You are currently viewing LOCAL NEWS : ಕುಕನೂರಿನಲ್ಲಿ ಪ್ರಧಾನಿ ಮೋದಿ ಅವರ ದೀರ್ಘಾವಧಿ ಸೇವೆಗೆ ಮಹಾಮಾಯಾ ದೇವಸ್ಥಾನದಲ್ಲಿ ವಿಶೇಷ ಪೂಜೆ!

LOCAL NEWS : ಕುಕನೂರಿನಲ್ಲಿ ಪ್ರಧಾನಿ ಮೋದಿ ಅವರ ದೀರ್ಘಾವಧಿ ಸೇವೆಗೆ ಮಹಾಮಾಯಾ ದೇವಸ್ಥಾನದಲ್ಲಿ ವಿಶೇಷ ಪೂಜೆ!

LOCAL NEWS : ಕುಕನೂರಿನಲ್ಲಿ ಪ್ರಧಾನಿ ಮೋದಿ ಅವರ ದೀರ್ಘಾವಧಿ ಸೇವೆಗೆ ಮಹಾಮಾಯಾ ದೇವಸ್ಥಾನದಲ್ಲಿ ವಿಶೇಷ ಪೂಜೆ!

PV NEWS : 

​ಕುಕನೂರು, ಜೂನ್‌ 10 : ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಪ್ರಧಾನಿಯಾಗಿ ಅತಿ ಹೆಚ್ಚು ದಿನಗಳ ಕಾಲ ಸೇವೆ ಸಲ್ಲಿಸಿದ ಐತಿಹಾಸಿಕ ಮೈಲಿಗಲ್ಲನ್ನು ತಲುಪಿದ ಹಿನ್ನೆಲೆಯಲ್ಲಿ, ಯಲಬುರ್ಗಾ ಮಂಡಲದ ವತಿಯಿಂದ ಇಲ್ಲಿನ ಐತಿಹಾಸಿಕ ಶ್ರೀ ಮಹಾಮಾಯಾ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಜನಕಲ್ಯಾಣಕ್ಕಾಗಿ ಪ್ರಾರ್ಥನೆ ಹಮ್ಮಿಕೊಳ್ಳಲಾಗಿತ್ತು.

​ದೇವಸ್ಥಾನದಲ್ಲಿ ಜಗನ್ಮಾತೆಗೆ ವಿಶೇಷ ಅರ್ಚನೆ ಹಾಗೂ ಪೂಜಾ ಕೈಂಕರ್ಯಗಳನ್ನು ನೆರವೇರಿಸುವ ಮೂಲಕ ಪ್ರಧಾನಿ ಮೋದಿಯವರ ಸುದೀರ್ಘ ಹಾಗೂ ಯಶಸ್ವಿ ಆಡಳಿತಕ್ಕಾಗಿ ಕೃತಜ್ಞತೆ ಸಲ್ಲಿಸಲಾಯಿತು.

​ಜಗತ್ತೇ ಭಾರತದತ್ತ ತಿರುಗಿ ನೋಡುವಂತೆ ಮಾಡಿದ ಮೋದಿ: ಹಾಲಪ್ಪ ಆಚಾರ್!

​ಈ ಸಂದರ್ಭದಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ಸಚಿವ ಹಾಲಪ್ಪ ಆಚಾರ್ ಅವರು, “ಜಾಗತಿಕ ಮಟ್ಟದಲ್ಲಿ ಪ್ರಧಾನಿ ಮೋದಿಯವರ ಸಾಧನೆಗಳು ಅಪಾರವಾಗಿವೆ. ಜಗತ್ತಿನ ಪ್ರಮುಖ ಮತ್ತು ಶಕ್ತಿಶಾಲಿ ರಾಷ್ಟ್ರಗಳ ಸಾಲಿನಲ್ಲಿ ಭಾರತವನ್ನು ಮುಂಚೂಣಿಗೆ ತಂದ ಹೆಗ್ಗಳಿಕೆ ನರೇಂದ್ರ ಮೋದಿಯವರದ್ದಾಗಿದೆ. ಅವರ ದೃಢ ನಾಯಕತ್ವದಲ್ಲಿ ದೇಶವು ಸರ್ವತೋಮುಖ ಅಭಿವೃದ್ಧಿಯತ್ತ ಹೆಜ್ಜೆ ಇಡುತ್ತಿದ್ದು, ಇಂದು ಇಡೀ ಜಗತ್ತೇ ಭಾರತದತ್ತ ತಿರುಗಿ ನೋಡುವಂತೆ ಮಾಡಿದ್ದಾರೆ” ಎಂದು ಶ್ಲಾಘಿಸಿದರು.

​”ಕಳೆದ 12 ವರ್ಷಗಳಲ್ಲಿ ಭಾರತವು ಸಾಧಿಸಿದ ಆತ್ಮನಿರ್ಭರತೆ (ಸ್ವಾವಲಂಬನೆ) ಮತ್ತು ದೇಶದ ಪ್ರಗತಿಯ ವಿವಿಧ ಆಯಾಮಗಳ ಬಗ್ಗೆ ಬೆಳಕು ಚೆಲ್ಲಿದರು. “ರಕ್ಷಣೆ, ತಂತ್ರಜ್ಞಾನ ಹಾಗೂ ಮೂಲಸೌಕರ್ಯ ಸೇರಿದಂತೆ ಪ್ರತಿಯೊಂದು ವಲಯದಲ್ಲೂ ಭಾರತವು ಇಂದು ಸ್ವಾವಲಂಬಿಯಾಗುತ್ತಿದ್ದು, ಜಾಗತಿಕ ಮಟ್ಟದಲ್ಲಿ ದೇಶದ ಪ್ರತಿಷ್ಠೆ ಮುಗಿಲೆತ್ತರಕ್ಕೆ ಬೆಳೆದಿದೆ” 

– ಮಂಜುನಾಥ್ ನಾಡಗೌಡರ್!, BJP ಮುಖಂಡ-ಕುಕನೂರು. 

ಈ ಸಂದರ್ಭದಲ್ಲಿ ಮಂಡಲದ ಅಧ್ಯಕ್ಷರಾದ ಮಾರುತಿ ಗಾವರಾಳ್, ಹಿರಿಯರಾದ ಶಿವಕುಮಾರ್ ನಾಗಲಾಪುರಮಠ, ಶರಣಪ್ಪ ಬಣ್ಣದಬಾವಿ, ಮುಕುಂದರಾವ್ ಕುಲಕರ್ಣಿ, ಗೋವಿಂದರಾವ್ ಕುಲಕರ್ಣಿ, ಸಿದ್ದು ಉಳಾಗಡ್ಡಿ, ಬಸವರಾಜ ಹಾಳಕೇರಿ, ಕರಬಸಯ್ಯ ಬಿನ್ನಾಳ್, ಮಾರುತೇಶ್ ಹೂಗಾರ್, ಕಳಕೇಶ ಹಟ್ಟಿಕಟಗಿ, ರಾಮನಗೌಡ ಅರಿಶಿನಬಿಡಿ, ಬಸವಣ್ಣ ಈಬೇರಿ ಸೇರಿದಂತೆ ಪಕ್ಷದ ಪ್ರಮುಖರು, ಕಾರ್ಯಕರ್ತರು ಹಾಗೂ ಅಪಾರ ಸಂಖ್ಯೆಯ ಭಕ್ತಾದಿಗಳು ಉಪಸ್ಥಿತರಿದ್ದರು.

Prajavikshane

Chandru R Bhanapaur

Leave a Reply

error: Content is protected !!