You are currently viewing KOPPAL NEWS : ಸರ್ಕಾರಿ ಶಾಲೆಗಳ ವಿಲೀನ ವಿರೋಧಿಸಿ ಪ್ರತಿಭಟನೆ: KPS ಮ್ಯಾಗ್ನೆಟ್ ಯೋಜನೆ ಹಿಂಪಡೆಯಲು ಆಗ್ರಹ!

KOPPAL NEWS : ಸರ್ಕಾರಿ ಶಾಲೆಗಳ ವಿಲೀನ ವಿರೋಧಿಸಿ ಪ್ರತಿಭಟನೆ: KPS ಮ್ಯಾಗ್ನೆಟ್ ಯೋಜನೆ ಹಿಂಪಡೆಯಲು ಆಗ್ರಹ!

KOPPAL NEWS : ಸರ್ಕಾರಿ ಶಾಲೆಗಳ ವಿಲೀನ ವಿರೋಧಿಸಿ ಪ್ರತಿಭಟನೆ: KPS ಮ್ಯಾಗ್ನೆಟ್ ಯೋಜನೆ ಹಿಂಪಡೆಯಲು ಆಗ್ರಹ!

PV ನ್ಯೂಸ್‌ : 

ಕೊಪ್ಪಳ, ಮೇ 27 : ಕೆಪಿಎಸ್ ಮ್ಯಾಗ್ನೆಟ್ ಯೋಜನೆಯಡಿ ಜಿಲ್ಲೆಯ 100ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸಿ ಮುಚ್ಚಲು ಮುಂದಾಗಿರುವುದನ್ನು ಖಂಡಿಸಿ ಎಐಡಿಎಸ್ಓ ಹಾಗೂ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯ ನೇತೃತ್ವದಲ್ಲಿ ಗ್ರಾಮಸ್ಥರು, ಪೋಷಕರು ಮತ್ತು ವಿದ್ಯಾರ್ಥಿಗಳು ಬುಧುವಾರ ಪ್ರತಿಭಟನೆ ನಡೆಸಿದರು.

ನಗರದ ಕನಕದಾಸ ವೃತ್ತದಿಂದ ಅಶೋಕ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ಗ್ರಾಮೀಣ ಪ್ರದೇಶದ ಶಾಲೆಗಳನ್ನು ಉಳಿಸಬೇಕು ಎಂದು ಆಗ್ರಹಿಸಿದರು.

ಬಳಿಕ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮನವಿ ಸ್ವೀಕರಿಸಿದರು.

ಈ ವೇಳೆ ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿಯ ರಾಜ್ಯಾಧ್ಯಕ್ಷ ಅಲ್ಲಮಪ್ರಭು ಬೆಟ್ಟದೂರು ಮಾತನಾಡಿ, “ಸರ್ಕಾರ ಕೆಪಿಎಸ್ ಮ್ಯಾಗ್ನೆಟ್ ಯೋಜನೆಯ ಮೂಲಕ ಸುತ್ತಮುತ್ತಲಿನ ಶಾಲೆಗಳನ್ನು ವಿಲೀನಗೊಳಿಸಲು ಮುಂದಾಗಿದೆ. ಇದರಿಂದ ಬಡ ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗಲಿದೆ. ಜಿಲ್ಲೆಯಲ್ಲಿ ಒಂದೇ ಒಂದು ಶಾಲೆಯನ್ನೂ ಮುಚ್ಚಬಾರದು,” ಎಂದು ಒತ್ತಾಯಿಸಿದರು.

ಎಐಡಿಎಸ್ಓ ರಾಜ್ಯ ಸಮಿತಿಯ ಸದಸ್ಯೆ ಸಿಂಧೂ ಕೌದಿ ಮಾತನಾಡಿ, “3ರಿಂದ 5 ಕಿ.ಮೀ ವ್ಯಾಪ್ತಿಯ ಶಾಲೆಗಳನ್ನು ಮ್ಯಾಗ್ನೆಟ್ ಶಾಲೆಗಳಿಗೆ ವಿಲೀನಗೊಳಿಸುವ ಆದೇಶ ಜಾರಿಯಲ್ಲಿದೆ. ಕೊಪ್ಪಳ ಜಿಲ್ಲೆಯ ಹಲವು ಗ್ರಾಮಗಳ ಶಾಲೆಗಳು ಇದರಿಂದ ಮುಚ್ಚುವ ಸ್ಥಿತಿ ಎದುರಿಸುತ್ತಿವೆ,” ಎಂದು ಹೇಳಿದರು.

ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯ ಜಿಲ್ಲಾ ಮುಖಂಡ ಶರಣು ಗಡ್ಡಿ ಮಾತನಾಡಿ, “ಗ್ರಾಮೀಣ ಪ್ರದೇಶದ ಬಡ ಹಾಗೂ ಹೆಣ್ಣುಮಕ್ಕಳ ಶಿಕ್ಷಣಕ್ಕೆ ಇದು ಅಡ್ಡಿಯಾಗಲಿದೆ. ಶಾಲೆಗಳನ್ನು ಉಳಿಸುವವರೆಗೆ ಹೋರಾಟ ಮುಂದುವರಿಯಲಿದೆ,” ಎಂದು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎ.ವಿ. ಕಣವಿ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಎಐಡಿಎಸ್ಓ ಜಿಲ್ಲಾ ಸಂಚಾಲಕ ಗಂಗರಾಜ ಅಳ್ಳಳ್ಳಿ, ಪ್ರದೀಪ್, ಶರಣು ಪಾಟೀಲ್, ಶಾರದ ಗಡ್ಡಿ ಸೇರಿದಂತೆ ವಿವಿಧ ಗ್ರಾಮಗಳ ಪೋಷಕರು ಹಾಗೂ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Leave a Reply

error: Content is protected !!