You are currently viewing LOCAL NEWS : ಮತದಾರರ ಪಟ್ಟಿ ಪರಿಷ್ಕರಣೆಗೆ ಚುರುಕು: ಕುಕನೂರಿನಲ್ಲಿ 96% ಮ್ಯಾಪಿಂಗ್ ಪೂರ್ಣ : ಮುಖ್ಯಾಧಿಕಾರಿ ನಾಗೇಶ್

LOCAL NEWS : ಮತದಾರರ ಪಟ್ಟಿ ಪರಿಷ್ಕರಣೆಗೆ ಚುರುಕು: ಕುಕನೂರಿನಲ್ಲಿ 96% ಮ್ಯಾಪಿಂಗ್ ಪೂರ್ಣ : ಮುಖ್ಯಾಧಿಕಾರಿ ನಾಗೇಶ್

LOCAL NEWS : ಮತದಾರರ ಪಟ್ಟಿ ಪರಿಷ್ಕರಣೆಗೆ ಚುರುಕು: ಕುಕನೂರಿನಲ್ಲಿ 96% ಮ್ಯಾಪಿಂಗ್ ಪೂರ್ಣ : ಮುಖ್ಯಾಧಿಕಾರಿ ನಾಗೇಶ್

PV NEWS : 

ಕುಕನೂರ, ಜೂನ್ 9: ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ (48) ರನ್ವಯ ಕುಕನೂರು ಪಟ್ಟಣ ಪಂಚಾಯತ್ ಕಾರ್ಯಾಲಯದಲ್ಲಿ ಇಂದು ಪಟ್ಟಣ ಪಂಚಾಯತ್ ಅಧ್ಯಕ್ಷ ಲೀಲಾವತಿ ಮುಧೋಳ ಅವರ ಅಧ್ಯಕ್ಷತೆಯಲ್ಲಿ ತುರ್ತು ಸಭೆಯನ್ನು ಕರೆಯಲಾಗಿತ್ತು.

ಈ ತುರ್ತು ಸಭೆಯನ್ನ ಕುರಿತು ಮಾತನಾಡಿದ ಮುಖ್ಯಾಧಿಕಾರಿ ಹಾಗೂ ನೋಡಲ್ ಅಧಿಕಾರಿ ನಾಗೇಶ್, ‘ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯಕ್ಕೆ ಸಂಬಂಧಿಸಿದಂತೆ ಕುಕನೂರಿನಲ್ಲಿ ಶೇ.96ರಷ್ಟು ಮತದಾರರ ಮ್ಯಾಪಿಂಗ್ ಕಾರ್ಯ ಪೂರ್ಣಗೊಂಡಿದ್ದು, ಉಳಿದಿರುವ ಕಾರ್ಯವನ್ನು ಶೀಘ್ರದಲ್ಲೇ ಪೂರ್ಣಗೊಳಿಸಿ ಅಂತಿಮ ಮತದಾರರ ಪಟ್ಟಿಯನ್ನು ಸಿದ್ಧಪಡಿಸಲಾಗುವುದು ಎಂದು ತಿಳಿಸಿದರು.

‘ಕುಕನೂರ ವ್ಯಾಪ್ತಿಯಲ್ಲಿ ಒಟ್ಟು 106 ಮತಗಟ್ಟೆಗಳಿದ್ದು, ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳನ್ನು ಸೇರಿ ಒಟ್ಟು 2,926 ಮತದಾರರ ಮ್ಯಾಪಿಂಗ್ ಕಾರ್ಯ ಬಾಕಿ ಉಳಿದಿದೆ. ಬಾಕಿ ಇರುವ ಮತದಾರರ ದಾಖಲೆಗಳನ್ನು ಪರಿಶೀಲಿಸಿ ಶೀಘ್ರದಲ್ಲೇ ಕಾರ್ಯ ಪೂರ್ಣಗೊಳಿಸಲಾಗುವುದು’ ಎಂದು ಹೇಳಿದರು.

2026ರ ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ ವೇಳಾಪಟ್ಟಿಯಂತೆ ಜೂನ್ 30ರಿಂದ ಜುಲೈ 29ರವರೆಗೆ ಬಿಎಲ್‌ಒಗಳು ಮನೆ ಮನೆಗೆ ತೆರಳಿ ಮಾಹಿತಿ ಸಂಗ್ರಹ ಕಾರ್ಯ ಕೈಗೊಳ್ಳಲಿದ್ದಾರೆ. ಆಗಸ್ಟ್ 5ರಂದು ಕರಡು ಮತದಾರರ ಪಟ್ಟಿ ಪ್ರಕಟವಾಗಲಿದ್ದು, ಆಕ್ಷೇಪಣೆ ಹಾಗೂ ಹಕ್ಕು-ದಾವೆ ಅರ್ಜಿಗಳ ಪರಿಶೀಲನೆ ಬಳಿಕ ಅಕ್ಟೋಬರ್ 7ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ 15ನೇ ಹಣಕಾಸು ಆಯೋಗದ ಯೋಜನೆಯಡಿ ಬಾಕಿ ಉಳಿದಿರುವ ₹1.37 ಕೋಟಿ ಅನುದಾನವನ್ನು ಕೆ.ಯು.ಡಬ್ಲ್ಯೂ.ಎಸ್. ಮತ್ತು ಡಿ.ಬಿ.ಗೆ ಜಮಾ ಮಾಡುವ ಕುರಿತು ಚರ್ಚಿಸಲಾಯಿತು.

ಅರ್ಬನ್ ಚಾಲೆಂಜ್ ಫಂಡ್‌ನ ಜಿಬಿಎ ಹಾಗೂ ವಿವಿಧ ಯೋಜನೆಗಳಡಿ ಮಂಜೂರಾಗಿರುವ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿ, ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.

ಸಭೆಯಲ್ಲಿ ಪಟ್ಟಣ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷ ಸಿರಾಜ್ ವುದ್ದಿನ್ ಕರಮುಡಿ, ಸದಸ್ಯರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

error: Content is protected !!