You are currently viewing KOPPAL NEWS | ಸಾಮಾಜಿಕ ಜಾಲತಾಣಗಳ ದುರ್ಬಳಕೆ ತಡೆಗೆ ಕಟ್ಟುನಿಟ್ಟಿನ ಸೂಚನೆ: ಸುಳ್ಳು ಸುದ್ದಿ, ಪ್ರಚೋದನಕಾರಿ ಪೋಸ್ಟ್‌ಗಳ ವಿರುದ್ಧ ಕಠಿಣ ಕ್ರಮ : SP ಡಾ. ರಾಮ್ ಎಲ್. ಅರಸಿದ್ದಿ

KOPPAL NEWS | ಸಾಮಾಜಿಕ ಜಾಲತಾಣಗಳ ದುರ್ಬಳಕೆ ತಡೆಗೆ ಕಟ್ಟುನಿಟ್ಟಿನ ಸೂಚನೆ: ಸುಳ್ಳು ಸುದ್ದಿ, ಪ್ರಚೋದನಕಾರಿ ಪೋಸ್ಟ್‌ಗಳ ವಿರುದ್ಧ ಕಠಿಣ ಕ್ರಮ : SP ಡಾ. ರಾಮ್ ಎಲ್. ಅರಸಿದ್ದಿ

KOPPAL NEWS | ಸಾಮಾಜಿಕ ಜಾಲತಾಣಗಳ ದುರ್ಬಳಕೆ ತಡೆಗೆ ಕಟ್ಟುನಿಟ್ಟಿನ ಸೂಚನೆ: ಸುಳ್ಳು ಸುದ್ದಿ, ಪ್ರಚೋದನಕಾರಿ ಪೋಸ್ಟ್‌ಗಳ ವಿರುದ್ಧ ಕಠಿಣ ಕ್ರಮ : SP ಡಾ. ರಾಮ್ ಎಲ್. ಅರಸಿದ್ದಿ

PV NEWS ಕನ್ನಡ 24×7 : ಚಂದ್ರು ಆರ್. ಭಾನಾಪುರ, ಕೊಪ್ಪಳ.

ಕೊಪ್ಪಳ, ಜು 14 : ಜಿಲ್ಲೆಯಾದ್ಯಂತ ಸಾಮಾಜಿಕ ಜಾಲತಾಣಗಳ ಮೂಲಕ ಹರಡುತ್ತಿರುವ ಸುಳ್ಳು ಸುದ್ದಿ, ವದಂತಿಗಳು ಹಾಗೂ ಪ್ರಚೋದನಕಾರಿ ಪೋಸ್ಟ್‌ಗಳನ್ನು ತಡೆಯಲು ಕೊಪ್ಪಳ ಜಿಲ್ಲಾ ಪೊಲೀಸ್ ಅಧೀಕ್ಷಕ (ಎಸ್‌ಪಿ) ಡಾ. ರಾಮ್ ಎಲ್. ಅರಸಿದ್ದಿ ಅವರು ಜಿಲ್ಲೆಯ ಎಲ್ಲಾ ಸೋಶಿಯಲ್ ಮೀಡಿಯಾ ಮಾನಿಟರಿಂಗ್ ಸಿಬ್ಬಂದಿಗಳ ಸಭೆಯನ್ನು ನಡೆಸಿದರು.

ಸಭೆಯಲ್ಲಿ ಸಾಮಾಜಿಕ ಜಾಲತಾಣಗಳ ಮೇಲ್ವಿಚಾರಣೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಡೆಸುವಂತೆ ಸೂಚಿಸಿದ ಎಸ್‌ಪಿ ಅವರು, ಸಾರ್ವಜನಿಕರ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುವ ಉದ್ದೇಶದಿಂದ ವಿವಾದಾತ್ಮಕ, ಪ್ರಚೋದನಕಾರಿ ಹಾಗೂ ಸುಳ್ಳು ಮಾಹಿತಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ಪ್ರತಿಯೊಂದು ಮಾಹಿತಿಯನ್ನು ನಿಗಾ ವಹಿಸಿ, ಯಾವುದೇ ರೀತಿಯ ಸುಳ್ಳು ಸುದ್ದಿ ಅಥವಾ ವದಂತಿ ಕಂಡುಬಂದಲ್ಲಿ ತಕ್ಷಣ ಪರಿಶೀಲಿಸಿ, ಸಂಬಂಧಪಟ್ಟವರ ವಿರುದ್ಧ ಕಾನೂನುಬದ್ಧ ಕ್ರಮ ಜರುಗಿಸುವಂತೆ ಸೂಚಿಸಿದರು.

ಅಲ್ಲದೆ, ಸಾಮಾಜಿಕ ಜಾಲತಾಣಗಳನ್ನು ಜವಾಬ್ದಾರಿಯುತವಾಗಿ ಬಳಸುವಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ತಿಳಿಸಿದ ಎಸ್‌ಪಿ ಅವರು, ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುವ ಯಾವುದೇ ಪೋಸ್ಟ್‌ಗಳನ್ನು ನಿರ್ಲಕ್ಷಿಸದೆ ತ್ವರಿತವಾಗಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಲಹೆ ನೀಡಿದರು.

ಸಭೆಯಲ್ಲಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ಸೋಶಿಯಲ್ ಮೀಡಿಯಾ ಮಾನಿಟರಿಂಗ್ ಸಿಬ್ಬಂದಿ ಹಾಗೂ ಸಂಬಂಧಿಸಿದ ಅಧಿಕಾರಿಗಳು ಉಪಸ್ಥಿತರಿದ್ದರು.

ಸಾರ್ವಜನಿಕರಿಗೆ ಮನವಿ:

ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿ ಅಥವಾ ಮಾಹಿತಿಯನ್ನು ಹಂಚಿಕೊಳ್ಳುವ ಮೊದಲು ಅದರ ಸತ್ಯಾಸತ್ಯತೆಯನ್ನು ಖಚಿತಪಡಿಸಿಕೊಳ್ಳಬೇಕು. ಸುಳ್ಳು ಸುದ್ದಿ, ದ್ವೇಷ ಅಥವಾ ಪ್ರಚೋದನಕಾರಿ ಪೋಸ್ಟ್‌ಗಳನ್ನು ಹಂಚಿಕೊಳ್ಳುವುದು ಕಾನೂನುಬದ್ಧವಾಗಿ ಶಿಕ್ಷಾರ್ಹ ಅಪರಾಧವಾಗಿದ್ದು, ಇಂತಹ ಕೃತ್ಯಗಳಿಂದ ದೂರವಿರಲು ಕೊಪ್ಪಳ ಜಿಲ್ಲಾ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

Prajavikshane

Chandru R Bhanapaur

Leave a Reply

error: Content is protected !!