You are currently viewing CRIME NEWS : ಭೀಕರ ರಸ್ತೆ ಅಪಘಾತ: ಡಿವೈಡರ್ ದಾಟಿ ಓಮ್ನಿಗೆ ಡಿಕ್ಕಿ ಹೊಡೆದ ಟಾಟಾ ಎಸಿ; ಒಂದೇ ಕುಟುಂಬದ ನಾಲ್ವರ ದುರ್ಮರಣ, ಆರು ಮಂದಿಗೆ ಗಂಭೀರ ಗಾಯ!

CRIME NEWS : ಭೀಕರ ರಸ್ತೆ ಅಪಘಾತ: ಡಿವೈಡರ್ ದಾಟಿ ಓಮ್ನಿಗೆ ಡಿಕ್ಕಿ ಹೊಡೆದ ಟಾಟಾ ಎಸಿ; ಒಂದೇ ಕುಟುಂಬದ ನಾಲ್ವರ ದುರ್ಮರಣ, ಆರು ಮಂದಿಗೆ ಗಂಭೀರ ಗಾಯ!

CRIME NEWS : ಭೀಕರ ರಸ್ತೆ ಅಪಘಾತ: ಡಿವೈಡರ್ ದಾಟಿ ಓಮ್ನಿಗೆ ಡಿಕ್ಕಿ ಹೊಡೆದ ಟಾಟಾ ಎಸಿ; ಒಂದೇ ಕುಟುಂಬದ ನಾಲ್ವರ ದುರ್ಮರಣ, ಆರು ಮಂದಿಗೆ ಗಂಭೀರ ಗಾಯ!

ಪ್ರಜಾವೀಕ್ಷಣೆ ಡಿಜಿಟಲ್ ಸುದ್ದಿ : 

ಕುಕನೂರು, ಜೂನ್ 27 : ತಾಲೂಕಿನ ಭಾನಾಪುರ ಸಮೀಪದ ರಾಷ್ಟ್ರೀಯ ಹೆದ್ದಾರಿ–63ರಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟು, ಆರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಅಪಘಾತದಲ್ಲಿ ಮೃತಪಟ್ಟವರನ್ನು ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕಬ್ಬಾರ್ ಗ್ರಾಮದ ನಿವಾಸಿಗಳಾದ ಕೆಂಚಮ್ಮ ಬಾಳೆಕಾಯಿ (35), ಅಮೃತಾ ಕೋಟ್ಯಾಳ್ (25), ರಮೇಶ್ ಬಳ್ಳಾರಿ (45) ಹಾಗೂ ಪ್ರವೀಣ್ (23) ಎಂದು ಗುರುತಿಸಲಾಗಿದೆ.

ನಿಯಂತ್ರಣ ತಪ್ಪಿ ನುಗ್ಗಿದ ಟಾಟಾ ಎಸಿ: ಮಂತ್ರಾಲಯದತ್ತ ಪ್ರಯಾಣಿಸುತ್ತಿದ್ದ ಕುಟುಂಬಕ್ಕೆ ಎದುರಾದ ಯಮನ ರೂಪದ ಟಾಟಾ ಎಸಿ!

​ಪೊಲೀಸ್ ಮೂಲಗಳ ಪ್ರಕಾರ, ಸಂತ್ರಸ್ತ ಕುಟುಂಬದವರು ಓಮ್ನಿ ಕಾರಿನಲ್ಲಿ ಮಂತ್ರಾಲಯಕ್ಕೆ ತೆರಳುತ್ತಿದ್ದರು. ಶುಕ್ರವಾರ ರಾತ್ರಿ ಸುಮಾರು 2 ಗಂಟೆಯ ವೇಳೆಗೆ ಭಾನಾಪುರ ಬಳಿ ತಲುಪಿದಾಗ, ಪಕ್ಕದ ರಸ್ತೆಯಲ್ಲಿ ಸಂಚರಿಸುತ್ತಿದ್ದ ಟಾಟಾ ಎಸಿಯೊಂದು ಚಾಲಕನ ನಿಯಂತ್ರಣ ತಪ್ಪಿದೆ. ವೇಗವಾಗಿ ಬಂದ ಟಾಟಾ ಎಸಿಯು ರಸ್ತೆ ಮಧ್ಯದ ಡಿವೈಡರ್ ದಾಟಿ, ಎದುರಿನ ರಸ್ತೆಗೆ ನುಗ್ಗಿ ಓಮ್ನಿ ಕಾರಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಓಮ್ನಿ ಕಾರು ಸಂಪೂರ್ಣ ಜಜ್ಜುಗುಜ್ಜಾಗಿದ್ದು, ನಾಲ್ವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

​ಆಸ್ಪತ್ರೆಗೆ ದಾಖಲು, ಇಬ್ಬರ ಸ್ಥಿತಿ ಚಿಂತಾಜನಕ..!!

​ಅಪಘಾತದಲ್ಲಿ ಕಾರಿನಲ್ಲಿದ್ದ ಇನ್ನು ಆರು ಮಂದಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳ ಪೈಕಿ ಇಬ್ಬರ ಪರಿಸ್ಥಿತಿ ಅತ್ಯಂತ ಚಿಂತಾಜನಕವಾಗಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.

ಘಟನಾ ಸ್ಥಳಕ್ಕೆ ಕುಕನೂರು ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಭೀಕರ ಅಪಘಾತಕ್ಕೆ ಸಂಬಂಧಿಸಿದಂತೆ ಕುಕನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

Prajavikshane

Chandru R Bhanapaur

Leave a Reply

error: Content is protected !!