LOCAL BREAKING : ರಾಷ್ಟ್ರೀಯ ಹೆದ್ದಾರಿ ಪಕ್ಕದ ಗುಂಡಿಯಲ್ಲಿ ಎರಡು ಅಪರಿಚಿತ ಶವ ಪತ್ತೆ : ಕೊಲೆ ಶಂಕೆ!

ಪ್ರಜಾವೀಕ್ಷಣೆ ಡಿಜಿಟಲ್ ಸುದ್ದಿ :
ಕುಕನೂರು, ಏ 13 : ರಾಷ್ಟ್ರೀಯ ಹೆದ್ದಾರಿ 367ರ ಪಕ್ಕದ ಪೈಪ್ ನೈಲ್ ಗೆ ತೆರೆದ ಗುಂಡಿಯೊಂದರಲ್ಲಿ ಇಂದು ಬೆಳಿಗ್ಗೆ ಎರಡು ಅಪರಿಚಿತ ಪುರುಷರ ಶವಗಳು ಪತ್ತೆಯಾಗಿದ್ದು, ಸಾರ್ವಜನಿಕರಲ್ಲಿ ತೀವ್ರ ಆತಂಕ ಮೂಡಿಸಿದೆ.
ಘಟನೆಯ ವಿವರ:
ಇಂದು ಬೆಳಿಗ್ಗೆ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸ್ಥಳೀಯರು, ಗುಂಡಿಯಿಂದ ಅಸಹನೀಯ ವಾಸನೆ ಬರುತ್ತಿರುವುದನ್ನು ಗಮನಿಸಿದ್ದಾರೆ. ಹತ್ತಿರ ಹೋಗಿ ನೋಡಿದಾಗ ಕೊಳೆತ ಸ್ಥಿತಿಯಲ್ಲಿದ್ದ ಎರಡು ಶವಗಳು ಕಂಡುಬಂದಿವೆ. ತಕ್ಷಣವೇ ಸಾರ್ವಜನಿಕರು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
