You are currently viewing LOCAL NEWS : ಕುಕನೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: ಕಳೆದುಹೋಗಿದ್ದ 10 ಬೆಲೆಬಾಳುವ ಮೊಬೈಲ್‌ಗಳು ವಾರಸುದಾರರಿಗೆ ಹಸ್ತಾಂತರ! 

LOCAL NEWS : ಕುಕನೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: ಕಳೆದುಹೋಗಿದ್ದ 10 ಬೆಲೆಬಾಳುವ ಮೊಬೈಲ್‌ಗಳು ವಾರಸುದಾರರಿಗೆ ಹಸ್ತಾಂತರ! 

LOCAL NEWS : ಕುಕನೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: ಕಳೆದುಹೋಗಿದ್ದ 10 ಬೆಲೆಬಾಳುವ ಮೊಬೈಲ್‌ಗಳು ವಾರಸುದಾರರಿಗೆ ಹಸ್ತಾಂತರ!

PV NEWS ಕನ್ನಡ 24×7 : 

ಕುಕನೂರು, ಜು. 11 : ಕುಕನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳೆದುಹೋಗಿದ್ದ ಬೆಲೆಬಾಳುವ ಮೊಬೈಲ್‌ಗಳನ್ನು ಪತ್ತೆಹಚ್ಚುವಲ್ಲಿ ಕುಕನೂರು ಪೊಲೀಸರು ಯಶಸ್ವಿಯಾಗಿದ್ದು, ಒಟ್ಟು 10 ಮೊಬೈಲ್ ಫೋನ್‌ಗಳನ್ನು ಪತ್ತೆಹಚ್ಚಿ ಸಂಬಂಧಿಸಿದ 10 ಮಂದಿ ವಾರಸುದಾರರಿಗೆ ಮರಳಿ ಹಸ್ತಾಂತರಿಸಿದರು.

ಮೊಬೈಲ್ ಕಳೆದುಕೊಂಡಿದ್ದ ಸಾರ್ವಜನಿಕರು ನೀಡಿದ ದೂರುಗಳ ಆಧಾರದ ಮೇಲೆ ಕುಕನೂರು ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ತಾಂತ್ರಿಕ ಮಾಹಿತಿಯ ನೆರವಿನಿಂದ ಕಾರ್ಯಾಚರಣೆ ನಡೆಸಿ ಕಳೆದುಹೋಗಿದ್ದ ಮೊಬೈಲ್‌ಗಳನ್ನು ಪತ್ತೆಹಚ್ಚಿ ವಶಪಡಿಸಿಕೊಂಡರು. ಬಳಿಕ ಅವುಗಳ ಮಾಲೀಕತ್ವವನ್ನು ಪರಿಶೀಲಿಸಿ, ನೈಜ ವಾರಸುದಾರರಿಗೆ ಪೊಲೀಸ್ ಠಾಣೆಯಲ್ಲಿ ಅಧಿಕೃತವಾಗಿ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ತಮ್ಮ ಕಳೆದುಹೋಗಿದ್ದ ಮೊಬೈಲ್‌ಗಳನ್ನು ಮರಳಿ ಪಡೆದ ಸಾರ್ವಜನಿಕರು ಕುಕನೂರು ಪೊಲೀಸ್ ಠಾಣೆಯ ಪಿಎಸ್ಐ  ಎಸ್.ಪಿ ನಾಯ್ಕ್ ಹಾಗೂ ಸಿಬ್ಬಂದಿಯ ಕಾರ್ಯಕ್ಷಮತೆಯನ್ನು ಶ್ಲಾಘಿಸಿ ಕೃತಜ್ಞತೆ ಸಲ್ಲಿಸಿದರು.

ಸಾರ್ವಜನಿಕರು ಮೊಬೈಲ್ ಅಥವಾ ಇತರೆ ಬೆಲೆಬಾಳುವ ವಸ್ತುಗಳು ಕಳೆದುಹೋದ ತಕ್ಷಣ ಸಮೀಪದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದರೆ ಅವುಗಳನ್ನು ಪತ್ತೆಹಚ್ಚಲು ಹೆಚ್ಚಿನ ಅವಕಾಶಗಳಿರುತ್ತವೆ ಎಂದು ಪೊಲೀಸರು ತಿಳಿಸಿದರು.

ಕುಕನೂರು ಪೊಲೀಸ್ ಠಾಣೆಯ ಈ ಕಾರ್ಯಾಚರಣೆ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವುದರ ಜೊತೆಗೆ ಜನರ ಆಸ್ತಿಯನ್ನು ಸುರಕ್ಷಿತವಾಗಿ ಮರಳಿ ಒದಗಿಸುವಲ್ಲಿ ಇಲಾಖೆಯ ಬದ್ಧತೆಯನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.

Prajavikshane

Chandru R Bhanapaur

Leave a Reply

error: Content is protected !!