You are currently viewing LOCAL NEWS : ಯಲಬುರ್ಗಾ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಶ್ರೀನಿವಾಸ್ ಬನಿಗೋಳ ಅಧಿಕಾರ ಸ್ವೀಕಾರ!
ಯಲಬುರ್ಗಾ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀನಿವಾಸ್ ಬನಿಗೋಳ ಅವರನ್ನು ವಿವಿಧ ಶಿಕ್ಷಕರ ಸಂಘಗಳ ಪದಾಧಿಕಾರಿಗಳು ಸನ್ಮಾನಿಸಿ ಅಭಿನಂದಿಸಿದರು.

LOCAL NEWS : ಯಲಬುರ್ಗಾ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಶ್ರೀನಿವಾಸ್ ಬನಿಗೋಳ ಅಧಿಕಾರ ಸ್ವೀಕಾರ!

LOCAL NEWS : ಯಲಬುರ್ಗಾ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಶ್ರೀನಿವಾಸ್ ಬನಿಗೋಳ ಅಧಿಕಾರ ಸ್ವೀಕಾರ!

ಯಲಬುರ್ಗಾ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀನಿವಾಸ್ ಬನಿಗೋಳ ಅವರನ್ನು ವಿವಿಧ ಶಿಕ್ಷಕರ ಸಂಘಗಳ ಪದಾಧಿಕಾರಿಗಳು ಸನ್ಮಾನಿಸಿ ಅಭಿನಂದಿಸಿದರು.

ಪ್ರಜಾವೀಕ್ಷಣೆ ಡಿಜಿಟಲ್ ಸುದ್ದಿ : 

ಯಲಬುರ್ಗಾ, ಜುಲೈ 3: ಯಲಬುರ್ಗಾ ಹಾಗೂ ಕುಕನೂರು ಶೈಕ್ಷಣಿಕ ವಲಯದ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಶ್ರೀನಿವಾಸ್ ಬನಿಗೋಳ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು. ಬಳಿಕ ಶಿಕ್ಷಣ ಇಲಾಖೆಯ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಅವರನ್ನು ಸನ್ಮಾನಿಸಿ ಆತ್ಮೀಯವಾಗಿ ಸ್ವಾಗತಿಸಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಶ್ರೀನಿವಾಸ್ ಬನಿಗೋಳ, ಶಿಕ್ಷಣ ಇಲಾಖೆಯ ಅಭಿವೃದ್ಧಿಗೆ ಎಲ್ಲರ ಸಹಕಾರ ಮತ್ತು ಸಲಹೆ ಅಗತ್ಯವಾಗಿದೆ. ಯಾವುದೇ ವಿಷಯದಲ್ಲಿ ಏಕಪಕ್ಷೀಯ ನಿರ್ಧಾರ ಕೈಗೊಳ್ಳದೆ, ಶಿಕ್ಷಕರು ಹಾಗೂ ವಿವಿಧ ಸಂಘಟನೆಗಳ ಅಭಿಪ್ರಾಯಗಳನ್ನು ಪಡೆದು ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಇಲಾಖೆಗೆ ಅನುಕೂಲವಾಗುವ ರೀತಿಯಲ್ಲಿ ನಿರ್ಧಾರಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.

“ನಾನು ಮಾತಿಗಿಂತ ಕೆಲಸಕ್ಕೆ ಹೆಚ್ಚು ಆದ್ಯತೆ ನೀಡುವ ವ್ಯಕ್ತಿ. ಇಲಾಖೆಯ ಪ್ರತಿಯೊಬ್ಬ ಸಿಬ್ಬಂದಿ ಹಾಗೂ ಶಿಕ್ಷಕರು ಸಹ ಪ್ರಾಮಾಣಿಕತೆ ಮತ್ತು ಕರ್ತವ್ಯನಿಷ್ಠೆಯಿಂದ ಕಾರ್ಯನಿರ್ವಹಿಸಿದರೆ ಶಿಕ್ಷಣ ಇಲಾಖೆಗೆ ಉತ್ತಮ ಹೆಸರು ತರುವುದು ಸಾಧ್ಯ. ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡುವ ಮೂಲಕ ಮಾದರಿ ಶೈಕ್ಷಣಿಕ ವಾತಾವರಣ ನಿರ್ಮಿಸೋಣ” ಎಂದು ಅವರು ಕರೆ ನೀಡಿದರು.

ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಪಿ.ಜಿ. ದಾನಿ ಮಾತನಾಡಿ, ಶ್ರೀನಿವಾಸ್ ಬನಿಗೋಳ ಅವರು ದಕ್ಷ, ಪ್ರಾಮಾಣಿಕ ಹಾಗೂ ಜನಪರ ಅಧಿಕಾರಿಯಾಗಿ ಸೇವೆ ಸಲ್ಲಿಸಿರುವ ಅನುಭವ ಹೊಂದಿದ್ದು, ಅವರ ಆಗಮನದಿಂದ ಯಲಬುರ್ಗಾ-ಕುಕನೂರು ಶೈಕ್ಷಣಿಕ ವಲಯದ ಅಭಿವೃದ್ಧಿಗೆ ಹೊಸ ಚೈತನ್ಯ ದೊರೆಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾ ಖಜಾಂಚಿ ಬಸವರಾಜ ಮೇಟಿ, ಕುಕನೂರು ತಾಲೂಕು ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸುರೇಶ್ ಅಬ್ಬಿಗೇರಿ, ತಾಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಶಿವಾನಂದ ಹೊಸಮನಿ, ಕಾರ್ಯದರ್ಶಿ ರಂಗಪ್ಪ ಓಲೆಕಾರ, ಯಲಬುರ್ಗಾ ತಾಲೂಕು ಪ್ರೌಢಶಾಲಾ ಶಿಕ್ಷಕರ ಪತ್ತಿನ ಸಂಘದ ಅಧ್ಯಕ್ಷ ಉದಯ ತಳವಾರ, ಎನ್‌ಜಿಒ ನಿರ್ದೇಶಕ ಶರಣಪ್ಪ ಬಿಸರಹಳ್ಳಿ, ಸುರೇಶ್ ಮಾದನೂರು, ದೈಹಿಕ ಶಿಕ್ಷಣಾಧಿಕಾರಿ ಶರಣಪ್ಪ ವೀರಾಪುರ, ವಿರೂಪಾಕ್ಷಪ್ಪ ಮ್ಯಾಳಿ, ಅನುದಾನಿತ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಿದ್ದರೆಡ್ಡಿ, ಯಲಬುರ್ಗಾ ತಾಲೂಕು ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜಗದೀಶ ಬಳಿಗಾರ್, ಕಾರ್ಯದರ್ಶಿ ಶರಣಪ್ಪ ಜಕ್ಲಿ, ವೆಂಕಟೇಶ್ ಬಂಡಿವಡ್ಡರ್, ಸೋಮಶೇಖರ ನಿಲೋಗನ್, ರಾಜು ಪೂಜಾರ್, ಚಂದ್ರು ದೊಡ್ಡಮನಿ ಸೇರಿದಂತೆ ಶಿಕ್ಷಕರು, ಸಿಬ್ಬಂದಿ ವರ್ಗ ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Prajavikshane

Chandru R Bhanapaur

Leave a Reply

error: Content is protected !!