You are currently viewing KOPPAL NEWS : ಕೊಪ್ಪಳ | ಗವಿಸಿದ್ದಪ್ಪ ಹೊಸಮನಿ ಅವರಿಗೆ  ಸಹಾಯಕ ನಿರ್ದೇಶಕರಾಗಿ ಪದೋನ್ನತಿ!

KOPPAL NEWS : ಕೊಪ್ಪಳ | ಗವಿಸಿದ್ದಪ್ಪ ಹೊಸಮನಿ ಅವರಿಗೆ ಸಹಾಯಕ ನಿರ್ದೇಶಕರಾಗಿ ಪದೋನ್ನತಿ!

KOPPAL NEWS : ಗವಿಸಿದ್ದಪ್ಪ ಹೊಸಮನಿಗೆ ಸಹಾಯಕ ನಿರ್ದೇಶಕರಾಗಿ ಪದೋನ್ನತಿ!

PV ನ್ಯೂಸ್ ಡಿಜಿಟಲ್ :

ಕೊಪ್ಪಳ, ಮೇ 22 : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕೊಪ್ಪಳ ಕಚೇರಿಯಲ್ಲಿ ಸಹಾಯಕ ನಿರ್ದೇಶಕರ ಹುದ್ದೆಯ ಹೆಚ್ಚುವರಿ ಪ್ರಭಾರ ನಿರ್ವಹಿಸುತ್ತಿದ್ದ ಗವಿಸಿದ್ದಪ್ಪ ಹೊಸಮನಿ ಅವರಿಗೆ ಸಹಾಯಕ ನಿರ್ದೇಶಕರ ಹುದ್ದೆಗೆ ಪದೋನ್ನತಿ ನೀಡಲಾಗಿದೆ.

ರಾಯಚೂರು ಹಿರಿಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ವಾರ್ತಾ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದ ಅವರನ್ನು ಸ್ಥಾನಪನ್ನ ಮುಂಬಡ್ತಿ ನೀಡಿ, ಕೊಪ್ಪಳ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ನಿಯುಕ್ತಿಗೊಳಿಸಿ ಇಲಾಖೆಯ ಆಯುಕ್ತ ಹೇಮಂತ್ ನಿಂಬಾಳ್ಕರ ಮೇ 16ರಂದು ಆದೇಶ ಹೊರಡಿಸಿದ್ದಾರೆ.

ಮೂಲತಃ ಕುಷ್ಟಗಿ ತಾಲೂಕಿನ ಗೊರೆಬಿಹಾಳ ಗ್ರಾಮದವರಾದ ಗವಿಸಿದ್ದಪ್ಪ ಹೊಸಮನಿ ಅವರು 2016ರಲ್ಲಿ ವಾರ್ತಾ ಇಲಾಖೆಗೆ ಸೇರ್ಪಡೆಯಾಗಿದ್ದರು. ವಾರ್ತಾ ಸಹಾಯಕರ ಹುದ್ದೆಯ ಜೊತೆಗೆ ಪ್ರಭಾರಿ ಜಿಲ್ಲಾ ವಾರ್ತಾಧಿಕಾರಿಯಾಗಿ ಬೀದರ, ವಿಜಯಪುರ, ರಾಯಚೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಸೇವೆ ಸಲ್ಲಿಸಿರುವ ಅನುಭವ ಹೊಂದಿದ್ದಾರೆ.

Leave a Reply

error: Content is protected !!