You are currently viewing BIG UPDATE : ರಾಜೀನಾಮೆ ನೀಡಿದ ಸಿದ್ದರಾಮಯ್ಯ : ಜೂನ್ 1ಕ್ಕೆ ನೂತನ ಮುಖ್ಯಮಂತ್ರಿಯಾಗಿ ಡಿಕೆಶಿ ಪಟ್ಟಾಭಿಷೇಕ!

BIG UPDATE : ರಾಜೀನಾಮೆ ನೀಡಿದ ಸಿದ್ದರಾಮಯ್ಯ : ಜೂನ್ 1ಕ್ಕೆ ನೂತನ ಮುಖ್ಯಮಂತ್ರಿಯಾಗಿ ಡಿಕೆಶಿ ಪಟ್ಟಾಭಿಷೇಕ!

BIG UPDATE : ರಾಜೀನಾಮೆ ನೀಡಿದ ಸಿದ್ದರಾಮಯ್ಯ : ಜೂನ್ 1ಕ್ಕೆ ನೂತನ ಮುಖ್ಯಮಂತ್ರಿಯಾಗಿ ಡಿಕೆಶಿ ಪಟ್ಟಾಭಿಷೇಕ!

PV ನ್ಯೂಸ್ : 

ಬೆಂಗಳೂರು, ಮೇ 29  : ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಕಾಂಗ್ರೆಸ್‌ ಪಕ್ಷದಲ್ಲಿನ ನಾಯಕತ್ವ ಬದಲಾವಣೆಯ ಪ್ರಕ್ರಿಯೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಮ್ಮ ಸ್ಥಾನಕ್ಕೆ ಗುರುವಾರ (ಮೇ 28, 2026) ರಾಜೀನಾಮೆ ಸಲ್ಲಿಸಿದ ಬಳಿಕ, ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೋಮವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಸಿದ್ಧರಾಮಯ್ಯ ಅವರು ಲೋಕ ಭವನದಲ್ಲಿ ರಾಜ್ಯಪಾಲರ ವಿಶೇಷ ಕಾರ್ಯದರ್ಶಿಯವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸುವ ಮೂಲಕ ಅಧಿಕಾರದಿಂದ ಕೆಳಗಿಳಿಯಲು ದಾರಿ ಮಾಡಿಕೊಟ್ಟಿದ್ದಾರೆ. ಪಕ್ಷದ ಹೈಕಮಾಂಡ್ ಸೂಚನೆಯ ಮೇರೆಗೆ ಈ ನಿರ್ಧಾರ ಕೈಗೊಂಡಿರುವುದಾಗಿ ಸಿದ್ಧರಾಮಯ್ಯ ಖಚಿತಪಡಿಸಿದ್ದಾರೆ. ತಾವು ರಾಜ್ಯ ರಾಜಕಾರಣದಲ್ಲೇ ಮುಂದುವರಿಯುವುದಾಗಿ ಸ್ಪಷ್ಟಪಡಿಸಿರುವ ಅವರು, ಶಾಸಕನಾಗಿ ಇನ್ನೂ ಎರಡು ವರ್ಷಗಳ ಕಾಲಾವಧಿ ಬಾಕಿ ಇರುವುದರಿಂದ ರಾಷ್ಟ್ರೀಯ ರಾಜಕಾರಣಕ್ಕೆ (ರಾಜ್ಯಸಭೆಗೆ) ಹೋಗುವ ಆಫರ್ ಅನ್ನು ನಯವಾಗಿ ನಿರಾಕರಿಸಿದ್ದಾರೆ ಎನ್ನಲಾಗಿದೆ.

ಮೂಲಗಳ ಪ್ರಕಾರ, ಡಿ.ಕೆ. ಶಿವಕುಮಾರ್ ಅವರು ಸೋಮವಾರ (ಜೂನ್‌ 1 ರಂದು) ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ದಟ್ಟವಾಗಿದೆ. ಈ ಸಂಬಂಧದ ಅಧಿಕೃತ ಘೋಷಣೆ ಮತ್ತು ಸಿದ್ಧತೆಗಳು ಬಿರುಸಿನಿಂದ ಸಾಗಿವೆ. ಕಳೆದ ಮೂರು ವರ್ಷಗಳ ಸಿದ್ಧರಾಮಯ್ಯ ಅವರ ಆಡಳಿತದ ಬಳಿಕ, ಕಾಂಗ್ರೆಸ್ ಪಕ್ಷದ ಆಂತರಿಕ ಅಧಿಕಾರ ಹಂಚಿಕೆ ಸೂತ್ರದಂತೆ ಈ ಬದಲಾವಣೆ ಸಂಭವಿಸಿದ್ದು, ಈ ಬೆಳವಣಿಗೆಯು ರಾಜ್ಯದಲ್ಲಿ ನೂತನ ಸರ್ಕಾರದ ರಚನೆಗೆ ವೇದಿಕೆ ಕಲ್ಪಿಸಿದೆ.

Leave a Reply

error: Content is protected !!