ್ಟಣದ ವಿದ್ಯಾನಂದ ಗುರುಕುಲ ಶಾಲೆಯ ಬಳಿ ರಸ್ತೆಯಲ್ಲಿ ಚಲಿಸುತ್ತಿದ್ದ ತಳ್ಳುಗಾಡಿ ಹಾಗೂ ವೇಗವಾಗಿ ಬಂದ ಬೈಕ್ ನಡುವೆ ಸಂಭವಿಸಿದ ಭೀಕರ ಡಿಕ್ಕಿಯಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಿನ್ನೆ (ಬುಧವಾರ) ರಾತ್ರಿ ನಡೆದಿದೆ.

ಕುಕನೂರು ಪಟ್ಟಣದ ವಿದ್ಯಾನಂದ ಗುರುಕುಲ ಶಾಲೆಯ ಮಖ್ಯದ್ವಾರದ ಮುಂಭಾಗದಲ್ಲಿ ಅಪಘಾತ ನಡೆದ ಸ್ಥಳ.

​ಮೃತಪಟ್ಟವರನ್ನು ತಾಲೂಕಿನ ಕಕ್ಕಿಹಳ್ಳಿ ಗ್ರಾಮದ ಅಬ್ದುಲ್ ರೆಹಮಾನ್ [ವಯಸ್ಸು 50ವರ್ಷ] ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ನಿನ್ನೆ ರಾತ್ರಿ 10 ಗಂಟೆ ಸುಮಾರಿಗೆ ಕುಕನೂರಿನ ನಿವಾಸಿ ಹಮೀದ್ ಎಂಬಾತ ತಮ್ಮ ತಳ್ಳುಗಾಡಿಯಲ್ಲಿ ವ್ಯಾಪಾರ ಮುಗಿಸಿಕೊಂಡು ರಸ್ತೆಯ ಬದಿಯಲ್ಲಿ ಸಾಗುತ್ತಿದ್ದನು, ಈ ವೇಳೆಯಲ್ಲಿ ತುಂತುರು ಮಳೆ ಹಾಗೂ ಕತ್ತಲ ಆವರಿಸಿಕೊಂಡ ಪರಿಣಾಮ ಹಿಂದಿನಿಂದ ವೇಗವಾಗಿ ಬಂದ ಬೈಕ್ ಸವಾರ ಮೃತ ಅಬ್ದುಲ್ ನಿಯಂತ್ರಣ ತಪ್ಪಿ ನೇರವಾಗಿ ತಳ್ಳುಗಾಡಿಗೆ ಡಿಕ್ಕಿ ಹೊಡೆದಿದ್ದಾನೆ. ಈ ಡಿಕ್ಕಿಯ ರಭಸಕ್ಕೆ ಬೈಕ್ ಸವಾರನ ತಲೆಗೆ ಬಲವಾಗಿ ಪೆಟ್ಟುಬಿದ್ದಿದ್ದರಿಂದ ರಕ್ತಸ್ರಾವವಾಗಿ ಸ್ಥಳದಲ್ಲಿಯೇ ಬೈಕ್ ಸವಾರ ಮೃತಪಟ್ಟಿದ್ದಾನೆ. ತಳ್ಳುಗಾಡಿ ಅವನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.


ಕೂಡಲೇ ಸ್ಥಳೀಯರು ಅವರನ್ನು ಸಮೀಪದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದಾಗಲೇ ಬೈಕ್ ಸವಾರ ಮೃತಪಟ್ಟಿದ್ದಾರೆ ಎಂದು ವೈದ್ಯರು ಖಚಿತಪಡಿಸಿದ್ದಾರೆ. ಈ ಘಟನೆಯು ಕುಕನೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದ್ದು, ಈ ಬಗ್ಗೆ ದೂರು ದಾಖಲಾಗಿದೆ ಎಂದು ಮಾಹಿತಿ ಇದೆ.

Prajavikshane

Chandru R Bhanapaur

Leave a Reply

error: Content is protected !!