You are currently viewing BREAKING : ಹಿಂದೂ ಯುವತಿಯನ್ನು ಪ್ರೀತಿಸಿದ ಆರೋಪ: ಮುಸ್ಲಿಂ ಯುವಕನ ಮೇಲೆ ಹಲ್ಲೆ! : 30 ಜನರ ಮೇಲೆ ಪ್ರಕರಣ ದಾಖಲು!

BREAKING : ಹಿಂದೂ ಯುವತಿಯನ್ನು ಪ್ರೀತಿಸಿದ ಆರೋಪ: ಮುಸ್ಲಿಂ ಯುವಕನ ಮೇಲೆ ಹಲ್ಲೆ! : 30 ಜನರ ಮೇಲೆ ಪ್ರಕರಣ ದಾಖಲು!

BREAKING : ಹಿಂದೂ ಯುವತಿಯನ್ನು ಪ್ರೀತಿಸಿದ ಆರೋಪ: ಮುಸ್ಲಿಂ ಯುವಕನ ಮೇಲೆ ಹಲ್ಲೆ! : 30 ಜನರ ಮೇಲೆ ಪ್ರಕರಣ ದಾಖಲು!

ಪ್ರಜಾವೀಕ್ಷಣೆ ಡಿಜಿಟಲ್ ಸುದ್ದಿ : 

ಕೊಪ್ಪಳ, ಮೇ 07 : ಹಿಂದೂ ಯುವತಿಯನ್ನು ಪ್ರೀತಿಸುತ್ತಿದ್ದ ಆರೋಪದ ಹಿನ್ನೆಲೆ ಮುಸ್ಲಿಂ ಯುವಕನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ನಗರ ಪೊಲೀಸ್ ಠಾಣೆಯಲ್ಲಿ 30ಕ್ಕೂ ಹೆಚ್ಚು ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

ಮೊಬೈಲ್ ಎಜೆನ್ಸಿಯೊಂದರಲ್ಲಿ ಕೆಲಸ ಮಾಡುತ್ತಿರುವ 22 ವರ್ಷದ ಸಮೀರ್ ಅಹಮದ್ ಮೂಲಿಮನಿ ಅವರು ಮೇ 6ರಂದು ರಾತ್ರಿ 8.30ರ ಸುಮಾರಿಗೆ ತಾನು ಪ್ರೀತಿಸುತ್ತಿದ್ದ 17 ವರ್ಷದ ಬಾಲಕಿಯೊಂದಿಗೆ ಹೋಟೆಲ್‌ನಲ್ಲಿ ಕುಳಿತಿದ್ದ ವೇಳೆ ಕೆಲ ಯುವಕರು ಬಂದು ಇಬ್ಬರ ಹೆಸರುಗಳನ್ನು ಕೇಳಿದ್ದಾರೆ. ಪ್ರೀತಿಸುವ ವಿಷಯ ತಿಳಿಸಿದ ಬಳಿಕ ಹಲ್ಲೆ ನಡೆಸಲಾಗಿದೆ ಎಂದು ಸಮೀರ್ ದೂರಿನಲ್ಲಿ ತಿಳಿಸಿದ್ದಾರೆ.

“ನನ್ನನ್ನು ಬೈಕ್‌ನಲ್ಲಿ ಕಣ್ಣಿಗೆ ಬಟ್ಟೆ ಕಟ್ಟಿ ಹೊಸಪೇಟೆ ಕಡೆ ರಾಷ್ಟ್ರೀಯ ಹೆದ್ದಾರಿ ಬಳಿ ಕರೆದುಕೊಂಡು ಹೋಗಿ, ಹಿಂದೂ ಹುಡುಗಿಯನ್ನು ಪ್ರೀತಿಸುತ್ತೀಯಾ ಎಂದು ನಿಂದಿಸಿ ಹಲ್ಲೆ ಮಾಡಿದ್ದಾರೆ. ಮತ್ತೊಮ್ಮೆ ಆಕೆಯ ಜೊತೆ ಕಾಣಿಸಿಕೊಂಡರೆ ಜೀವಂತವಾಗಿ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾರೆ” ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಹಲ್ಲೆ ನಡೆಸಿದ ಬಳಿಕ ಕಣ್ಣಿಗೆ ಬಟ್ಟೆ ಕಟ್ಟಿ ಜಿಲ್ಲಾ ಆಸ್ಪತ್ರೆ ಸಮೀಪ ಬಿಟ್ಟು ಹೋಗಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.

ಬಾಲಕಿಯ ಸಹೋದರರಾದ ಆಶೀಸ್, ನಿಲೇಶ್ ಸೇರಿದಂತೆ ಇತರ 30 ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು, ಈ ಸಂಬಂಧ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

Prajavikshane

Chandru R Bhanapaur

Leave a Reply

error: Content is protected !!