You are currently viewing FLASH NEWS : ​ಸಚಿವ ಶಿವರಾಜ್ ತಂಗಡಗಿ ಹೇಳಿಕೆಗೆ ಬಿಜೆಪಿ ಜಿಲ್ಲಾ ಅಧ್ಯಕ್ಷ ನವೀನ ಆಕ್ಷೇಪ! 

FLASH NEWS : ​ಸಚಿವ ಶಿವರಾಜ್ ತಂಗಡಗಿ ಹೇಳಿಕೆಗೆ ಬಿಜೆಪಿ ಜಿಲ್ಲಾ ಅಧ್ಯಕ್ಷ ನವೀನ ಆಕ್ಷೇಪ! 

FLASH NEWS : ​ಸಚಿವ ಶಿವರಾಜ್ ತಂಗಡಗಿ ಹೇಳಿಕೆಗೆ ಬಿಜೆಪಿ ಜಿಲ್ಲಾ ಅಧ್ಯಕ್ಷ ನವೀನ ಆಕ್ಷೇಪ! 

PV ನ್ಯೂಸ್ ಡಿಜಿಟಲ್ :

ಕೊಪ್ಪಳ, ಮೇ 21 : ಸಚಿವ ಶಿವರಾಜ್ ತಂಗಡಗಿ ಅವರ ಹೇಳಿಕೆ ಅತ್ಯಂತ ದುರಹಂಕಾರದಿಂದ ಕೂಡಿದೆ. ದೇಶದ ಕೋಟ್ಯಂತರ ಬಡವರು, ಕಾರ್ಮಿಕರು ಮತ್ತು ಮಧ್ಯಮ ವರ್ಗದ ಜನರಿಗೆ ಸೈಕಲ್ ಕೇವಲ ಒಂದು ವಾಹನವಲ್ಲ, ಅದು ಅವರ ಪ್ರಾಮಾಣಿಕ ಬದುಕಿನ ಮತ್ತು ಸ್ವಾಭಿಮಾನದ ಸಂಕೇತ. ಸಾಮಾನ್ಯ ಜನರ ಶ್ರಮ ಮತ್ತು ಬದುಕನ್ನು ಹೀಗಳೆಯುವುದು ಕಾಂಗ್ರೆಸ್ ಸಂಸ್ಕೃತಿಯನ್ನು ತೋರಿಸುತ್ತದೆ ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷ ನವೀನಕುಮಾರ ಈ ಗುಳಗಣ್ಣವರ ಆಕ್ಷೇಪ ವ್ಯಕ್ತಪಡಿಸಿದರು.

​ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ದೇಶದ ಆರ್ಥಿಕತೆ ಹಳ್ಳ ಹಿಡಿದಿದೆ ಎಂದು ಸುಳ್ಳು ಹರಡುವುದನ್ನು ಬಿಟ್ಟು, ನಿಮ್ಮದೇ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಟ್ಟುಕೊಳ್ಳಲು ಪ್ರಧಾನಿ ಮೋದಿಯವರ ಆಡಳಿತವನ್ನು ದೂಷಿಸುವುದನ್ನು ನಿಲ್ಲಿಸಿ ಎಂದರು.

ಜಾಗತಿಕ ಮಟ್ಟದಲ್ಲಿ ಭಾರತ ಇಂದು ಬಲಿಷ್ಠ ಆರ್ಥಿಕತೆಯಾಗಿ ಹೊರಹೊಮ್ಮುತ್ತಿರುವುದು ಇಡೀ ಜಗತ್ತಿಗೆ ತಿಳಿದಿದೆ. ಆದರೆ, ರಾಜ್ಯದಲ್ಲಿ ಗ್ಯಾರಂಟಿಗಳ ಹೆಸರಲ್ಲಿ ಅಭಿವೃದ್ಧಿ ಕುಂಠಿತಗೊಳಿಸಿ, ಜನರ ಗಮನ ಬೇರೆಡೆ ಸೆಳೆಯಲು ಸಚಿವರು ಇಂತಹ ಬಾಲಿಶ ಮತ್ತು ಬೇಜವಾಬ್ದಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಕಟುವಾಗಿ ಟೀಕಿಸಿದರು.

​ಸಾಮಾನ್ಯ ಜನರ ಸವಾರಿಯನ್ನು ಅವಮಾನಿಸಿದ ಸಚಿವ ತಂಗಡಗಿಯವರು ತಕ್ಷಣವೇ ದೇಶದ ಜನತೆಗೆ ಕ್ಷಮೆಯಾಚಿಸಬೇಕು. ಜಾಗತಿಕವಾಗಿ ಕಠಿಣ ಪರಿಸ್ಥಿತಿಗಳಿದ್ದರೂ (ಯುದ್ಧ ಹಾಗೂ ಕೋವಿಡ್ ನಂತರದ ಆರ್ಥಿಕ ಬಿಕ್ಕಟ್ಟು), ಭಾರತದ ಆರ್ಥಿಕತೆ ಅತ್ಯಂತ ವೇಗವಾಗಿ ಬೆಳೆಯುತ್ತಿದೆ ಎಂಬುದಕ್ಕೆ ಜಾಗತಿಕ ಸಂಸ್ಥೆಗಳೇ ಸಾಕ್ಷಿ ನುಡಿಯುತ್ತಿವೆ ಎಂದರು.

Leave a Reply

error: Content is protected !!