FLASH NEWS : ಮಹೀಂದ್ರಾ ಥಾರ್ ಹರಿದು ವಿದ್ಯಾರ್ಥಿನಿ ಸಾವು!
ಪ್ರಜಾವೀಕ್ಷಣೆ ಡಿಜಿಟಲ್ ಸುದ್ದಿ :
ರಾಯಚೂರು, ಮೇ 09 : ಜಿಲ್ಲೆಯ ಸಿಂಧನೂರಿನಲ್ಲಿ ಮಹೀಂದ್ರಾ ಥಾರ್ ವಾಹನ ಹರಿದು ಕಾಲೇಜು ವಿದ್ಯಾರ್ಥಿನಿಯೊಬ್ಬಳು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಅರಗಿನಮರ ಕ್ಯಾಂಪ್ ನಿವಾಸಿ ಭೂಮಿಕಾ (17) ಮೃತಪಟ್ಟ ವಿದ್ಯಾರ್ಥಿನಿ. ಮೇಘನಾ, ಮಹೇಶ್ವರಿ ಹಾಗೂ ಜಹೀದಾ ಗಾಯಗೊಂಡ ವಿದ್ಯಾರ್ಥಿನಿಯರು ಎಂದು ತಿಳಿದುಬಂದಿದೆ.
ಕಾಲೇಜು ಮುಗಿಸಿ ವಿದ್ಯಾರ್ಥಿನಿಯರು ಮನೆಗೆ ತೆರಳುತ್ತಿದ್ದ ವೇಳೆ, ಚಾಲಕ ರಿವರ್ಸ್ ತೆಗೆದುಕೊಳ್ಳುವಾಗ ಅಜಾಗರೂಕತೆಯಿಂದ ವಾಹನ ನಿಯಂತ್ರಣ ತಪ್ಪಿ ವಿದ್ಯಾರ್ಥಿನಿಯರ ಮೇಲೆ ಹರಿದಿದೆ ಎನ್ನಲಾಗಿದೆ. ಪರಿಣಾಮ ಭೂಮಿಕಾ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಗಾಯಗೊಂಡ ಮೂವರು ವಿದ್ಯಾರ್ಥಿನಿಯರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಗೆ ಸಂಬಂಧಿಸಿ ಸಿಂಧನೂರು ಸಂಚಾರ ಠಾಣೆ ಪೊಲೀಸರು ವಾಹನ ಚಾಲಕನನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ. ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ.