You are currently viewing KOPPAL NEWS : ರಸ್ತೆ ಬದಿಯಲ್ಲಿ ನವಜಾತ ಗಂಡು ಮಗು ಪತ್ತೆ; ಜಿಲ್ಲಾ ಆಸ್ಪತ್ರೆಗೆ ದಾಖಲು,!

KOPPAL NEWS : ರಸ್ತೆ ಬದಿಯಲ್ಲಿ ನವಜಾತ ಗಂಡು ಮಗು ಪತ್ತೆ; ಜಿಲ್ಲಾ ಆಸ್ಪತ್ರೆಗೆ ದಾಖಲು,!

KOPPAL NEWS : ರಸ್ತೆ ಬದಿಯಲ್ಲಿ ನವಜಾತ ಗಂಡು ಮಗು ಪತ್ತೆ; ಜಿಲ್ಲಾ ಆಸ್ಪತ್ರೆಗೆ ದಾಖಲು,!

PV NEWS ಕನ್ನಡ 24×7: 

ಕೊಪ್ಪಳ, ಜು. 18 (PV NEWS): ನಗರದ ಶ್ರೀಶೈಲ ನಗರದ 3ನೇ ವಾರ್ಡ್‌ನಲ್ಲಿ ರಸ್ತೆ ಬದಿಯಲ್ಲಿ ನವಜಾತ ಗಂಡು ಮಗುವನ್ನು ಯಾರೋ ಬಿಟ್ಟು ಹೋಗಿರುವ ಹೃದಯವಿದ್ರಾವಕ ಘಟನೆ ಶನಿವಾರ ಬೆಳಕಿಗೆ ಬಂದಿದೆ.

ಸ್ಥಳೀಯರು ರಸ್ತೆ ಬದಿಯಲ್ಲಿ ಮಗು ಅಳುತ್ತಿರುವುದನ್ನು ಗಮನಿಸಿ ತಕ್ಷಣವೇ ಮಾನವೀಯತೆ ಮೆರೆದು ಮಗುವನ್ನು ರಕ್ಷಿಸಿ ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಮಗುವಿಗೆ ವೈದ್ಯರ ಮೇಲ್ವಿಚಾರಣೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಮಗುವಿನ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.

ಈ ಕುರಿತು ಕಿಮ್ಸ್ ಆಡಳಿತ ಮಂಡಳಿ ಸದಸ್ಯ ಸಲೀಂ ಅಳವಂಡಿ ಮಾತನಾಡಿ, “ಮಗು ಸುರಕ್ಷಿತವಾಗಿದ್ದು, ಜಿಲ್ಲಾ ಆಸ್ಪತ್ರೆಯಲ್ಲಿ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರು ಮಗುವಿನ ಆರೋಗ್ಯದ ಮೇಲೆ ನಿಗಾ ವಹಿಸಿದ್ದಾರೆ,” ಎಂದು ತಿಳಿಸಿದ್ದಾರೆ.

ಮಗು ಯಾರಿಗೆ ಸೇರಿದ್ದು, ಯಾವ ಕಾರಣಕ್ಕಾಗಿ ರಸ್ತೆ ಬದಿಯಲ್ಲಿ ಬಿಟ್ಟು ಹೋಗಲಾಗಿದೆ ಎಂಬುದು ಇನ್ನೂ ತಿಳಿದುಬಂದಿಲ್ಲ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದು, ಈವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಮೂಲಗಳು ತಿಳಿಸಿವೆ.

ಪೊಲೀಸರ ತನಿಖೆಯ ಬಳಿಕ ಮಗುವಿನ ಪೋಷಕರು ಹಾಗೂ ಘಟನೆಯ ಹಿಂದಿನ ಸತ್ಯಾಂಶ ಬೆಳಕಿಗೆ ಬರುವ ಸಾಧ್ಯತೆಯಿದೆ.

— PV NEWS ಕನ್ನಡ 24×7

(ಇದು ಪ್ರಜೆಗಳ ಪರ ಹದ್ದಿನ ಕಣ್ಣು)

Prajavikshane

Chandru R Bhanapaur

Leave a Reply

error: Content is protected !!