LOCAL NEWS : ಕುಕನೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶಾಲಾ ವಲಯ ಸುರಕ್ಷತೆಗೆ ಪೊಲೀಸ್ ಇಲಾಖೆ ಕ್ರಮ: ಸೂಚನಾ ಫಲಕ ಅಳವಡಿಕೆ ಹಾಗೂ ಪೆಟ್ರೋಲಿಂಗ್‌ಗೆ ಚಾಲನೆ!

ಪ್ರಜಾವೀಕ್ಷಣೆ ಡಿಜಿಟಲ್ ಸುದ್ದಿ :
ಕುಕನೂರು, ಜೂನ್ 19 : ಕುಕನೂರು ಪಟ್ಟಣದ ವ್ಯಾಪ್ತಿಯಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಶಾಲಾ ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಸುಗಮ ಸಂಚಾರ ನಿಯಂತ್ರಣಕ್ಕಾಗಿ ಪೊಲೀಸ್ ಇಲಾಖೆಯು ಸೂಕ್ತ ಕ್ರಮಗಳನ್ನು ಕೈಗೊಂಡಿದೆ.
ಕುಕನೂರು ಪಟ್ಟಣ ಹಿತರಕ್ಷಣಾ ಸಮಿತಿಯ ಸಹ-ಸಂಚಾಲಕರಾದ ಮಂಜುನಾಥ ನಾಡಗೌಡ ಅವರು ಕೊಪ್ಪಳ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಸಲ್ಲಿಸಿದ್ದ ಮನವಿಗೆ ಸ್ಪಂದಿಸಿರುವ ಕುಕನೂರು ಪೊಲೀಸ್ ಠಾಣೆಯು ಈ ಕುರಿತು ಅಧಿಕೃತ ಹಿಂಬರಹದ ಮೂಲಕ ಕೈಗೊಂಡಿರುವ ಕ್ರಮಗಳ ವಿವರಗಳನ್ನು ನೀಡಿದೆ.
