LOCAL NEWS : ಕೊಪ್ಪಳ ಜಿಲ್ಲೆಯಲ್ಲಿ ಹೋಂಸ್ಟೇ ನೋಂದಣಿ ಕಡ್ಡಾಯ: ಪ್ರವಾಸೋದ್ಯಮ ಇಲಾಖೆಯಿಂದ ಸಾರ್ವಜನಿಕರಿಗೆ ಮನವಿ..!

PV NEWS ಕನ್ನಡ 24×7 :
ಕೊಪ್ಪಳ, ಜುಲೈ 9 : ರಾಜ್ಯದಲ್ಲಿ ಪ್ರವಾಸಿಗರ ಸುರಕ್ಷತೆ ಹಾಗೂ ಪ್ರವಾಸೋದ್ಯಮ ಸೇವೆಗಳ ಗುಣಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ, ಹೋಂಸ್ಟೇಗಳನ್ನು ಪ್ರಾರಂಭಿಸುವ ಅಥವಾ ಈಗಾಗಲೇ ನಡೆಸುತ್ತಿರುವ ಎಲ್ಲ ಮಾಲೀಕರು ಕರ್ನಾಟಕ ಹೋಂಸ್ಟೇ ನೋಂದಣಿ ನಿಯಮಾವಳಿಗಳ ಪ್ರಕಾರ ಕಡ್ಡಾಯವಾಗಿ ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಣಿ ಮಾಡಿಸಿಕೊಳ್ಳಬೇಕು ಎಂದು ಕೊಪ್ಪಳ ಜಿಲ್ಲಾ ಪ್ರವಾಸೋದ್ಯಮ ಇಲಾಖೆ ತಿಳಿಸಿದೆ.

ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ಕೊಪ್ಪಳ ಅವರಿಂದ ಗುರುವಾರ (ಜುಲೈ 9) ಪ್ರಕಟಿಸಲಾದ ಪತ್ರಿಕಾ ಪ್ರಕಟಣೆಯಲ್ಲಿ, ಕೊಪ್ಪಳ ಜಿಲ್ಲೆಯ ವ್ಯಾಪ್ತಿಯಲ್ಲಿ ಹೊಸದಾಗಿ ಹೋಂಸ್ಟೇ ಆರಂಭಿಸಲು ಆಸಕ್ತಿ ಹೊಂದಿರುವವರು ಹಾಗೂ ಈಗಾಗಲೇ ಹೋಂಸ್ಟೇ ನಡೆಸುತ್ತಿರುವವರು ಅಗತ್ಯ ದಾಖಲೆಗಳೊಂದಿಗೆ ಆನ್‌ಲೈನ್ ಮೂಲಕ ನೋಂದಣಿಗೆ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ.
