BIG NEWS : ಸುಡು ಬಿಸಿಲಿಗೆ ಜನಜೀವನ ತತ್ತರ:ಸರ್ಕಾರಿ ಕಚೇರಿಗಳ ಕೆಲಸದ ಅವಧಿ ಬದಲಾವಣೆ!

ಪ್ರಜಾವೀಕ್ಷಣೆ ಡಿಜಿಟಲ್ ಸುದ್ದಿ :
ಬೆಂಗಳೂರು ಮಾ. 31 : ರಾಜ್ಯಾದ್ಯಂತ ಬಿಸಿಲ ತಾಪಮಾನ ದಿನೇದಿನೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರ ಹಿತದೃಷ್ಟಿಯಿಂದ ಮತ್ತು ಸರ್ಕಾರಿ ನೌಕರರ ಆರೋಗ್ಯದ ಕಾಳಜಿಯಿಂದ ರಾಜ್ಯ ಸರ್ಕಾರವು ಸರ್ಕಾರಿ ಕಚೇರಿಗಳ ಕೆಲಸದ ವೇಳಾಪಟ್ಟಿಯಲ್ಲಿ ಮಹತ್ವದ ಬದಲಾವಣೆ ಮಾಡಿ ಅಧಿಕೃತ ಆದೇಶ ಹೊರಡಿಸಿದೆ.
ಬೆಳ್ಳಂಬೆಳಗ್ಗೆಯೇ ಸರ್ಕಾರಿ ಕೆಲಸ ಆರಂಭ!
ಹೆಚ್ಚುತ್ತಿರುವ ಉಷ್ಣಾಂಶದಿಂದಾಗಿ ಮಧ್ಯಾಹ್ನದ ವೇಳೆಯಲ್ಲಿ ಕಚೇರಿಗೆ ಬರುವ ಸಾರ್ವಜನಿಕರಿಗೆ ಹಾಗೂ ಸಿಬ್ಬಂದಿಗೆ ಆಗುವ ತೊಂದರೆಯನ್ನು ತಪ್ಪಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಹೊಸ ಆದೇಶದ ಪ್ರಕಾರ, ವಿಶೇಷವಾಗಿ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಈ ಕೆಳಗಿನಂತೆ ಸಮಯ ನಿಗದಿಪಡಿಸಲಾಗಿದೆ.
ಪರಿಷ್ಕೃತ ಸಮಯ: ಬೆಳಿಗ್ಗೆ 8:00 ಗಂಟೆಯಿಂದ ಮಧ್ಯಾಹ್ನ 1:30 ಗಂಟೆಯವರೆಗೆ ಅವಧಿ ನಿಗಧಿಸಿಪಡಿಸಿದೆ.
ಈ ಆದೇಶವು ತಕ್ಷಣದಿಂದಲೇ ಜಾರಿಗೆ ಬರಲಿದ್ದು, ಮುಂಬರುವ ಮೇ ಅಂತ್ಯದವರೆಗೆ ಅಥವಾ ಮುಂದಿನ ಆದೇಶದವರೆಗೆ ಚಾಲ್ತಿಯಲ್ಲಿರುತ್ತದೆ.
ಯಾವ ಜಿಲ್ಲೆಗಳಿಗೆ ಅನ್ವಯ?
ಸಾಮಾನ್ಯವಾಗಿ ಅತಿ ಹೆಚ್ಚು ತಾಪಮಾನ ದಾಖಲಾಗುವ ಜಿಲ್ಲೆಗಳಾದ ಕಲಬುರಗಿ, ವಿಜಯಪುರ, ಬಾಗಲಕೋಟೆ, ರಾಯಚೂರು, ಕೊಪ್ಪಳ, ಯಾದಗಿರಿ ಮತ್ತು ಬಳ್ಳಾರಿ ಜೊತೆಗೆ ಬೆಳಗಾವಿ ವಿಭಾಗದ ಜಿಲ್ಲೆಗಳಲ್ಲಿ ಮತ್ತು ಬಾಗಲಕೋಟೆ ಜಿಲ್ಲೆಗೆ ಈ ನಿಯಮ ಕಡ್ಡಾಯವಾಗಿ ಜಾರಿಯಲ್ಲಿರಲಿದೆ ಎಂದು ತಿಳಿದುಬಂದಿದೆ. ಉಳಿದ ಜಿಲ್ಲೆಗಳಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ಆಯಾ ಜಿಲ್ಲಾಧಿಕಾರಿಗಳಿಗೆ ನಿರ್ಧಾರ ತೆಗೆದುಕೊಳ್ಳಲು ಸೂಚಿಸಲಾಗಿದೆ.
ಸರ್ಕಾರದ ಆದೇಶದಲ್ಲಿ ಏನಿದೆ?
