You are currently viewing BIG NEWS : ಜಿಲ್ಲೆಯ ಹಿರಿಯ ರಾಜಕಾರಣಿ, ಮಾಜಿ MLC ಕರಿಯಣ್ಣ ಸಂಗಟಿ ಇನ್ನಿಲ್ಲ..!!

BIG NEWS : ಜಿಲ್ಲೆಯ ಹಿರಿಯ ರಾಜಕಾರಣಿ, ಮಾಜಿ MLC ಕರಿಯಣ್ಣ ಸಂಗಟಿ ಇನ್ನಿಲ್ಲ..!!

BIG NEWS : ಜಿಲ್ಲೆಯ ಹಿರಿಯ ರಾಜಕಾರಣಿ, ಮಾಜಿ MLC ಕರಿಯಣ್ಣ ಸಂಗಟಿ ಇನ್ನಿಲ್ಲ..!!

ಪ್ರಜಾವೀಕ್ಷಣೆ ಡಿಜಿಟಲ್ ಸುದ್ದಿ : 

ಕೊಪ್ಪಳ, ಮಾರ್ಚ್ 23 : ಜಿಲ್ಲೆಯ ಹಿರಿಯ ರಾಜಕೀಯ ಧುರೀಣ, ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯರಾದ ಕರಿಯಣ್ಣ ಸಂಗಟಿ (63) ಅವರು ಇಂದು (ಸೋಮವಾರ) ಬೆಳಗಿನ ಜಾವ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.

ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೆ ಮುಂಜಾನೆ 3 ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಮೃತರು ಪತ್ನಿ ರುದ್ರಮ್ಮ ಪುತ್ರರಾದ ಬೆಟ್ಟದೇಶ, ಲಿಂಗೇಶ, ಮಹಾಂತೇಶ, ಪುತ್ರಿಯರಾದ ಕವಿತಾ, ನಂದಿನಿ, ಲಕ್ಷ್ಮಿ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

ಕೊಪ್ಪಳ ಜಿಲ್ಲೆಯಲ್ಲಿ ಸಂಗಟಿಯವರ ರಾಜಕೀಯ ಪಯಣ :

ಮೂಲತಃ ಕೊಪ್ಪಳ ತಾಲೂಕಿನವರಾದ ಸಂಗಟಿ ಅವರು ರಾಜಕೀಯದಲ್ಲಿ ಸಕ್ರಿಯರಾಗಿದ್ದರು. ಇವರು ಮೊದಲು ಕಾಂಗ್ರೆಸ್ ಪಕ್ಷದಿಂದ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿ ಸೇವೆ ಸಲ್ಲಿಸಿದ್ದರು.

ಬಳಿಕ 2018ರಲ್ಲಿ ಗಂಗಾವತಿ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡಿದ್ದರು. 2023ರ ಚುನಾವಣೆಯಲ್ಲಿ ಜನಾರ್ದನ ರೆಡ್ಡಿ ಅವರ ಕೆಆರ್‌ಪಿಪಿ ಪಕ್ಷವನ್ನು ಬೆಂಬಲಿಸುವ ಮೂಲಕ ಕ್ಷೇತ್ರದಲ್ಲಿ ರಾಜಕೀಯ ಸಂಚಲನ ಮೂಡಿಸಿದ್ದರು.

ಸರಳ ಸಜ್ಜನಿಕೆಯ ವ್ಯಕ್ತಿತ್ವ ಹೊಂದಿದ್ದ ಸಂಗಟಿ ಅವರು ಎಲ್ಲಾ ರಾಜಕೀಯ ಪಕ್ಷಗಳ ಜೊತೆಗೆ ಒಳ್ಳೆಯ ಬಾಂಧವ್ಯ ಹೊಂದಿದ್ದರು. ಇವರ ನಿಧನಕ್ಕೆ ಜಿಲ್ಲೆಯ ಸಂಸದರು, ಹಾಲಿ-ಮಾಜಿ ಶಾಸಕರು ಹಾಗೂ ವಿವಿಧ ಪಕ್ಷಗಳ ಮುಖಂಡರು ತೀವ್ರ ಸಂತಾಪ ಸೂಚಿಸಿದ್ದಾರೆ.

Leave a Reply

error: Content is protected !!