You are currently viewing BREAKING : ಕರ್ತವ್ಯ ಲೋಪ : ಮುನಿರಾಬಾದ್ ಠಾಣೆಯ ಪಿಎಸ್‌ಐ ಸುನೀಲ್ ಅಮಾನತು!!

BREAKING : ಕರ್ತವ್ಯ ಲೋಪ : ಮುನಿರಾಬಾದ್ ಠಾಣೆಯ ಪಿಎಸ್‌ಐ ಸುನೀಲ್ ಅಮಾನತು!!

BREAKING : ಆಡಳಿತಾತ್ಮಕ ಲೋಪ : ಮುನಿರಾಬಾದ್ ಠಾಣೆಯ ಪಿಎಸ್‌ಐ ಸುನೀಲ್ ಅಮಾನತು!!

ಪ್ರಜಾವೀಕ್ಷಣೆ ಡಿಜಿಟಲ್ ಮಾಧ್ಯಮ ಸುದ್ದಿ : 

ಕೊಪ್ಪಳ, ಎ. 01 : ಆಡಳಿತಾತ್ಮಕ ವಿಚಾರದಲ್ಲಿ ಸಮರ್ಪಕವಾಗಿ ಕೆಲಸ ನಿರ್ವಹಿಸದ ಹಿನ್ನೆಲೆಯಲ್ಲಿ ಮುನಿರಾಬಾದ್ ಪೊಲೀಸ್‌ ಠಾಣೆಯ ಪಿಎಸ್‌ಐ ಸುನೀಲ್‌ ಅವರನ್ನು ಅಮಾನತು ಮಾಡಲಾಗಿದೆ.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರಾಮ್ ಅರಸಿದ್ಧಿ ಅವರು ಮುನಿರಾಬಾದ್ ಪೊಲೀಸ್ ಠಾಣೆಯ ಪಿಎಸ್‌ಐ ಸುನೀಲ್‌ ಅವರನ್ನು ಅಮಾನತು ಮಾಡಿ, ಆದೇಶ ಹೊರಡಿಸಿದ್ದಾರೆ.

ಕಳೆದ ಎರಡು ವರ್ಷಗಳಿಂದ ಮುನಿರಾಬಾದ್‌ ಠಾಣೆಯಲ್ಲಿ ಪಿಎಸ್‌ಐ ಆಗಿ ಕಾರ್ಯನಿರ್ವಹಿಸುತ್ತಿದ್ದ ಸುನೀಲ್‌ ಅವರ ವ್ಯಾಪ್ತಿಯಲ್ಲಿ ಇತ್ತೀಚೆಗೆ ಹಲವು ಅನಧಿಕೃತ ಚಟುವಟಿಕೆಗಳು ಬೆಳಕಿಗೆ ಬಂದಿದ್ದವು. ವಿದೇಶಿಗರ ಪಾರ್ಟಿ, ಅಕ್ರಮ ಕಲ್ಲು ಗಣಿಗಾರಿಕೆ ಹಾಗೂ ಅನ್ನಭಾಗ್ಯ ಅಕ್ಕಿ ಅಕ್ರಮ ಮಾರಾಟದಂತಹ ಪ್ರಕರಣಗಳು ವರದಿಯಾಗಿದ್ದವು.

ಈ ಹಿನ್ನೆಲೆಯಲ್ಲಿ ಆಡಳಿತಾತ್ಮಕ ಜವಾಬ್ದಾರಿಗಳನ್ನು ಸರಿಯಾಗಿ ನಿರ್ವಹಿಸದ ಕಾರಣಕ್ಕೆ ಕ್ರಮ ಕೈಗೊಳ್ಳಲಾಗಿದ್ದು, ಪಿಎಸ್‌ಐ ಸುನೀಲ್‌ ಅವರನ್ನು ಅಮಾನತು ಮಾಡಲಾಗಿದೆ ಎಂದು ತಿಳಿದುಬಂದಿದೆ.

Prajavikshane

Chandru R Bhanapaur

Leave a Reply

error: Content is protected !!