You are currently viewing LOCAL NEWS : ಮಹನೀಯರ ಆದರ್ಶಗಳು ನಾಡಿಗೆ ದಾರಿದೀಪ : ಬಸವಣ್ಣ, ಅಂಬೇಡ್ಕರ್, ರಾಯಣ್ಣರ ಪ್ರತಿಮೆ ಸ್ಥಾಪನೆಗೆ ಭೂಮಿ ಪೂಜೆ!

LOCAL NEWS : ಮಹನೀಯರ ಆದರ್ಶಗಳು ನಾಡಿಗೆ ದಾರಿದೀಪ : ಬಸವಣ್ಣ, ಅಂಬೇಡ್ಕರ್, ರಾಯಣ್ಣರ ಪ್ರತಿಮೆ ಸ್ಥಾಪನೆಗೆ ಭೂಮಿ ಪೂಜೆ!

LOCAL NEWS : ಮಹನೀಯರ ಆದರ್ಶಗಳು ನಾಡಿಗೆ ದಾರಿದೀಪ : ಬಸವಣ್ಣ, ಅಂಬೇಡ್ಕರ್, ರಾಯಣ್ಣರ ಪ್ರತಿಮೆ ಸ್ಥಾಪನೆಗೆ ಭೂಮಿ ಪೂಜೆ!

ಪ್ರಜಾವೀಕ್ಷಣೆ ಡಿಜಿಟಲ್ ಸುದ್ದಿ : 

ಕುಕನೂರು, ಮೇ 04 : ಕ್ರಾಂತಿಕಾರಿ ಸಮಾಜ ಸುಧಾರಕ ಜಗಜ್ಯೋತಿ ಬಸವಣ್ಣ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಅಪ್ರತಿಮ ದೇಶಭಕ್ತ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಭವ್ಯ ಮೂರ್ತಿಗಳ ಪ್ರತಿಷ್ಠಾಪನಾ ಕಾಮಗಾರಿಯ ಭೂಮಿ ಪೂಜಾ ಸಮಾರಂಭವು ಇಂದು (ಸೋಮವಾರ) ಅತ್ಯಂತ ಸಡಗರ-ಸಂಭ್ರಮದಿಂದ ಜರುಗಿತು.

ಪಟ್ಟಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು. ಜಿಲ್ಲಾ ಆಡಳಿತ ಕೊಪ್ಪಳ, ತಾಲೂಕು ಪಂಚಾಯಿತಿ ಕುಕನೂರು ಹಾಗೂ ಪಟ್ಟಣ ಪಂಚಾಯಿತಿ ಕುಕನೂರು ಆಶ್ರಯದಲ್ಲಿ ಸೋಮವಾರ ಕಾರ್ಯಕ್ರಮ ನಡೆಯಿತು.

ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಡಿ ಜಗಜ್ಯೋತಿ ಬಸವೇಶ್ವರ, ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಸಂಗೊಳ್ಳಿ ರಾಯಣ್ಣ ಮೂರ್ತಿಗಳ ಪ್ರತಿಷ್ಠಾಪನೆಗೆ ಭೂಮಿ ಪೂಜೆ ನೆರವೇರಿತು.

ಪಟ್ಟಣ ಪಂಚಾಯಿತಿ ನೂತನ ಕಟ್ಟಡಕ್ಕೂ ಶಂಕುಸ್ಥಾಪನೆ ಮಾಡಲಾಯಿತು. ಸಂಗೊಳ್ಳಿ ರಾಯಣ್ಣ ವೃತ್ತದಿಂದ ಎಪಿಎಂಸಿ ಆವರಣದ ಶೀತಲ ಗೃಹದವರೆಗೆ ಪಾದಯಾತ್ರೆ ನಡೆಯಿತು. ಬಳಿಕ ಕೋಲ್ಡ್ ಸ್ಟೋರೇಜ್ ಉದ್ಘಾಟನೆ ನೆರವೇರಿತು.

ಬಳಿಕ ಎಪಿಎಂಸಿ ಆವರಣದಲ್ಲಿ ವೇದಿಕೆ ಕಾರ್ಯಕ್ರಮ ಆಯೋಜಿಸಲಾಯಿತು. ರಾಜ್ಯ ಸರ್ಕಾರದ ಕೃಷಿ ಮಾರುಕಟ್ಟೆ ಇಲಾಖೆ ಹಾಗೂ ನಬಾರ್ಡ್ RIDF–29 ಯೋಜನೆಯಡಿ ನಿರ್ಮಿಸಲಾದ ಶೀತಲ ಗೃಹವನ್ನು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಮತ್ತು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಉದ್ಘಾಟಿಸಿದರು.

ಸಚಿವ ಶಿವಾನಂದ ಪಾಟೀಲ್ ಮಾತನಾಡಿ, ‘ರಾಜ್ಯದಲ್ಲಿ 20 ಶೀತಲ ಗೃಹಗಳನ್ನು ನಿರ್ಮಿಸಲಾಗುತ್ತಿದೆ. ದವಸಧಾನ್ಯ, ಹಣ್ಣು ಹಾಗೂ ತರಕಾರಿ ಸಂಗ್ರಹಕ್ಕೆ ಇದರಿಂದ ರೈತರಿಗೆ ಅನುಕೂಲವಾಗಲಿದೆ ಎಂದರು. ಬೆಳೆಗಳಿಗೆ ಯೋಗ್ಯ ಬೆಲೆ ಸಿಗದ ಹಿನ್ನೆಲೆ ಶೀತಲ ಗೃಹಗಳ ಅವಶ್ಯಕತೆ ಹೆಚ್ಚಾಗಿದೆ ಎಂದು ಹೇಳಿದರು.

ಎಪಿಎಂಸಿ ವ್ಯವಸ್ಥೆಯನ್ನು ದುರ್ಬಲಗೊಳಿಸುವ ಪ್ರಯತ್ನಗಳಿಗೆ ರಾಜ್ಯ ಸರ್ಕಾರ ವಿರೋಧ ವ್ಯಕ್ತಪಡಿಸಿದೆ ಎಂದರು. ಶ್ರಮಿಕ ಭವನ ನಿರ್ಮಾಣ ಹಾಗೂ ಕುಕನೂರು ಎಪಿಎಂಸಿ ಆವರಣಕ್ಕೆ ಅನ್ನದಾನೀಶ್ವರ ಮಹಾ ಸ್ವಾಮಿಗಳ ಎಂದು ನಾಮಕರಣ ಮಾಡಲಾಗುವುದು ಎಂದರು.

ಯಲಬುರ್ಗಾ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಮಾತನಾಡಿ, “2300 ಮೆಟ್ರಿಕ್ ಟನ್ ಸಾಮರ್ಥ್ಯದ ಶೀತಲ ಗೃಹ ಈ ಭಾಗದ ರೈತರಿಗೆ ಅತ್ಯಂತ ಅನುಕೂಲಕರವಾಗಲಿದೆ ಎಂದರು.

ಜಮೀನು ಕೊರತೆಯಿಂದ ಸರ್ಕಾರಿ ಕಚೇರಿ ಕಾಮಗಾರಿಗಳು ವಿಳಂಬವಾಗಿವೆ. ಗುದ್ನೇಪ್ಪನ ಮಠದ ರುದ್ರಮುನೇಶ್ವರ ಜಾಗದಲ್ಲಿ ಕಚೇರಿಗಳನ್ನು ಸ್ಥಾಪಿಸಲು ಇದ್ದ ಒಂದು ಕಾನೂನು ತಡಕು ಕೂಡ ನಿವಾರಣೆಯಾಗಿದ್ದು, ಅತಿ ಶೀಘ್ರದಲ್ಲಿಯೇ ಕ್ರಮ ತಾಲೂಕ ಕಟ್ಟಡಗಳ ಸಂಕೀರ್ಣ, ನ್ಯಾಯಾಲಯ, ಕ್ರೀಡಾಂಗಣ ಎಲ್ಲವೂ ಒಂದೇ ಕಡೆ ಆಗುತ್ತದೆ. ಇದಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ತಹಸೀಲ್ದಾರ್ ಕಚೇರಿಗೆ ₹18 ಕೋಟಿ, 100 ಹಾಸಿಗೆಗಳ ಸರ್ಕಾರಿ ಆಸ್ಪತ್ರೆಗೆ ₹40 ಕೋಟಿ ಮಂಜೂರಾಗಿದೆ. ಬುದ್ಧ–ಬಸವ–ಅಂಬೇಡ್ಕರ್ ಭವನಕ್ಕೆ ₹18 ಕೋಟಿ, ಕ್ರೀಡಾಂಗಣಕ್ಕೆ ₹8.5 ಕೋಟಿ ಅನುದಾನ ನೀಡಲಾಗಿದೆ ಎಂದರು. ಜೂನ್‌ ಎರಡನೇಯ ವಾರ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಆಹ್ವಾನಿಸುವುದಾಗಿ ತಿಳಿಸಿದರು.

“ಮಹನೀಯರ ಮೂರ್ತಿಗಳನ್ನು ವೃತ್ತಗಳಲ್ಲಿ ನಿರ್ಮಿಸುವುದಷ್ಟೇ ಸಾಕಾಗುವುದಿಲ್ಲ; ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದರ ಜೊತೆಗೆ ನಿಮ್ಮ ಹೃದಯ ಮಂದಿರದಲ್ಲಿ ನೆಲೆಸಿವಂತೆ ಮಾಡಿಕೊಳ್ಳಬೇಕು ಎಂದರು. “ಕಿಚ್ಚಿಲ್ಲದ ಬೇಗೆಯಲ್ಲಿ ಬೆಂದನವ್ವ” ಸ್ಮರಣ ಸಂಚಿಕೆಯ ಮಹತ್ವವನ್ನು ವಿವರಿಸಿದರು. ಶಾಸಕ ರಾಯರಡ್ಡಿ ದೂರದೃಷ್ಟಿಯ ನಾಯಕರು”

ಅಭಿನವ ಗವಿ ಶ್ರೀ

ಅಭಿನವ ಗವಿಶ್ರೀ ಸ್ವಾಮೀಜಿ, ಕೊಪ್ಪಳ ಗವಿಮಠ.

ಕೊಪ್ಪಳ ಗವಿಮಠದ ಅಭಿನವ ಶ್ರೀ ಸ್ವಾಮೀಜಿ ಹಾಗೂ ಮುಂಡರಗಿ ಅನ್ನದಾನೀಶ್ವರ ಮಠದ ನಾಡೋಜ ಅನ್ನದಾನೀಶ್ವರ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಿದರು.

ಕೊಪ್ಪಳ ಸಂಸದ ರಾಜಶೇಖರ ಹಿಟ್ನಾಳ ಮಾತನಾಡಿ, ‘ಶಾಸಕ ರಾಯರಡ್ಡಿ ಅವರ ಅಭಿವೃದ್ಧಿ ಕಾರ್ಯಗಳನ್ನು ಪ್ರಶಂಸಿಸಿದರು.

ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ 13 ಮಂದಿಗೆ ‘ಬಸವಶ್ರೀ’ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಅಕ್ಕಮಹಾದೇವಿ ಕುರಿತ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಾಯಿತು.

ಈ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಸುರೇಶ್ ಜಿ. ಇಟ್ನಾಳ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮ್ ಎಲ್. ಅರಶಿದ್ದಿ, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಲೀಲಾವತಿ ಮುಧೋಳ್, ಉಪಾಧ್ಯಕ್ಷೆ ಮಂಜುಳಾ ಕಲ್ಮನಿ, ತಹಸೀಲ್ದಾರ್ ಬಸವರಾಜ್ ಬೆಣ್ಣೆಶಿರೂರ, ಡಿವೈಎಸ್ಪಿ ಮುತ್ತಣ್ಣ ಸವರಗೋಳ, ಯಲಬುರ್ಗಾ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ನೀಲಪ್ರಭಾ, ಕುಕನೂರ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಸಂತೋಷ ಪಾಟೀಲ ಬಿರಾದಾರ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾಗೇಶ್ ಹಾಗೂ ಕಾಂಗ್ರೆಸ್ ಮುಖಂಡರಾದ ಹಣಮಂತರಾಯಗೌಡ ಚಂಡೂರ್, ಸತ್ಯನಾರಾಯಣಪ್ಪ ಹರಪನಹಳ್ಳಿ, ಯಂಕಣ್ಣ ಯರಾಶಿ, ಸಂಗಮೇಶ ಗುತ್ತಿ ಸೇರಿದಂತೆ ಪಟ್ಟಣ ಪಂಚಾಯಿತಿ ಸದಸ್ಯರು, ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

error: Content is protected !!