You are currently viewing BIG NEWS : ಕೊಪ್ಪಳ | ಬಿಎಲ್‌ಒ ಡ್ಯೂಟಿಯಿಂದ ಕೈಬಿಡುವಂತೆ ಆಗ್ರಹಿಸಿ ಡಿಸಿ ಕಚೇರಿಗೆ ಅಂಗನವಾಡಿ ಕಾರ್ಯಕರ್ತೆಯರ ಮುತ್ತಿಗೆ!

BIG NEWS : ಕೊಪ್ಪಳ | ಬಿಎಲ್‌ಒ ಡ್ಯೂಟಿಯಿಂದ ಕೈಬಿಡುವಂತೆ ಆಗ್ರಹಿಸಿ ಡಿಸಿ ಕಚೇರಿಗೆ ಅಂಗನವಾಡಿ ಕಾರ್ಯಕರ್ತೆಯರ ಮುತ್ತಿಗೆ!

BIG NEWS : ಕೊಪ್ಪಳ | ಬಿಎಲ್‌ಒ ಡ್ಯೂಟಿಯಿಂದ ಕೈಬಿಡುವಂತೆ ಆಗ್ರಹಿಸಿ ಡಿಸಿ ಕಚೇರಿಗೆ ಅಂಗನವಾಡಿ ಕಾರ್ಯಕರ್ತೆಯರ ಮುತ್ತಿಗೆ!

ಸಿಐಟಿಯು ನೇತೃತ್ವದಲ್ಲಿ ಪ್ರತಿಭಟನೆ; ಪೊಲೀಸರೊಂದಿಗೆ ತಳ್ಳಾಟ–ನೂಕಾಟ, ಕೆಲಕಾಲ ಉದ್ವಿಗ್ನ ವಾತಾವರಣ

ಕೊಪ್ಪಳ, ಜು. 10: ಬೂತ್ ಲೆವೆಲ್ ಆಫೀಸರ್ (ಬಿಎಲ್‌ಒ) ಕರ್ತವ್ಯದಿಂದ ಅಂಗನವಾಡಿ ಕಾರ್ಯಕರ್ತೆಯರನ್ನು ಕೈಬಿಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ (ಸಿಐಟಿಯು) ನೇತೃತ್ವದಲ್ಲಿ ಶುಕ್ರವಾರ ಕೊಪ್ಪಳ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಯಿತು.

ಜಿಲ್ಲಾಧಿಕಾರಿ ಕಚೇರಿಯೊಳಗೆ ಪ್ರವೇಶಿಸಿ ತಮ್ಮ ಮನವಿ ಸಲ್ಲಿಸಲು ಪ್ರತಿಭಟನಾಕಾರರು ಮುಂದಾದಾಗ, ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿ ತಡೆದರು. ಈ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ತಳ್ಳಾಟ–ನೂಕಾಟ ನಡೆದಿದ್ದು, ಕೆಲಕಾಲ ಡಿಸಿ ಕಚೇರಿ ಎದುರು ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು.

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು, ಈಗಾಗಲೇ ಮಕ್ಕಳ ಪೌಷ್ಟಿಕ ಆಹಾರ, ಪೂರ್ವಪ್ರಾಥಮಿಕ ಶಿಕ್ಷಣ, ಆರೋಗ್ಯ ಸೇವೆಗಳು ಸೇರಿದಂತೆ ಹಲವು ಜವಾಬ್ದಾರಿಗಳನ್ನು ನಿರ್ವಹಿಸುತ್ತಿದ್ದೇವೆ. ಇದರ ಮಧ್ಯೆ ಚುನಾವಣೆಗೆ ಸಂಬಂಧಿಸಿದ ಬಿಎಲ್‌ಒ ಕರ್ತವ್ಯವನ್ನು ಹೆಚ್ಚುವರಿಯಾಗಿ ನೀಡಿರುವುದು ಅನಗತ್ಯ ಒತ್ತಡ ಉಂಟುಮಾಡುತ್ತಿದೆ. ಆದ್ದರಿಂದ ಬಿಎಲ್‌ಒ ಕರ್ತವ್ಯದಿಂದ ಅಂಗನವಾಡಿ ಸಿಬ್ಬಂದಿಯನ್ನು ತಕ್ಷಣವೇ ಕೈಬಿಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯ ವೇಳೆ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು, ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ರಾಜ್ಯಾದ್ಯಂತ ಹೋರಾಟವನ್ನು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು.

ಬಳಿಕ ಪ್ರತಿಭಟನಾಕಾರರ ಮನವಿಯನ್ನು ಜಿಲ್ಲಾಡಳಿತದ ಅಧಿಕಾರಿಗಳು ಸ್ವೀಕರಿಸಿದರು. ಘಟನೆಯ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಮುನ್ನೆಚ್ಚರಿಕೆ ವಹಿಸಿದರು.

ಪ್ರತಿಭಟನೆಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಕೆಲಕಾಲ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾದರೂ, ನಂತರ ಪರಿಸ್ಥಿತಿ ಸಹಜಗೊಂಡಿತು.

Prajavikshane

Chandru R Bhanapaur

Leave a Reply

error: Content is protected !!