ಕೊಪ್ಪಳ | ಡಿ. ದೇವರಾಜ ಅರಸು ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

PV ನ್ಯೂಸ್ ಡಿಜಿಟಲ್ :
ಕೊಪ್ಪಳ, ಮೇ 20 : ಕರ್ನಾಟಕ ಸರ್ಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕೊಪ್ಪಳ ಇವರ ವತಿಯಿಂದ 2026-27ನೇ ಸಾಲಿನ ಡಿ. ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕ ಹಾಗೂ ಬಾಲಕಿಯರ ವಸತಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
