BREAKING : ಎಸ್‌ಸಿ ಒಳಮೀಸಲಾತಿ ಆದೇಶಕ್ಕೆ ಹೈಕೋರ್ಟ್ ಬ್ರೇಕ್? ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ!

ಪ್ರಜಾವೀಕ್ಷಣೆ ಡಿಜಿಟಲ್ ಸುದ್ದಿ :
ಬೆಂಗಳೂರು: ಪರಿಶಿಷ್ಟ ಜಾತಿಗಳ (ಎಸ್‌ಸಿ) ಒಳಮೀಸಲಾತಿ ವರ್ಗೀಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಇತ್ತೀಚೆಗೆ ಹೊರಡಿಸಿದ್ದ ಮಹತ್ವದ ಆದೇಶಕ್ಕೆ ಈಗ ಕಾನೂನು ಸಂಕಷ್ಟ ಎದುರಾಗಿದೆ. ಸರ್ಕಾರದ ಈ ನೂತನ ಆದೇಶವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
’ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಒಕ್ಕೂಟ’ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜು ಅವರಿದ್ದ ಏಕಸದಸ್ಯ ಪೀಠವು ಈ ಆದೇಶ ನೀಡಿದ್ದು, ಸರ್ಕಾರದ ಮುಂದಿನ ನಡೆಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿದೆ.
