Post Views: 494
LOCAL NEWS : ಕನ್ನಡ ಫಿಲಂ ಚೇಂಬರ್ ನಿಂದ ಕು. ರಾಣಿ ಹಳ್ಳಿಗೆ ಪ್ರಶಸ್ತಿ..!!

ಪ್ರಜಾವೀಕ್ಷಣೆ ಡಿಜಿಟಲ್ ಸುದ್ದಿ :
ಕೊಪ್ಪಳ, ಜುಲೈ 01 : ಬಳಗೇರಿ ಗ್ರಾಮ ಆಡಳಿತ ಅಧಿಕಾರಿ ಕುಮಾರಿ ರಾಣಿ ಹಳ್ಳಿ ಅವರ ಕನ್ನಡ,ಸಾಹಿತ್ಯ ಮತ್ತು ಸಂಸ್ಕೃತಿ ಯ ಸೇವೆಯನ್ನು ಗುರುತಿಸಿ ಬೆಂಗಳೂರಿನ ಕನ್ನಡ ಫಿಲಂ ಚೇಂಬರ್ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ.
ಜೂನ್ 28 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕುಮಾರಿ ರಾಣಿ ಹಳ್ಳಿ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ಮಾಡಲಾಯಿತು.

ಕೊಪ್ಪಳ ಜಿಲ್ಲೆಯ ಕುಕನೂರ್ ತಾಲೂಕಿನ ಕಂದಾಯ ಇಲಾಖೆಯ ಸೇವೆಯಲ್ಲಿದ್ದುಕೊಂಡೇ ರಾಣಿ ಹಳ್ಳಿ ಅವರು ಕನ್ನಡ ಸಾಹಿತ್ಯ, ಸಂಸ್ಕೃತಿಗೆ ತಮ್ಮದೇ ಅದ ಸೇವೆ ಸಲ್ಲಿಸುತ್ತಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ ಸದಸ್ಯರಾಗಿ, ಚುಟುಕು ಸಾಹಿತ್ಯ ಪರಿಷತ್ ಉಪಾಧ್ಯಕ್ಷರಾಗಿ ವೃತ್ತಿಯ ಜೊತೆಗೆ ಕನ್ನಡ ಸೇವೆಯಲ್ಲಿ ಸಕ್ರಿಯರಾಗಿದ್ದಾರೆ.
ಸರ್ಕಾರಿ, ಸಂಘ ಸಂಸ್ಥೆಗಳ ಅನೇಕ ಕಾರ್ಯಕ್ರಮಗಳಲ್ಲಿ ಕುಮಾರಿ ರಾಣಿ ಹಳ್ಳಿ ಅವರು ತಮ್ಮ ನಿರೂಪಣಾ ಶೈಲಿಯಿಂದ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಇವರ ಕನ್ನಡಪರ ಸೇವೆಯನ್ನು ಗುರುತಿಸಿ ಹಲವಾರು ಸಂಘ ಸಂಸ್ಥೆಗಳು ಪ್ರಶಸ್ತಿ ನೀಡಿ ಸನ್ಮಾನಿಸಿವೆ.