You are currently viewing KOPPAL NEWS : ಹಸಿರು ಕ್ರಾಂತಿ ಹರಿಕಾರ ಡಾ. ಬಾಬು ಜಗಜೀವನ ರಾಮ್ ಪುಣ್ಯಸ್ಮರಣೆ: ಜಿಲ್ಲಾಡಳಿತದಿಂದ ಪುತ್ಥಳಿಗೆ ಮಾಲಾರ್ಪಣೆ

KOPPAL NEWS : ಹಸಿರು ಕ್ರಾಂತಿ ಹರಿಕಾರ ಡಾ. ಬಾಬು ಜಗಜೀವನ ರಾಮ್ ಪುಣ್ಯಸ್ಮರಣೆ: ಜಿಲ್ಲಾಡಳಿತದಿಂದ ಪುತ್ಥಳಿಗೆ ಮಾಲಾರ್ಪಣೆ

KOPPAL NEWS : ಹಸಿರು ಕ್ರಾಂತಿ ಹರಿಕಾರ ಡಾ. ಬಾಬು ಜಗಜೀವನ ರಾಮ್ ಪುಣ್ಯಸ್ಮರಣೆ: ಜಿಲ್ಲಾಡಳಿತದಿಂದ ಪುತ್ಥಳಿಗೆ ಮಾಲಾರ್ಪಣೆ

ಹಸಿರು ಕ್ರಾಂತಿಯ ಹರಿಕಾರರಿಗೆ ಅಧಿಕಾರಿಗಳಿಂದ ಗೌರವ ನಮನ!

ಪ್ರಜಾವೀಕ್ಷಣೆ ಡಿಜಿಟಲ್ ಸುದ್ದಿ : 

ಕೊಪ್ಪಳ, ಜುಲೈ 06 : ಹಸಿರು ಕ್ರಾಂತಿಯ ಹರಿಕಾರ ಹಾಗೂ ದೇಶದ ಮಾಜಿ ಉಪಪ್ರಧಾನಿಯಾಗಿದ್ದ ಡಾ. ಬಾಬು ಜಗಜೀವನ ರಾಮ್ ಅವರ ಪುಣ್ಯಸ್ಮರಣೆ ಅಂಗವಾಗಿ ಕೊಪ್ಪಳ ಜಿಲ್ಲಾಡಳಿತದಿಂದ ಸೋಮವಾರ ಗೌರವ ನಮನ ಸಲ್ಲಿಸಲಾಯಿತು.

ನಗರದ ಹೊಸಪೇಟೆ ರಸ್ತೆಯ ಶಿವಶಾಂತವೀರ ನಗರದ ನಿಜಶರಣ ಅಂಬಿಗರ ಚೌಡಯ್ಯ ಉದ್ಯಾನದಲ್ಲಿರುವ ಡಾ. ಬಾಬು ಜಗಜೀವನ ರಾಮ್, ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಬಸವೇಶ್ವರರ ಪುತ್ಥಳಿಗಳಿಗೆ ಜಿಲ್ಲಾಧಿಕಾರಿ ಡಾ. ಸುರೇಶ್ ಬಿ. ಇಟ್ನಾಳ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ ಅವರು ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಅಜ್ಜಪ್ಪ ಸೊಗಲದ, ಕೊಪ್ಪಳ ತಹಶೀಲ್ದಾರ್ ಬಸವರಾಜ ತನ್ನಳ್ಳಿ, ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ, ಸಮಾಜ ಕಲ್ಯಾಣ ಇಲಾಖೆಯ ಸಿಬ್ಬಂದಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದು, ಮಹನೀಯರ ಸೇವೆ ಮತ್ತು ಕೊಡುಗೆಗಳನ್ನು ಸ್ಮರಿಸಿದರು.

Prajavikshane

Chandru R Bhanapaur

Leave a Reply

error: Content is protected !!