You are currently viewing LOCAL NEWS : ಕುಕನೂರು |ಇಂದು ಕಾ.ನಿ.ಪ.ಧ್ವನಿ ಸಂಘದಿಂದ ಪತ್ರಿಕಾ ದಿನಾಚರಣೆ..!

LOCAL NEWS : ಕುಕನೂರು |ಇಂದು ಕಾ.ನಿ.ಪ.ಧ್ವನಿ ಸಂಘದಿಂದ ಪತ್ರಿಕಾ ದಿನಾಚರಣೆ..!

LOCAL NEWS : ಕುಕನೂರು |ಇಂದು ಕಾ.ನಿ.ಪ.ಧ್ವನಿ ಸಂಘದಿಂದ ಪತ್ರಿಕಾ ದಿನಾಚರಣೆ..!

ಪ್ರಜಾವೀಕ್ಷಣೆ ಡಿಜಿಟಲ್ ಸುದ್ದಿ : 

ಕುಕನೂರು, ಜುಲೈ 01 : ತಾಲೂಕಿನ ಇಟಗಿ ಗ್ರಾಮದ ಪಿಎಂಶ್ರೀ ಆದರ್ಶ ವಿದ್ಯಾಲಯದಲ್ಲಿ ಇಂದು. ಜು. 1ರಂದು ಪತ್ರಿಕಾ ದಿನಾಚರಣೆ ಯಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ (ರಿ.), ಬೆಂಗಳೂರು, ಕುಕನೂರು ತಾಲೂಕು ಸಮಿತಿ ವತಿಯಿ ಬುಧವಾರ ಬೆಳಿಗ್ಗೆ 10 ಗಂಟೆಗೆ ಪತ್ರಿಕಾ ದಿನಾಚರಣೆಯನ್ನು ಆಯೋಜಿಸಲಾಗಿದೆ.

ತಹಶೀಲ್ದಾರ್ ಬಸವರಾಜ ಬೆಣ್ಣೆಶಿರೂರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಸಂಘದ ತಾಲೂಕು ಅಧ್ಯಕ್ಷ ಚಂದ್ರು ಆರ್. ಭಾನಾಪುರ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಮದಲ್ಲಿ ಮುಖ್ಯ ಅತಿಥಿಗಳಾಗಿ ತಾಲೂಕು ಪಂಚಾಯಿತಿ ಇ ಓ ಸಂತೋಷ ಪಾಟೀಲ ಬಿರಾದಾರ್, ಬಿ ಇ ಓ ಅಶೋಕ ಗೌಡ್ರು , ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಮಂಜುನಾಥ ಬ್ಯಾಲಹುಣಸಿ, ಕುಕನೂರು ಪೊಲೀಸ್ ಠಾಣೆಯ ಪಿಎಸ್‌ಐ ಎಸ್.ಪಿ. ನಾಯ್ಕ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಕೊಪ್ಪಳ ಜಿಲ್ಲಾ ಘಟಕದ ಅಧ್ಯಕ್ಷ ಸುನೀಲಕುಮಾರ ಮಠದ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುತ್ತು ದೊಡ್ಡಮನಿ, ಯಲಬುರ್ಗಾ ತಾಲೂಕಾ ಅಧ್ಯಕ್ಷ ಶಿವಮೂರ್ತಿ ಇಟಗಿ,ತಾಲೂಕಾ ಪ್ರಧಾನ ಕಾರ್ಯದರ್ಶಿ ಬಸವರಾಜ ಕೋನಾರಿ ಭಾಗವಹಿಸಲಿದ್ದಾರೆ.

ಸಂಘದ ತಾಲೂಕು ಉಪಾಧ್ಯಕ್ಷ ಮುರಾರಿ ಬಜೆಂತ್ರಿ ನಿರೂಪಣೆ ಮಾಡಲಿದ್ದು, ಖಜಾಂಚಿ ವೀರಯ್ಯ ವಿ. ಹಿರೇಮಠ ಸ್ವಾಗತಿಸಲಿದ್ದಾರೆ. ಸಹ ಕಾರ್ಯದರ್ಶಿ ಭೀಮಾಶಂಕರ ಪಾಣೇಗಾಂವ ವಂದನಾರ್ಪಣೆ ಸಲ್ಲಿಸಲಿದ್ದಾರೆ. ಸಂಘದ ಎಲ್ಲ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಸಂಘದ ತಾಲೂಕು ಅಧ್ಯಕ್ಷ ರಾದ ಚಂದ್ರು ಆರ್ ಬಾನಾಪೂರ ಪ್ರಕಟಣೆಗೆ ತಿಳಿಸಿದ್ದಾರೆ.

Prajavikshane

Chandru R Bhanapaur

Leave a Reply

error: Content is protected !!