ಮುದಗಲ್ಲ :- ಎ.ವಸಂತಕುಮಾರ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಮಾದಿಗ ಸಮಾಜ ಆಗ್ರಹ…

ಮುದಗಲ್ಲ ವರದಿ..

ಎ.ವಸಂತಕುಮಾರ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಮಾದಿಗ ಸಮಾಜ ಆಗ್ರಹ…

ಮುದಗಲ್ಲ  : ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ಕೆಪಿಸಿಸಿ ರಾಜ್ಯ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್‌ ಸದಸ್ಯ ಎ.ವಸಂತಕುಮಾರ್ ಅವರಿಗೆ ಸಚಿವ ಸ್ಥಾನ ನೀಡಬೇಕುಎಂದು ಮಾದಿಗ ಸಮಾಜದ ಮುಖಂಡರು ಆಗ್ರಹಿಸಿದ್ದಾರೆ.
ಪತ್ರಿಕೆ ಗೋಷ್ಠಿಯಲ್ಲಿ ದಲಿತ ಸಮಾಜ ಮುಖಂಡರಾದ  ಶರಣಪ್ಪ ಕಟ್ಟಿಮನಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ 
ವಸಂತಕುಮಾರ್ ಅವರು ಹಲವು ದಶಕಗಳಿಂದ ಕಾಂಗ್ರೆಸ್‌ಪಕ್ಷದ ನಿಷ್ಠಾವಂತ ಕಾರ್ಯಕರ್ತ ರಾಗಿ ಹಾಗೂ ಸಮರ್ಥ ಸಂಘಟಕ ರಾಗಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ. ರಾಜ್ಯ ಮಾತ್ರವಲ್ಲದೆ ವಿವಿಧ ರಾಜ್ಯಗಳಲ್ಲಿ ನಡೆದ ಚುನಾವಣೆಗಳಲ್ಲಿ ಪಕ್ಷದ ಪರವಾಗಿ ಸಕ್ರಿಯವಾಗಿ
ಕಾರ್ಯನಿರ್ವಹಿಸಿ ಸಂಘಟನಾ ಸಾಮರ್ಥ್ಯ ಪ್ರದರ್ಶಿಸಿರುವ ಅವರು, ರಾಯಚೂರು ಜಿಲ್ಲೆಯಲ್ಲಿ ಎರಡು ಬಾರಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿ ಪಕ್ಷವನ್ನು ತಳಮಟ್ಟದಿಂದ ಬಲಪಡಿಸುವಲ್ಲಿ ಮಹತ್ವದ ಪಾತ್ರವಹಿಸಿದ್ದಾರೆ ಎಂದು ಹೇಳಿದ್ದಾರೆ.
ನಂತರ ಮಾತನಾಡಿದ ಮಾದಿಗ ಸಮಾಜದ ಮಲ್ಲಪ್ಪ ಕನ್ನಾಪೂರ ಹಟ್ಟಿ ಅವರು ಮಾತನಾಡಿ ಹಲವಾರು ಚುನಾವಣೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಅವರ ಶ್ರಮ ಹಾಗೂ ಕಾರ್ಯತಂತ್ರ ಪ್ರಮುಖ ಕಾರಣವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು.
ನಂತರ ಮಾತನಾಡಿದ ಬಸವರಾಜ ಬಂದಕಮನೆ ಅವರು ಪಕ್ಷದ ಹೈಕಮಾಂಡ್‌ನ ವಿಶ್ವಾಸ ಗಳಿಸಿರುವ ಎ.
ವಸಂತಕುಮಾರ್ ಅವರು ಸಾರ್ವಜನಿಕ ಜೀವನದಲ್ಲಿಯೂ
ಉತ್ತಮ ಹೆಸರು ಪಡೆದಿದ್ದು, ಸಂಘಟನಾ ಶಕ್ತಿ ಹಾಗೂ
ಆಡಳಿತಾತ್ಮಕ ಅನುಭವ ಹೊಂದಿದ್ದಾರೆ. ಆದ್ದರಿಂದ ಅವರನ್ನು ನೂತನ ಸಚಿವ ಸಂಪುಟಕ್ಕೆ ಸೇರ್ಪಡೆಗೊಳಿಸಿ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ನಂತರ ಮಾತನಾಡಿದ ಸಮಾಜದ ಸಂಗಪ್ಪ ಹಿರೇಮನಿ ಅವರು “ಎ. ವಸಂತಕುಮಾರ್ ಅವರಿಗೆ ಸಚಿವ ಸ್ಥಾನ ದೊರೆತರೆ ರಾಯಚೂರು ಜಿಲ್ಲೆ ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಮತ್ತಷ್ಟು ವೇಗ ಸಿಗಲಿದೆ. ಜನರ ನಿರೀಕ್ಷೆಗಳಿಗೆ ಸ್ಪಂದಿಸುವ ಸಾಮರ್ಥ್ಯ ಅವರಲ್ಲಿದೆ” ಎಂದು ಕಾಂಗ್ರೆಸ್ ಹೈಕಮಾಂಡ್ ಹಾಗೂ ರಾಜ್ಯ ಸರ್ಕಾರವು ಅವರ ಸೇವೆ, ಅನುಭವ ಮತ್ತು ಪಕ್ಷದ ಮೇಲಿನ ನಿಷ್ಠೆಯನ್ನು ಪರಿಗಣಿಸಿ ಸಚಿವ ಸ್ಥಾನ ನೀಡುವ ಮೂಲಕ ಗೌರವಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಕಾಂಗ್ರೆಸ್ ಹೈಕಮಾಂಡ್ ಹಾಗೂ ರಾಜ್ಯ ಸರ್ಕಾರವು ಅವರ ಸೇವೆ, ಅನುಭವ ಮತ್ತು ಪಕ್ಷದ ಮೇಲಿನ ನಿಷ್ಠೆಯನ್ನು ಪರಿಗಣಿಸಿ ಸಚಿವ ಸ್ಥಾನ ನೀಡುವ ಮೂಲಕ ಗೌರವಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಮಾದಿಗ ಸಮಾಜದ ಶರಣಪ್ಪ ಕಟ್ಟಿಮನಿ, ಮಲ್ಲಪ್ಪ ಕನ್ನಾಪೂರ ಹಟ್ಟಿ, ಸಂಗಪ್ಪ ಹಿರೇಮನಿ, ಬಸವರಾಜ ಬಂದಕಮನೆ,  ಪ್ರತಾಪ್ ಹಿರೇಮನಿ, ಲಕ್ಕಪ್ಪ ನಾಗರಹಾಳ, ಮುದ್ದಿಯಪ್ಪ ಕನ್ನಾಪೂರ ಹಟ್ಟಿ, ಸಮಾಜದ ಯುವಕರು ಉಪಸ್ಥಿತರಿದ್ದರು

ವರದಿ:-ಮಂಜುನಾಥ ಕುಂಬಾರ

Prajavikshane

Chandru R Bhanapaur

Leave a Reply

error: Content is protected !!