You are currently viewing LOCAL NEWS : ಯಲಬುರ್ಗಾ, ಕುಕನೂರು ಪಟ್ಟಣಗಳಿಗೆ ಡಿಜಿಟಲ್ ಲೈಬ್ರರಿ ಹಾಗೂ ಎಐ ಶಿಕ್ಷಕರ ಸೌಲಭ್ಯ: ಶಾಸಕ ಬಸವರಾಜ್ ರಾಯರೆಡ್ಡಿ ಭರವಸೆ!

LOCAL NEWS : ಯಲಬುರ್ಗಾ, ಕುಕನೂರು ಪಟ್ಟಣಗಳಿಗೆ ಡಿಜಿಟಲ್ ಲೈಬ್ರರಿ ಹಾಗೂ ಎಐ ಶಿಕ್ಷಕರ ಸೌಲಭ್ಯ: ಶಾಸಕ ಬಸವರಾಜ್ ರಾಯರೆಡ್ಡಿ ಭರವಸೆ!

LOCAL NEWS : ಯಲಬುರ್ಗಾ, ಕುಕನೂರು ಪಟ್ಟಣಗಳಿಗೆ ಡಿಜಿಟಲ್ ಲೈಬ್ರರಿ ಹಾಗೂ ಎಐ ಶಿಕ್ಷಕರ ಸೌಲಭ್ಯ: ಶಾಸಕ ಬಸವರಾಜ್ ರಾಯರೆಡ್ಡಿ ಭರವಸೆ!

 ಪ್ರಜಾ ವೀಕ್ಷಣೆ ಡಿಜಿಟಲ್ ಸುದ್ದಿ : 

ಕುಕನೂರು, ಜುಲೈ 3 : ಕ್ಷೇತ್ರದ ವಿದ್ಯಾರ್ಥಿಗಳಿಗೆ ಆಧುನಿಕ ಹಾಗೂ ಗುಣಮಟ್ಟದ ಶಿಕ್ಷಣ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಯಲಬುರ್ಗಾ ಮತ್ತು ಕುಕನೂರು ಪಟ್ಟಣಗಳಲ್ಲಿ ಡಿಜಿಟಲ್ ಲೈಬ್ರರಿಗಳನ್ನು ಸ್ಥಾಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಬಸವರಾಜ್ ರಾಯರೆಡ್ಡಿ ತಿಳಿಸಿದ್ದಾರೆ.

ಗುರುವಾರ (ಜುಲೈ 03) ಕುಕನೂರಿನ ಸಾರ್ವಜನಿಕರ ಭೇಟಿ ಕಾರ್ಯಕ್ರಮದ ಸಂದರ್ಭದಲ್ಲಿ ಮಾತನಾಡಿದ ಅವರು, ಇಂದಿನ ಮಾಹಿತಿ ತಂತ್ರಜ್ಞಾನದ ಯುಗದಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಡಿಜಿಟಲ್ ಗ್ರಂಥಾಲಯಗಳ ಅವಶ್ಯಕತೆ ಹೆಚ್ಚಾಗಿದ್ದು, ಈ ನಿಟ್ಟಿನಲ್ಲಿ ಅಗತ್ಯ ಅನುದಾನ ಎಷ್ಟು ಬೇಕಾಗುತ್ತದೆ ಎಂಬುದನ್ನು ಪರಿಶೀಲಿಸಿ, ತಕ್ಷಣವೇ ಪ್ರಸ್ತಾವನೆ ಸಿದ್ಧಪಡಿಸುವಂತೆ ಸಂಬಂಧಿತ ಇಲಾಖೆಯ ಮೇಲಾಧಿಕಾರಿಗಳಿಗೆ ದೂರವಾಣಿ ಮೂಲಕ ಸೂಚನೆ ನೀಡಿದರು.

‘ಅಕ್ಷರ ಆವಿಷ್ಕಾರ’ ಯೋಜನೆಯಡಿ ಡಿಜಿಟಲ್ ಗ್ರಂಥಾಲಯ..!

ರಾಜ್ಯ ಸರ್ಕಾರದ ‘ಅಕ್ಷರ ಆವಿಷ್ಕಾರ’ ಯೋಜನೆಯಡಿ ಯಲಬುರ್ಗಾ ಮತ್ತು ಕುಕನೂರು ಪಟ್ಟಣಗಳಲ್ಲಿ ಅತ್ಯಾಧುನಿಕ ಡಿಜಿಟಲ್ ಲೈಬ್ರರಿಗಳನ್ನು ಸ್ಥಾಪಿಸುವ ಉದ್ದೇಶವಿದೆ. ಈ ಗ್ರಂಥಾಲಯಗಳಲ್ಲಿ ವಿದ್ಯಾರ್ಥಿಗಳಿಗೆ ಇ-ಪುಸ್ತಕಗಳು, ಡಿಜಿಟಲ್ ಅಧ್ಯಯನ ಸಾಮಗ್ರಿಗಳು, ಕಂಪ್ಯೂಟರ್ ವ್ಯವಸ್ಥೆ ಹಾಗೂ ಇಂಟರ್ನೆಟ್ ಸೌಲಭ್ಯಗಳನ್ನು ಒದಗಿಸಿ ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆಗೆ ಪೂರಕ ವಾತಾವರಣ ನಿರ್ಮಿಸಲಾಗುವುದು ಎಂದು ಅವರು ತಿಳಿಸಿದರು.

ಗ್ರಾಮೀಣ ವಿದ್ಯಾರ್ಥಿಗಳಿಗೆ ಎಐ ಶಿಕ್ಷಕರ ಸೌಲಭ್ಯ..!

ಶಿಕ್ಷಣ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಬಳಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಮುಂದಿನ ದಿನಗಳಲ್ಲಿ ಡಿಜಿಟಲ್ ಲೈಬ್ರರಿಗಳೊಂದಿಗೆ ಎಐ (Artificial Intelligence) ಶಿಕ್ಷಕರ ಸೌಲಭ್ಯವನ್ನೂ ಪರಿಚಯಿಸುವ ಉದ್ದೇಶವಿದೆ ಎಂದು ಶಾಸಕ ಬಸವರಾಜ್ ರಾಯರೆಡ್ಡಿ ಹೇಳಿದರು.

ಈ ವ್ಯವಸ್ಥೆಯಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೂ ನಗರ ಪ್ರದೇಶಗಳ ವಿದ್ಯಾರ್ಥಿಗಳಂತೆಯೇ ಅತ್ಯಾಧುನಿಕ, ಗುಣಮಟ್ಟದ ಹಾಗೂ ತಂತ್ರಜ್ಞಾನ ಆಧಾರಿತ ಶಿಕ್ಷಣ ಲಭ್ಯವಾಗಲಿದ್ದು, ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆಗೆ ಹೆಚ್ಚಿನ ನೆರವು ದೊರೆಯಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಶಾಸಕರ ಈ ದೂರದೃಷ್ಟಿಯ ಶಿಕ್ಷಣ ಅಭಿವೃದ್ಧಿ ಯೋಜನೆಗೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಹರ್ಷ ವ್ಯಕ್ತಪಡಿಸಿದ್ದು, ಡಿಜಿಟಲ್ ಲೈಬ್ರರಿಗಳ ಸ್ಥಾಪನೆ ಶೀಘ್ರದಲ್ಲೇ ಕಾರ್ಯರೂಪಕ್ಕೆ ಬರಲಿ ಎಂಬ ಆಶಯ ವ್ಯಕ್ತಪಡಿಸಿದ್ದಾರೆ.

Prajavikshane

Chandru R Bhanapaur

Leave a Reply

error: Content is protected !!