BREAKING : ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ!
PV NEWS :
ಬೆಂಗಳೂರು, ಜೂ. 03 : ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಬುಧವಾರ ಅಧಿಕಾರ ವಹಿಸಿಕೊಂಡಿದ್ದಾರೆ. ಬೆಂಗಳೂರಿನ ಲೋಕಭವನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಅವರು ಅಧಿಕೃತವಾಗಿ ಪ್ರಮಾಣವಚನ ಸ್ವೀಕರಿಸಿದರು.
ಹಿನ್ನೆಲೆ : 2023ರಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ನೇತೃತ್ವ ವಹಿಸಿದ್ದ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆ ಬಳಿಕ ನಡೆದ ರಾಜಕೀಯ ಬೆಳವಣಿಗೆಯಲ್ಲಿ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿತ್ತು.
ಗಣ್ಯರ ಉಪಸ್ಥಿತಿ:
ಈ ಐತಿಹಾಸಿಕ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ದೇಶದ ಪ್ರಮುಖ ರಾಜಕೀಯ ನಾಯಕರು ಸಾಕ್ಷಿಯಾದರು. ಎಐಸಿಸಿ (AICC) ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‌ನ ಹಿರಿಯ ಮುಖಂಡರಾದ ರಾಹುಲ್ ಗಾಂಧಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಬೇರೆ ಬೇರೆ ರಾಜ್ಯದ ಮುಖ್ಯಮಂತ್ರಿಗಳನ್ನು ಸೇರಿದಂತೆ ಹಲವು ಪ್ರಮುಖ ನಾಯಕರು ಮತ್ತು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿ ಹೊಸ ಮುಖ್ಯಮಂತ್ರಿಗಳಿಗೆ ಶುಭ ಹಾರೈಸಿದರು.