You are currently viewing LOCAL NEWS : ಕುಕನೂರು |ಪಂಚಮಸಾಲಿ ಸಮಾಜದ ಲಕ್ಷ್ಮಿ ಹೆಬ್ಬಾಳ್ಕರ್ ಸೇರಿ ನಾಲ್ವರಿಗೆ ಸಚಿವ ಸ್ಥಾನಕ್ಕೆ ಆಗ್ರಹ! 

LOCAL NEWS : ಕುಕನೂರು |ಪಂಚಮಸಾಲಿ ಸಮಾಜದ ಲಕ್ಷ್ಮಿ ಹೆಬ್ಬಾಳ್ಕರ್ ಸೇರಿ ನಾಲ್ವರಿಗೆ ಸಚಿವ ಸ್ಥಾನಕ್ಕೆ ಆಗ್ರಹ! 

LOCAL NEWS : ಕುಕನೂರು |ಪಂಚಮಸಾಲಿ ಸಮಾಜದ ಲಕ್ಷ್ಮಿ ಹೆಬ್ಬಾಳ್ಕರ್ ಸೇರಿ ನಾಲ್ವರಿಗೆ ಸಚಿವ ಸ್ಥಾನಕ್ಕೆ ಆಗ್ರಹ! 

 

PV NEWS : 

​ಕುಕನೂರು, ಜೂ. 07 : ರಾಜ್ಯ ಸಚಿವ ಸಂಪುಟದಲ್ಲಿ ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ಹೆಚ್ಚಿನ ಪ್ರಾತಿನಿಧ್ಯ ನೀಡಬೇಕು ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ಸೇರಿದಂತೆ ಒಟ್ಟು 4 ಮಂದಿ ಸಮುದಾಯದ ನಾಯಕರಿಗೆ ಸಚಿವ ಸ್ಥಾನ ಕಲ್ಪಿಸಬೇಕು ಎಂದು ಆಗ್ರಹಿಸಿ ಪಂಚಮಸಾಲಿ ಸಮಾಜದ ತಾಲೂಕಾ ಅಧ್ಯಕ್ಷ ಈರಣ್ಣ ಅಣ್ಣಿಗೇರಿ ಹೇಳಿದರು.

ಪಟ್ಟಣದ ಸೂರುಟೂರ ಮೀಲ್ ನ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ 11 ಮಂದಿ ಶಾಸಕರು ವಿಧಾನಸಭೆಯಲ್ಲಿ ಪ್ರತಿನಿಧಿಸುತ್ತಿದ್ದು, ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆಯಲ್ಲಿ ಸಮಾಜಕ್ಕೆ ಮೊದಲ ಆದ್ಯತೆ ನೀಡಬೇಕು. ಬಸವರಾಜ ರಾಯರೆಡ್ಡಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಕನಿಷ್ಠ ನಾಲ್ವರು ಪಂಚಮಸಾಲಿ ಶಾಸಕರಿಗೆ ಸಚಿವ ಸ್ಥಾನ ನೀಡುವ ಮೂಲಕ ಸಮಾಜಕ್ಕೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.

​ಈಶಪ್ಪ ಆರೇರಾ ಮಾತನಾಡಿ, ‘ರಾಜಕೀಯ ಮತ್ತು ಸಾಮಾಜಿಕ ಬೆಳವಣಿಗೆಯಲ್ಲಿ ಪಂಚಮಸಾಲಿ ಸಮುದಾಯದ ಕೊಡುಗೆ ಅಪಾರವಾಗಿದೆ. ಆದರೆ ಜನಸಂಖ್ಯೆಗೆ ಅನುಗುಣವಾಗಿ ಸರ್ಕಾರದಲ್ಲಿ ಸೂಕ್ತ ಸ್ಥಾನಮಾನ ಸಿಗುತ್ತಿಲ್ಲ ಎಂಬ ಅಸಮಾಧಾನ ವ್ಯಕ್ತಪಡಿಸಿದರು.

​ನಾಲ್ವರಿಗೆ ಸಚಿವ ಸ್ಥಾನ: ಹಾಲಿ ಸಚಿವರಾಗಿರುವ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಸೂಕ್ತ ಖಾತೆ ನೀಡುವುದರ ಜೊತೆಗೆ, ಹಿರಿಯ ನಾಯಕರಾದ ಬಸವರಾಜ ರಾಯರೆಡ್ಡಿ ಸೇರಿದಂತೆ ಸಮುದಾಯದ ಒಟ್ಟು ನಾಲ್ಕು ಮಂದಿ ಶಾಸಕರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಬೇಕು ಎಂದು ಆಗ್ರಹಿಸಿದರು.

“ಪಂಚಮಸಾಲಿ ಸಮಾಜವು ಸದಾ ಸಮಾಜದ ಪ್ರಗತಿ ಹಾಗೂ ಸರ್ಕಾರದ ಬೆಂಬಲಕ್ಕೆ ನಿಂತಿದೆ. ಆದರೆ ನಮ್ಮ ಹಕ್ಕುಗಳಿಗಾಗಿ ನಾವು ನಿರಂತರವಾಗಿ ವಿನಂತಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಸರ್ಕಾರವು ತಕ್ಷಣವೇ ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು.”

ಉಮಾ ಆರೇರ್, ಪಂಚಮಸಾಲಿ ಸಮಾಜ- ಕುಕನೂರು. 

​ಹೋರಾಟದ ಎಚ್ಚರಿಕೆ:

​ಸಚಿವ ಸಂಪುಟ ವಿಸ್ತರಣೆ ವೇಳೆ ಪಂಚಮಸಾಲಿ ಸಮಾಜಕ್ಕೆ ಸಮರ್ಪಕ ಸ್ಥಾನಮಾನ ನೀಡದಿದ್ದಲ್ಲಿ ರಾಜ್ಯಾದ್ಯಂತ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಸಮಾಜದ ಮುಖಂಡರಾದ ಶರಣಗೌಡ ಪಾಟೀಲ್, ಗವಿಸಿದ್ದಪ್ಪ ಆರೇರ್, ಮಲ್ಲಣ್ಣ ಕೂಡ್ಲೂರು, ಸರಸ್ವತಿ ಕೂಡ್ಲೂರು, ಮಹೇಶ್ ಬನ್ನಿಕೊಪ್ಪ, ಚಂದ್ರು ಬಗನಾಳ, ಉಮಾ ಆರೇರ್, ಬಸವರಾಜ ವೀರಾಪುರ, ಬಸವರಾಜ ತೊಂಡಿಹಾಳ, ದೀಪಾ ಮಹೇಶಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Leave a Reply

error: Content is protected !!