You are currently viewing FLASH NEWS : ಆನ್‌ಲೈನ್ ಗೇಮ್ ದುರಂತ: ವೈದ್ಯಕೀಯ ವಿದ್ಯಾರ್ಥಿ ಸಾವು 25 ಲಕ್ಷ ಪರಿಹಾರಕ್ಕೆ ಒತ್ತಾಯ!

FLASH NEWS : ಆನ್‌ಲೈನ್ ಗೇಮ್ ದುರಂತ: ವೈದ್ಯಕೀಯ ವಿದ್ಯಾರ್ಥಿ ಸಾವು 25 ಲಕ್ಷ ಪರಿಹಾರಕ್ಕೆ ಒತ್ತಾಯ!

FLASH NEWS : ಆನ್‌ಲೈನ್ ಗೇಮ್ ದುರಂತ: ವೈದ್ಯಕೀಯ ವಿದ್ಯಾರ್ಥಿ ಸಾವು 25 ಲಕ್ಷ ಪರಿಹಾರಕ್ಕೆ ಒತ್ತಾಯ!

ಪ್ರಜಾವೀಕ್ಷಣೆ ಡಿಜಿಟಲ್‌ ಸುದ್ದಿ : 

ಪ್ರಜಾವೀಕ್ಷಣೆ ಡಿಜಿಟಲ್‌ ಡೆಸ್ಕ್‌ : ರಾಜ್ಯದಲ್ಲಿ ಬಡಜನರ ಜೀವನ ಹಾಳುಮಾಡುತ್ತಿರುವ ಆನ್‌ಲೈನ್ ಗೇಮ್‌ಗಳನ್ನು ತಕ್ಷಣ ನಿಷೇಧಿಸಿ ಅಮಾಯಕ ಜನರ ಜೀವ ಉಳಿಸಬೇಕು ಎಂದು ಗೋರ ಸೇನಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸುರೇಶ್ ಬಳೂಟಗಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಕುರಿತು ಗುರುವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಬಾಲತೆ ತಾಂಡಾದ 22ವರ್ಷದ ಯುವಕ ಅನಿಸ್ಕ‌ ಚವ್ಹಾಣ, ಬೀದರ್‌ನ ಬ್ರಿಮ್ಸ್‌ ವೈದ್ಯಕೀಯ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದು, ಮಾ. 24 ರಂದು ಆನ್‌ಲೈನ್‌ ಗೇಮ್‌ಗೆ ಬಿದ್ದು ಲಕ್ಷಾಂತರ ರೂಪಾಯಿ ಕಳೆದುಕೊಂಡು ಮಾನಸಿಕವಾಗಿ ನೊಂದು ಕಾಲೇಜಿನ ವಸತಿ ನಿಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ದುಃಖಕರ ಘಟನೆ ಎಂದು ಹೇಳಿದರು.

 

ಈ ಸಂಬಂಧ ಬೀದರ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದಾಗಿ ತಿಳಿದು ಬಂದಿದೆ. ಬಡ ಬಂಜಾರ ಸಮುದಾಯದ ಈ ಯುವಕನನ್ನು ವೈದ್ಯನನ್ನಾಗಿ ಮಾಡಲು ತಂದೆ-ತಾಯಿ ಕಷ್ಟಪಟ್ಟು ಎಂ.ಬಿ.ಬಿ.ಎಸ್ ಪ್ರವೇಶ ಕೊಡಿಸಿದ್ದರು. ಆದರೆ ಅವರ ಕನಸು ದುಃಖಕರವಾಗಿ ಅಂತ್ಯಗೊಂಡಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಈ ಹಿನ್ನೆಲೆ ಸರ್ಕಾರ ತಕ್ಷಣವೇ ಇಂತಹ ಅನಿಷ್ಟ ಆನ್‌ಲೈನ್ ಗೇಮ್‌ಗಳನ್ನು ನಿಷೇಧಿಸಬೇಕು. ಜೊತೆಗೆ ಘಟನೆಯ ಕುರಿತು ಸಮಗ್ರ ತನಿಖೆ ನಡೆಸಿ, ಕಾರಣಕರ್ತರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಮೃತನ ಕುಟುಂಬಕ್ಕೆ 25 ಲಕ್ಷ ಪರಿಹಾರ ನೀಡಬೇಕು. ಇಲ್ಲದಿದ್ದರೆ ಗೋರ ಸೇನಾ ವತಿಯಿಂದ ರಾಜ್ಯಾದ್ಯಂತ ಸರ್ಕಾರದ ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

Leave a Reply

error: Content is protected !!