You are currently viewing LOCAL NEWS : ಬನ್ನಿಕೊಪ್ಪದಲ್ಲಿ “ಸ್ವಚ್ಛ ಸಂಕೀರ್ಣ ಘಟಕ” ಸ್ಥಾಪನೆಗೆ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಿಂದ ಸ್ಥಳ ಪರಿಶೀಲನೆ!

LOCAL NEWS : ಬನ್ನಿಕೊಪ್ಪದಲ್ಲಿ “ಸ್ವಚ್ಛ ಸಂಕೀರ್ಣ ಘಟಕ” ಸ್ಥಾಪನೆಗೆ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಿಂದ ಸ್ಥಳ ಪರಿಶೀಲನೆ!

LOCAL NEWS : ಬನ್ನಿಕೊಪ್ಪದಲ್ಲಿ “ಸ್ವಚ್ಛ ಸಂಕೀರ್ಣ ಘಟಕ” ಸ್ಥಾಪನೆಗೆ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಿಂದ ಸ್ಥಳ ಪರಿಶೀಲನೆ!

PV NEWS :

ಕುಕನೂರು, ಜೂ. 09 : ತಾಲೂಕಿನ ಬನ್ನಿಕೊಪ್ಪ ಗ್ರಾಮದಲ್ಲಿ ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಹಮ್ಮಿಕೊಳ್ಳಲಾಗಿರುವ ‘ಸ್ವಚ್ಛ ಸಂಕೀರ್ಣ ಘಟಕ’ ಸ್ಥಾಪನೆಗೆ ಸಂಬಂಧಿಸಿದಂತೆ ಕೊಪ್ಪಳ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಎಸ್.ಎನ್. ಕಾಂಬ್ಳೆ ಅವರು ಇಂದು ಬನ್ನಿಕೊಪ್ಪ ಗ್ರಾಮಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.


​ಉದ್ದೇಶಿತ ಘಟಕದ ಜಾಗವನ್ನು ಕೂಲಂಕಷವಾಗಿ ಪರಿಶೀಲಿಸಿದ ಯೋಜನಾ ನಿರ್ದೇಶಕರು, ಸದರಿ ಸ್ಥಳದ ಕುರಿತು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ (ಇಒ) ಸಂತೋಷ್ ಬಿರಾದಾರ್ ಪಾಟೀಲ್ಅವರ ಮುಖಾಂತರ ಅಗತ್ಯವಿರುವ ವಿವರಗಳೊಂದಿಗೆ ಮರು ಪ್ರಸ್ತಾವನೆಯನ್ನು ಶೀಘ್ರವಾಗಿ ಸಲ್ಲಿಸುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು.


ನರೇಗಾ ಕಾಮಗಾರಿಗಳ ಪ್ರಗತಿ ಪರಿಶೀಲನೆ:

ಸ್ಥಳ ಪರಿಶೀಲನೆಯ ನಂತರ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (ನರೇಗಾ) ಯೋಜನೆಯಡಿ ಪ್ರಗತಿಯಲ್ಲಿರುವ ನಾಲಾ ಸುಧಾರಣೆ ಕಾಮಗಾರಿಗಳು ಸೇರಿದಂತೆ ವಿವಿಧ ಅಭಿವೃದ್ಧಿ ಕೆಲಸಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು. ಇದೇ ವೇಳೆ ಮಾತನಾಡಿದ ಅವರು, “ಗ್ರಾಮೀಣ ಭಾಗದ ಜನರಿಗೆ ಉದ್ಯೋಗ ನೀಡುವುದು ಸರ್ಕಾರದ ಮುಖ್ಯ ಉದ್ದೇಶವಾಗಿದೆ. ಹೀಗಾಗಿ ಎಲ್ಲಾ ಗ್ರಾಮ ಪಂಚಾಯತಿಗಳು ತಮ್ಮ ವ್ಯಾಪ್ತಿಯಲ್ಲಿ ಅರ್ಹ ಕೂಲಿಕಾರರಿಗೆ ಸಕಾಲದಲ್ಲಿ ಕೆಲಸ ನೀಡಲು ಸೂಕ್ತ ಕ್ರಮ ವಹಿಸಬೇಕು,” ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

​ಈ ಸಂದರ್ಭದಲ್ಲಿ ಕುಕನೂರ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ (ಇಒ) ಸಂತೋಷ್ ಬಿರಾದಾರ್ ಪಾಟೀಲ್, ಗ್ರಾಮೀಣ ಉದ್ಯೋಗ ವಿಭಾಗದ ಸಹಾಯಕ ನಿರ್ದೇಶಕ ಶರಣಪ್ಪ ಕೆಳಗಿನಮನಿ, ಬನ್ನಿಕೊಪ್ಪ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಪರಶುರಾಮ್ ನಾಯಕ್ ಹಾಗೂ ಗ್ರಾಮ ಪಂಚಾಯತಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Prajavikshane

Chandru R Bhanapaur

Leave a Reply

error: Content is protected !!