You are currently viewing FLASH NEWS : ಕೆಪಿಎಸ್‌ಸಿ ಅಧ್ಯಕ್ಷರ ವಿರುದ್ಧದ ಆರೋಪ: ವಜಾ ಮಾಡಿ ನ್ಯಾಯಾಂಗ ತನಿಖೆ ನಡೆಸಲು ಎಐಡಿವೈಒ ಆಗ್ರಹ.!

FLASH NEWS : ಕೆಪಿಎಸ್‌ಸಿ ಅಧ್ಯಕ್ಷರ ವಿರುದ್ಧದ ಆರೋಪ: ವಜಾ ಮಾಡಿ ನ್ಯಾಯಾಂಗ ತನಿಖೆ ನಡೆಸಲು ಎಐಡಿವೈಒ ಆಗ್ರಹ.!

FLASH NEWS : ಕೆಪಿಎಸ್‌ಸಿ ಅಧ್ಯಕ್ಷರ ವಿರುದ್ಧದ ಆರೋಪ: ವಜಾ ಮಾಡಿ ನ್ಯಾಯಾಂಗ ತನಿಖೆ ನಡೆಸಲು ಎಐಡಿವೈಒ ಆಗ್ರಹ.!

 

ಪ್ರಜಾವೀಕ್ಷಣೆ ಡಿಜಿಟಲ್ ಸುದ್ದಿ :

ಕೊಪ್ಪಳ, ಜುಲೈ 5: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಅಧ್ಯಕ್ಷ ಶಿವಶಂಕರಪ್ಪ ಎಸ್. ಸಾಹುಕಾರ್ ಅವರ ವಿರುದ್ಧ ಕೇಳಿಬಂದಿರುವ ಅಧಿಕಾರ ದುರುಪಯೋಗ ಹಾಗೂ ತಮ್ಮ ಪುತ್ರಿಯರ ನೇಮಕಾತಿಗೆ ಸಂಬಂಧಿಸಿದಂತೆ ಸುಳ್ಳು ಆದಾಯ ಪ್ರಮಾಣಪತ್ರ ಸಲ್ಲಿಕೆಗೆ ಸಹಕರಿಸಿದ ಆರೋಪಗಳ ಕುರಿತು ಎಐಡಿವೈಒ (AIDYO) ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಈ ಕುರಿತು ಪ್ರಕಟಣೆ ನೀಡಿರುವ ಎಐಡಿವೈಒ ಜಿಲ್ಲಾ ಕಾರ್ಯದರ್ಶಿ ಶರಣು ಪಾಟೀಲ್, ಆರೋಪಗಳು ಅತ್ಯಂತ ಗಂಭೀರವಾಗಿದ್ದು, ಇದು ಕೇವಲ ವೈಯಕ್ತಿಕ ಭ್ರಷ್ಟಾಚಾರದ ಪ್ರಕರಣವಲ್ಲದೆ ರಾಜ್ಯದ ಲಕ್ಷಾಂತರ ಉದ್ಯೋಗಾಕಾಂಕ್ಷಿಗಳ ವಿಶ್ವಾಸಕ್ಕೆ ಧಕ್ಕೆ ತರುವ ಬೆಳವಣಿಗೆಯಾಗಿದೆ ಎಂದು ಹೇಳಿದ್ದಾರೆ. ಆದ್ದರಿಂದ ಕೆಪಿಎಸ್‌ಸಿ ಅಧ್ಯಕ್ಷರನ್ನು ಕೂಡಲೇ ಹುದ್ದೆಯಿಂದ ವಜಾಗೊಳಿಸಿ, ನ್ಯಾಯಾಂಗ ತನಿಖೆ ನಡೆಸುವ ಮೂಲಕ ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ರಾಜ್ಯದ ಯುವಕರು ವರ್ಷಗಳ ಕಾಲ ಶ್ರಮಪಟ್ಟು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿದ್ದರೆ, ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಹಾಗೂ ಭ್ರಷ್ಟಾಚಾರ ನಿರ್ಮೂಲನೆಗಾಗಿ ಹಲವು ಹೋರಾಟಗಳನ್ನು ನಡೆಸಿದ್ದಾರೆ. ಇಂತಹ ಸಂದರ್ಭದಲ್ಲಿ ಅಧ್ಯಕ್ಷರ ಮೇಲೆಯೇ ಸ್ವಜನಪಕ್ಷಪಾತದ ಆರೋಪ ಕೇಳಿಬಂದಿರುವುದು ಯುವಜನರಲ್ಲಿ ತೀವ್ರ ಅಸಮಾಧಾನ ಮೂಡಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕೆಪಿಎಸ್‌ಸಿಯಲ್ಲಿ ಅಧ್ಯಕ್ಷರು ಮತ್ತು ಸದಸ್ಯರ ನಡುವೆ ಸಮನ್ವಯದ ಕೊರತೆ, ನೇಮಕಾತಿ ಪ್ರಕ್ರಿಯೆಯಲ್ಲಿ ವಿಳಂಬ ಸೇರಿದಂತೆ ಹಲವು ಆರೋಪಗಳು ಈ ಹಿಂದಿನಿಂದಲೂ ಕೇಳಿಬರುತ್ತಿದ್ದವು. ಈಗ ತಮ್ಮ ಕುಟುಂಬದವರ ನೇಮಕಾತಿಗೆ ಮಾತ್ರ ವೇಗವಾಗಿ ಕ್ರಮ ಕೈಗೊಂಡಿರುವ ಆರೋಪದಿಂದ ಆಯೋಗದ ಮೇಲಿನ ಸಾರ್ವಜನಿಕರ ವಿಶ್ವಾಸ ಕುಸಿದಿದೆ ಎಂದು ಎಐಡಿವೈಒ ಅಭಿಪ್ರಾಯಪಟ್ಟಿದೆ.

ಸಾಮಾಜಿಕ ನ್ಯಾಯದ ಉದ್ದೇಶದಿಂದ ಜಾರಿಯಲ್ಲಿರುವ ಮೀಸಲಾತಿ ವ್ಯವಸ್ಥೆಯನ್ನು ಪ್ರಭಾವಿ ವರ್ಗಗಳು ದುರುಪಯೋಗಪಡಿಸಿಕೊಳ್ಳುತ್ತಿರುವುದು ನಿಜವಾದ ಅರ್ಹ ಅಭ್ಯರ್ಥಿಗಳ ಅವಕಾಶ ಕಸಿದುಕೊಳ್ಳುವಂತಾಗಿದೆ. ಹೆಚ್ಚಿನ ಆದಾಯವಿದ್ದರೂ ಕಡಿಮೆ ಆದಾಯವಿದೆ ಎಂದು ಸುಳ್ಳು ಮಾಹಿತಿ ನೀಡಿ ಸೌಲಭ್ಯ ಪಡೆಯಲು ಯತ್ನಿಸಿರುವ ಆರೋಪಗಳು ಸಮಾನ ಅವಕಾಶದ ತತ್ವಕ್ಕೆ ವಿರುದ್ಧವಾಗಿವೆ ಎಂದು ಸಂಘಟನೆ ಹೇಳಿದೆ.

ಸರ್ಕಾರವು ಕೆಪಿಎಸ್‌ಸಿಯಲ್ಲಿನ ಭ್ರಷ್ಟಾಚಾರದ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಂಡು, ತಪ್ಪಿತಸ್ಥರನ್ನು ಹುದ್ದೆಯಿಂದ ದೂರಗೊಳಿಸಬೇಕು. ಜೊತೆಗೆ ಪಿ.ಸಿ. ಹೋಟಾ ಸಮಿತಿಯ ಶಿಫಾರಸುಗಳನ್ನು ತಕ್ಷಣ ಜಾರಿಗೊಳಿಸಬೇಕು ಎಂದು ಎಐಡಿವೈಒ ಆಗ್ರಹಿಸಿದೆ. ಈ ಬೇಡಿಕೆಗಳ ಈಡೇರಿಕೆಗೆ ರಾಜ್ಯದ ಉದ್ಯೋಗಾಕಾಂಕ್ಷಿಗಳು ಒಗ್ಗಟ್ಟಿನ ಹೋರಾಟ ನಡೆಸಬೇಕೆಂದು ಸಂಘಟನೆ ಕರೆ ನೀಡಿದೆ.

Prajavikshane

Chandru R Bhanapaur

Leave a Reply

error: Content is protected !!