You are currently viewing LOCAL NEWS : ‘ಅವರದ್ದೇ ಕಾರ್ಯಕರ್ತರನ್ನು ನಂಬದ ಕಾಂಗ್ರೆಸ್, ಶಾಸಕರೇ ಬಿ.ಎಲ್.ಎಗಳಾಗಿ ನೇಮಕ’ : ಹಾಲಪ್ಪ ಆಚಾರ್” ವ್ಯಂಗ್ಯ! 

LOCAL NEWS : ‘ಅವರದ್ದೇ ಕಾರ್ಯಕರ್ತರನ್ನು ನಂಬದ ಕಾಂಗ್ರೆಸ್, ಶಾಸಕರೇ ಬಿ.ಎಲ್.ಎಗಳಾಗಿ ನೇಮಕ’ : ಹಾಲಪ್ಪ ಆಚಾರ್” ವ್ಯಂಗ್ಯ! 

LOCAL NEWS : ‘ಅವರದ್ದೇ ಕಾರ್ಯಕರ್ತರನ್ನು ನಂಬದ ಕಾಂಗ್ರೆಸ್, ಶಾಸಕರೇ ಬಿ.ಎಲ್.ಎಗಳಾಗಿ ನೇಮಕ’ : ಹಾಲಪ್ಪ ಆಚಾರ್” ವ್ಯಂಗ್ಯ! 

ಪ್ರಜಾವೀಕ್ಷಣೆ ಡಿಜಿಟಲ್ ಸುದ್ದಿ : 

ಕುಕನೂರ, ಮೇ 31 : ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಗೆ ಕಾಂಗ್ರೆಸ್ ಪಕ್ಷದಿಂದ ಆಯಾ ಕ್ಷೇತ್ರಗಳ ಶಾಸಕರೇ ಬೂತ್ ಲೆವೆಲ್ ಏಜೆಂಟ್‌ಗಳಾಗಿ (ಬಿ.ಎಲ್.ಎ) ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಮಾಜಿ ಸಚಿವ ಹಾಲಪ್ಪ ಆಚಾರ್ ವ್ಯಂಗ್ಯವಾಡಿದರು.

ಪಟ್ಟಣದ ಹೊರವಲಯದ ಮಗಜಿ ಕಲ್ಯಾಣ ಮಂಟಪದಲ್ಲಿ ಭಾನುವಾರ ನಡೆದ ಬಿಜೆಪಿ ಯಲಬುರ್ಗಾ ಮಂಡಲದ ಮಹಾಶಕ್ತಿ ಕೇಂದ್ರದ ಬಿ.ಎಲ್.ಎ-2 ಹಾಗೂ ಬೂತ್ ಅಧ್ಯಕ್ಷರ ಕಾರ್ಯಗಾರದಲ್ಲಿ ಅವರು ಮಾತನಾಡಿದರು.

‘ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಗೆ ಕಾಂಗ್ರೆಸ್ ಪಕ್ಷದಿಂದ ಆಯಾ ಕ್ಷೇತ್ರಗಳ ಶಾಸಕರೇ ಬೂತ್ ಲೆವೆಲ್ ಏಜೆಂಟ್‌ಗಳಾಗಿ (ಬಿ.ಎಲ್.ಎ) ಕಾರ್ಯನಿರ್ವಹಿಸುತ್ತಿದ್ದಾರೆ. ಯಲಬುರ್ಗಾ ಕ್ಷೇತ್ರದಲ್ಲಿ ಶಾಸಕ ಬಸವರಾಜ ರಾಯರೆಡ್ಡಿ, ಕೊಪ್ಪಳ ಕ್ಷೇತ್ರದಲ್ಲಿ ಶಾಸಕ ರಾಘವೇಂದ್ರ ಹಿಟ್ನಾಳ ಹಾಗೂ ಗಂಗಾವತಿ ಕ್ಷೇತ್ರದಲ್ಲಿ ಸಂಸದ ರಾಜಶೇಖರ ಹಿಟ್ನಾಳ ಬಿ.ಎಲ್.ಎಗಳಾಗಿದ್ದಾರೆ ಎಂದು ಹಾಸ್ಯಸ್ಪಾದವಾಗಿ ಹೇಳಿದರು.

‘ಬಿಜೆಪಿಯಲ್ಲಿ ಸಾಮಾನ್ಯ ಕಾರ್ಯಕರ್ತರೇ ಬಿ.ಎಲ್.ಎಗಳಾಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ. ಕಾಂಗ್ರೆಸ್ ನಾಯಕರಿಗೆ ತಮ್ಮದೇ ಪಕ್ಷದ ಕಾರ್ಯಕರ್ತರ ಮೇಲೆ ನಂಬಿಕೆ ಇಲ್ಲದ ಕಾರಣ ಶಾಸಕರನ್ನೇ ಬಿ.ಎಲ್.ಎಗಳನ್ನಾಗಿ ಮಾಡಲಾಗಿದೆ ಎಂದರು.

ಜೂನ್ ತಿಂಗಳಿನಿಂದ ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ನಡೆಯುತ್ತಿದ್ದು, ರಾಜಕೀಯ ಕಾರಣಗಳಿಂದ ಕಾಂಗ್ರೆಸ್ ಪಕ್ಷ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸುತ್ತಿದೆ ಎಂದು ಮಾಜಿ ಸಚಿವ ಹಾಲಪ್ಪ ಆಚಾರ್ ಆರೋಪಿಸಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ಸಹಜ ಪ್ರಕ್ರಿಯೆಯಾಗಿದ್ದು, ದೇಶದ 26 ರಾಜ್ಯಗಳಲ್ಲಿ ಎಸ್‌ಐಆರ್ ಜಾರಿಯಲ್ಲಿದೆ. ಮತದಾರರ ಪಟ್ಟಿಯನ್ನು ಪಾರದರ್ಶಕ ಹಾಗೂ ವಿಶ್ವಾಸಾರ್ಹಗೊಳಿಸುವ ನಿಟ್ಟಿನಲ್ಲಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ. ಕೇಂದ್ರ ಸರ್ಕಾರದ ನಿರ್ದೇಶನದಂತೆ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ನಡೆಯುತ್ತಿದೆ ಎಂದು ಹೇಳಿದರು.

 ಕೊಪ್ಪಳ ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ ಗುಳಗಣ್ಣನವರ್ ಮಾತನಾಡಿ, ‘ಪಶ್ಚಿಮ ಬಂಗಾಳ ಸೇರಿದಂತೆ ಹಲವು ರಾಜ್ಯಗಳಲ್ಲಿ ಅಕ್ರಮ ನುಸುಳುಕೋರರು ಹಾಗೂ ವಲಸಿಗರ ಕುರಿತು ಚರ್ಚೆಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಅರ್ಹ ಮತದಾರರನ್ನು ಗುರುತಿಸಿ ಮತದಾರರ ಪಟ್ಟಿಯನ್ನು ಶುದ್ಧೀಕರಿಸುವ ಕಾರ್ಯ ನಡೆಯುತ್ತಿದೆ. ಆದರೆ, ಕಾಂಗ್ರೆಸ್ ಪಕ್ಷ ಎಸ್‌ಐಆರ್ ಕುರಿತು ಜನರಲ್ಲಿ ತಪ್ಪು ಕಲ್ಪನೆ ಮೂಡಿಸುತ್ತಿದೆ’ ಎಂದು ಟೀಕಿಸಿದರು.

ಯಲಬುರ್ಗಾ ಮತಕ್ಷೇತ್ರ ವ್ಯಾಪ್ತಿಯಲ್ಲಿ 7,489 ಜನರನ್ನು ಸಾವಿರ ಮತದಾರರ ವಿವರಗಳನ್ನು ಪರಿಷ್ಕರಣೆ ವೇಳೆ ಕೈಬಿಡಲಾಗಿದ್ದು, ಮತದಾರರ ಪಟ್ಟಿಯನ್ನು ಇನ್ನಷ್ಟು ನಿಖರಗೊಳಿಸುವ ಕಾರ್ಯ ನಡೆಯುತ್ತಿದೆ. ವರ್ಷಾಂತ್ಯದಲ್ಲಿ ನಡೆಯುವ ಸಾಧ್ಯತೆಯಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಕಾರ್ಯಕರ್ತರು ಈಗಿನಿಂದಲೇ ಶ್ರಮಿಸಬೇಕು ಎಂದು ಕರೆ ನೀಡಿದರು.

ಅಕ್ಟೋಬರ್ ವೇಳೆಗೆ 18 ವರ್ಷ ಪೂರೈಸುವ ಯುವಜನರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ವಿಶೇಷ ಗಮನ ಹರಿಸಬೇಕು. ಮತದಾರರ ಪಟ್ಟಿಯ ಪರಿಷ್ಕರಣೆ ಹಾಗೂ ಈಗಾಗಲೇ ಮ್ಯಾಪಿಂಗ್ ಕಾರ್ಯದಲ್ಲಿ ಶೇ.96.78ರಷ್ಟು ಪ್ರಗತಿ ಸಾಧಿಸಲಾಗಿದ್ದು, 7,489 ಮತದಾರರ ವಿವರಗಳನ್ನು ಪ್ರತ್ಯೇಕಗೊಳಿಸಲಾಗಿದೆ. ಈಗಾಗಲೇ ಸಾವಿರಾರು ಮತದಾರರ ಮಾಹಿತಿಯ ಮ್ಯಾಪಿಂಗ್ ಕಾರ್ಯ ಪೂರ್ಣಗೊಂಡಿದೆ ಎಂದು ತಿಳಿಸಿದರು.

ಮಹಿಳಾ ಹಾಗೂ ಯುವ ಮತದಾರರ ಸಂಪರ್ಕಕ್ಕಾಗಿ ಪ್ರತಿ ಮತಗಟ್ಟೆಯಲ್ಲಿ ಐವರು ಸದಸ್ಯರ ತಂಡವನ್ನು ರಚಿಸಲಾಗಿದೆ. ಮಂಡಲ ವ್ಯಾಪ್ತಿಯಲ್ಲಿ 268 ಬಿ.ಎಲ್.ಎ-2 ಕಾರ್ಯಕರ್ತರಿದ್ದು, ಸಂಘಟನೆ ಬಲಪಡಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.

ಯಲಬುರ್ಗಾ ಮಂಡಲ ಬಿಜೆಪಿ ಅಧ್ಯಕ್ಷ ಮಾರುತಿ ಗಾವರಾಳ ಮಾತನಾಡಿ, ಎಸ್‌ಐಆರ್ ಅಡಿಯಲ್ಲಿ ಮತದಾರರ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದ್ದು, ಬಿ.ಎಲ್.ಎ-2 ಕಾರ್ಯಕರ್ತರು ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದರು. ಮುಂಬರುವ ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳ ಹಿನ್ನೆಲೆಯಲ್ಲಿ ಕಾರ್ಯಕರ್ತರು ಈಗಿನಿಂದಲೇ ಸಜ್ಜಾಗಬೇಕು ಎಂದು ಕರೆ ನೀಡಿದರು.

ವೇದಿಕೆ ಕಾರ್ಯಕ್ರಮದಲ್ಲಿ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಬಸವರಾಜ ಗೌರಾ,ಮುಖಂಡರಾದ ಅಂಬರೀಷ್ ಹುಬ್ಬಳ್ಳಿ, ಶಿವಕುಮಾರ ನಾಗಲಪುರಮಠ, ಶರಣಪ್ಪ ಬಣ್ಣದಬಾವಿ, ಲಕ್ಷ್ಮಣ ಕಾಳಿ, ಸುಭಾಷ್ ಪೂಜಾರ, ಮಾರುತಿ ಗಾವರಾಳ, ಬಸವಲಿಂಗಪ್ಪ ಭೂತೆ, ಬಸವರಾಜ ಹಾಳಕೇರಿ, ಈರಣ್ಣ ಹುಬ್ಬಳ್ಳಿ, ಅಯ್ಯನಗೌಡ್ರ ಕೆಂಚಣ್ಣನವ್ವರ್, ಶರಣಪ್ಪ ಗುಂಗಾಡಿ, ಶರಣಪ್ಪ ಈಳಗಿ, ಬಸವನಗೌಡ ತೊಂಡಿಹಾಳ, ಶಂಭು ಜೋಳದ, ಮಂಜುನಾಥ ನಾಡಗೌಡ, ಶಿವರಾಜಗೌಡ್ರು, ಯಲ್ಲಪ್ಪಗೌಡ್ರು, ಬಾಲರಾಜ ಗಾಳಿ, ಪ್ರಭುಗೌಡ ಪಾಟೀಲ, ರಶೀದಸಾಬ್ ಹಣಗಿ, ವಿಶ್ವನಾಥ ಮರಿಬಸಪ್ಪ, ವೀರಣ್ಣ ಹುಬ್ಬಳ್ಳಿ, ರತನ್ ದೇಸಾಯಿ ಸೇರಿದಂತೆ ಅನೇಕ ಮುಖಂಡರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.

Leave a Reply

error: Content is protected !!