You are currently viewing JOB ALRT : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ 4,000 ಹುದ್ದೆಗಳ ಭರ್ತಿಗೆ ಸಚಿವ ಈಶ್ವರ್ ಖಂಡ್ರೆ  ಸೂಚನೆ!

JOB ALRT : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ 4,000 ಹುದ್ದೆಗಳ ಭರ್ತಿಗೆ ಸಚಿವ ಈಶ್ವರ್ ಖಂಡ್ರೆ  ಸೂಚನೆ!

JOB ALRT : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ 4,000 ಹುದ್ದೆಗಳ ಭರ್ತಿಗೆ ಸಚಿವ ಈಶ್ವರ್ ಖಂಡ್ರೆ  ಸೂಚನೆ!

PV NEWS : 

ಬೆಂಗಳೂರು, ಜೂ. 09 : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು ಹುದ್ದೆಗಳ ಪೈಕಿ ಮೊದಲ ಹಂತದಲ್ಲಿ 4,000 ಹುದ್ದೆಗಳ ಭರ್ತಿಗೆ ಕೂಡಲೇ ಪ್ರಕ್ರಿಯೆ ಆರಂಭಿಸುವಂತೆ ಸೂಚನೆ ನೀಡಲಾಗಿದೆ ಎಂದು ಇಲಾಖೆಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ಮಂಡಳಿಯ (KRIDL) ಸಭಾಂಗಣದಲ್ಲಿ ನಡೆದ ಇಲಾಖೆಯ ಉನ್ನತಾಧಿಕಾರಿಗಳ ಪರಿಚಯಾತ್ಮಕ ಸಭೆಯ ಬಳಿಕ ನಡೆಸಿದ ಸುದ್ದಿಗೋಷ್ಠಿಯಲ್ಲಿ ಅವರು ಈ ಮಹತ್ವದ ವಿಷಯಗಳನ್ನು ಹಂಚಿಕೊಂಡರು.ಇಲಾಖೆಯಲ್ಲಿ ಒಟ್ಟು 25,540 ಮಂಜೂರಾದ ಹುದ್ದೆಗಳಿದ್ದು, ಸದ್ಯ 8,770 ಹುದ್ದೆಗಳು ಖಾಲಿ ಇವೆ. ಇವುಗಳ ವರ್ಗೀಕರಣ ಹೀಗಿದೆ.

‘ಎ’ ವೃಂದ : 268 ಹುದ್ದೆಗಳು

‘ಬಿ’ ವೃಂದ : 1,079 ಹುದ್ದೆಗಳು

‘ಸಿ’ ವೃಂದ : 5,294 ಹುದ್ದೆಗಳು

‘ಡಿ’ ವೃಂದ : 2,129 ಹುದ್ದೆಗಳು

:- ನೇಮಕಾತಿ ಪ್ರಕ್ರಿಯೆ ಹೇಗೆ?: ಮೊದಲ ಹಂತದ 4,000 ಹುದ್ದೆಗಳಲ್ಲಿ ‘ಸಿ’ ಮತ್ತು ‘ಡಿ’ ವೃಂದದ ಹುದ್ದೆಗಳ ನೇರ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಿದೆ. ಈಗಾಗಲೇ 1,400 ಹುದ್ದೆಗಳ ಭರ್ತಿಗೆ ಅನುಮತಿ ಸಿಕ್ಕಿದ್ದು, ಕಲ್ಯಾಣ ಕರ್ನಾಟಕ ಭಾಗದ ಹುದ್ದೆಗಳ ಭರ್ತಿಗೂ ಆದ್ಯತೆ ನೀಡಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

Prajavikshane

Chandru R Bhanapaur

Leave a Reply

error: Content is protected !!