BREAKING : ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣ : ವಿನಯ್ ಕುಲಕರ್ಣಿಯ ಶಾಸಕ ಸ್ಥಾನ ರದ್ದು!
ಪ್ರಜಾವೀಕ್ಷಣೆ ಡಿಜಿಟಲ್ ಸುದ್ದಿ :
ಬೆಂಗಳೂರು, ಮೇ 2 : ಇಡೀ ರಾಜ್ಯವನ್ನೇ ಬೆಚ್ಚಿ ಬೆಳಿಸಿದ ಪ್ರಕರಣದಲ್ಲಿ ಸುದೀರ್ಘಕಾಲದ ಕಾನೂನು ಹೋರಾಟ ಮತ್ತು ರಾಜಕೀಯ ಜಿದ್ದಾಜಿದ್ದಿನ ಬಳಿಕ ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ ಅವರ ಶಾಸಕತ್ವವನ್ನು ಅನರ್ಹಗೊಳಿಸಿ ಇಂದು (ಶನಿವಾರ) ವಿಧಾನಸಭೆ ಕಾರ್ಯದರ್ಶಿ ಮಹತ್ವದ ಆದೇಶ ಆದೇಶ ಹೊರಡಿಸಿದ್ದಾರೆ.
ಜಿಲ್ಲಾ ಪಂಚಾಯತ್ ಸದಸ್ಯ ಹಾಗೂ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಅವರಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದ ಬಳಿಕ ಕೆಲವೇ ದಿನಗಳಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಈ ಆದೇಶದೊಂದಿಗೆ ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರವು ಅಧಿಕೃತವಾಗಿ ತೆರವಾಗಿದೆ ಎಂದು ತಿಳಿದು ಬಂದಿದೆ.
ಇದು ಭಾರತೀಯ ಸಂವಿಧಾನದ ವಿಧಿ 191(1)(e) ಮತ್ತು ಜನಪ್ರತಿನಿಧಿ ಕಾಯ್ದೆ 1951ರ ಸೆಕ್ಷನ್ 8ರ ಅಡಿಯಲ್ಲಿ ಈ ಅನರ್ಹತೆ ಆದೇಶವನ್ನು ಹೊರಡಿಸಲಾಗಿದ್ದು, ನಿಯಮಗಳ ಪ್ರಕಾರ, ಯಾವುದೇ ಜನಪ್ರತಿನಿಧಿಗೆ ಎರಡು ವರ್ಷ ಅಥವಾ ಅದಕ್ಕಿಂತ ಹೆಚ್ಚು ಅವಧಿಯ ಜೈಲು ಶಿಕ್ಷೆಯಾದಲ್ಲಿ ಅವರು ತಕ್ಷಣವೇ ಶಾಸಕ ಸ್ಥಾನಕ್ಕೆ ಅನರ್ಹರಾಗುತ್ತಾರೆ.