You are currently viewing BIG BREAKING : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ! 

BIG BREAKING : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ! 

BIG BREAKING : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ! 

PV ನ್ಯೂಸ್ : 

ಬೆಂಗಳೂರು, ಮೇ 28 : ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿರುವ ಪ್ರಮುಖ ಬೆಳವಣಿಗೆಯೊಂದರಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ.

 ಇಂದು ರಾಜಭವನಕ್ಕೆ ತೆರಳಿ ರಾಜೀನಾಮೆ ಪತ್ರ ಸಲ್ಲಿಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜ್ಯಪಾಲರ ಭವನಕ್ಕೆ ತೆರಳಿ ರಾಜೀನಾಮೆ ಸಲ್ಲಿಸಿದ್ದೇನೆ” ಎಂದು ಅಧಿಕೃತವಾಗಿ ಘೋಷಣೆ ಮಾಡಿದರು.

ರಾಜೀನಾಮೆ ಸಲ್ಲಿಕೆಯ ಸಂದರ್ಭದ ಕುರಿತು ಮಾಹಿತಿ ನೀಡಿದ ಸಿದ್ದರಾಮಯ್ಯ ಅವರು, “ರಾಜ್ಯಪಾಲರು ಸದ್ಯ ಬೆಂಗಳೂರಿನಲ್ಲಿ ಇಲ್ಲ. ಇಂದು ರಾತ್ರಿ ಅವರು ನಗರಕ್ಕೆ ವಾಪಸ್ ಆಗಲಿದ್ದಾರೆ ಎಂದು ರಾಜಭವನದ ಕಚೇರಿ ಸಿಬ್ಬಂದಿ ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ನನ್ನ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ಕಾರ್ಯದರ್ಶಿಯವರಿಗೆ ಹಸ್ತಾಂತರಿಸಿ ಬಂದಿದ್ದೇನೆ” ಎಂದು ಸ್ಪಷ್ಟಪಡಿಸಿದರು.

Prajavikshane

Chandru R Bhanapaur

Leave a Reply

error: Content is protected !!