You are currently viewing LOCAL NEWS : ವಿ.ಬಿ.ಜಿ.ರಾಮ್.ಜಿ ಯೋಜನೆಯ ಸದುಪಯೋಗ ಪಡೆದುಕೊಳ್ಳಿ: ಇಒ ಬೆಟದೇಶ್ ಮಾಳೆಕೊಪ್ಪ ಕರೆ!

LOCAL NEWS : ವಿ.ಬಿ.ಜಿ.ರಾಮ್.ಜಿ ಯೋಜನೆಯ ಸದುಪಯೋಗ ಪಡೆದುಕೊಳ್ಳಿ: ಇಒ ಬೆಟದೇಶ್ ಮಾಳೆಕೊಪ್ಪ ಕರೆ!

LOCAL NEWS : ವಿ.ಬಿ.ಜಿ.ರಾಮ್.ಜಿ ಯೋಜನೆಯ ಸದುಪಯೋಗ ಪಡೆದುಕೊಳ್ಳಿ: ಇಒ ಬೆಟದೇಶ್ ಮಾಳೆಕೊಪ್ಪ ಕರೆ!

ಯೋಜನೆಯಡಿ ಕೂಲಿ ದರ ₹382; 125 ಮಾನವ ದಿನಗಳ ಉದ್ಯೋಗ, ಕೆಲಸ ನೀಡದಿದ್ದರೆ ನಿರುದ್ಯೋಗ ಭತ್ಯೆ

PV NEWS ಕನ್ನಡ 24×7 : 

ಕುಕನೂರು, ಜುಲೈ 09 : ಗ್ರಾಮೀಣ ಭಾಗದ ಕೂಲಿಕಾರರ ಜೀವನೋಪಾಯಕ್ಕೆ ಭದ್ರತೆ ಒದಗಿಸುವ ಉದ್ದೇಶದಿಂದ ವಿಕ್ಷಿತ್ ಭಾರತ ಗ್ಯಾರಂಟಿ ರೋಜಗಾರ ಮತ್ತು ಆಜೀವಿಕ ಮಿಷನ್ (ಗ್ರಾಮೀಣ) – (VBGRAMG) ಯೋಜನೆಯನ್ನು ಜುಲೈ 1ರಿಂದ ಜಾರಿಗೊಳಿಸಲಾಗಿದ್ದು, ಗ್ರಾಮೀಣ ಕೂಲಿಕಾರರು ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕುಕನೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಬೆಟದೇಶ್ ಮಾಳೆಕೊಪ್ಪ ತಿಳಿಸಿದ್ದಾರೆ.

ಹಿಂದಿನ ನರೇಗಾ ಯೋಜನೆಯಡಿ 100 ಮಾನವ ದಿನಗಳ ಅಕುಶಲ ಕೂಲಿ ಕೆಲಸ ನೀಡಲಾಗುತ್ತಿತ್ತು. ಹೊಸ ಯೋಜನೆಯಲ್ಲಿ ಅದನ್ನು 125 ಮಾನವ ದಿನಗಳಿಗೆ ಹೆಚ್ಚಿಸಲಾಗಿದೆ. ಈಗಾಗಲೇ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಕಾಮಗಾರಿಗಳು ಆರಂಭಗೊಂಡಿದ್ದು, ಒಟ್ಟು 318 ಮಾದರಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಯೋಜನೆಯಡಿ ಕೂಲಿ ದರವನ್ನು ₹370ರಿಂದ ₹382ಕ್ಕೆ ಹೆಚ್ಚಿಸಲಾಗಿದ್ದು, ಇದರಿಂದ ಗ್ರಾಮೀಣ ಕೂಲಿಕಾರರ ಆದಾಯ ಹೆಚ್ಚಲು ಸಹಕಾರಿಯಾಗಲಿದೆ.

ಯೋಜನೆಯ ಪ್ರಯೋಜನ ಪಡೆಯಲು ನೊಂದಾಯಿತ ಕೂಲಿಕಾರರಿಗೆ e-KYC ಕಡ್ಡಾಯ ಮಾಡಲಾಗಿದೆ. ಜೊತೆಗೆ NMMS ಮೊಬೈಲ್ ಆ್ಯಪ್ ಮೂಲಕ ಪ್ರತಿದಿನದ ಹಾಜರಾತಿಯನ್ನು ದಾಖಲಿಸಲಾಗುತ್ತಿದ್ದು, ರಿಯಲ್-ಟೈಮ್ ಹಾಜರಾತಿ ವ್ಯವಸ್ಥೆಯಿಂದ ಪಾರದರ್ಶಕತೆ ಹೆಚ್ಚಲಿದೆ.

ಯೋಜನೆಯಡಿ ತೋಟಗಾರಿಕೆ, ರೇಷ್ಮೆ ಅಭಿವೃದ್ಧಿ, ಜಾನುವಾರು ಶೆಡ್ ಸೇರಿದಂತೆ ವಿವಿಧ ವೈಯಕ್ತಿಕ ಕಾಮಗಾರಿಗಳಿಗೆ ₹5 ಲಕ್ಷದವರೆಗೆ ಆರ್ಥಿಕ ನೆರವು ದೊರೆಯಲಿದೆ.

ಅಲ್ಲದೆ, ಇಸ್ರೋ ಅಭಿವೃದ್ಧಿಪಡಿಸಿರುವ ‘ಯುಕ್ತಧಾರ’ GIS ತಂತ್ರಜ್ಞಾನ ಆಧಾರಿತ ಕ್ರಿಯಾ ಯೋಜನೆಗಳನ್ನು ರೂಪಿಸಲಾಗುತ್ತಿದ್ದು, ಸೂಕ್ತ ಸ್ಥಳಗಳಲ್ಲಿ ಅಗತ್ಯ ಕಾಮಗಾರಿಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಇದು ನೆರವಾಗಲಿದೆ.

ಈ ಯೋಜನೆಯಿಂದ ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆ, ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಗ್ರಾಮ ಪಂಚಾಯಿತಿಗಳ ಮೂಲಕ ಜನಸಹಭಾಗಿತ್ವದ ಅಭಿವೃದ್ಧಿಗೆ ಮತ್ತಷ್ಟು ಉತ್ತೇಜನ ಸಿಗಲಿದೆ ಎಂದು ಬೆಟದೇಶ್ ಮಾಳೆಕೊಪ್ಪ ತಿಳಿಸಿದ್ದಾರೆ.

Prajavikshane

Chandru R Bhanapaur

Leave a Reply

error: Content is protected !!