You are currently viewing LOCAL NEWS : ಕೊಪ್ಪಳ | ನಾಗೇಶನಹಳ್ಳಿಯಲ್ಲಿ ತೀವ್ರ ಕುಡಿಯುವ ನೀರಿನ ಸಮಸ್ಯೆ: ಜಿಲ್ಲಾಡಳಿತ ತಕ್ಷಣ ಕ್ರಮಕ್ಕೆ ಗ್ರಾಮಸ್ಥರ ಆಗ್ರಹ!

LOCAL NEWS : ಕೊಪ್ಪಳ | ನಾಗೇಶನಹಳ್ಳಿಯಲ್ಲಿ ತೀವ್ರ ಕುಡಿಯುವ ನೀರಿನ ಸಮಸ್ಯೆ: ಜಿಲ್ಲಾಡಳಿತ ತಕ್ಷಣ ಕ್ರಮಕ್ಕೆ ಗ್ರಾಮಸ್ಥರ ಆಗ್ರಹ!

LOCAL NEWS : ನಾಗೇಶನಹಳ್ಳಿಯಲ್ಲಿ ತೀವ್ರ ಕುಡಿಯುವ ನೀರಿನ ಸಮಸ್ಯೆ: ಜಿಲ್ಲಾಡಳಿತ ತಕ್ಷಣ ಕ್ರಮಕ್ಕೆ ಗ್ರಾಮಸ್ಥರ ಆಗ್ರಹ!

PV NEWS ಕನ್ನಡ 24×7 : 

ಕೊಪ್ಪಳ, ಜು. 18 (PV NEWS): ಕೊಪ್ಪಳ ಜಿಲ್ಲೆಯ ಕೊಪ್ಪಳ ತಾಲೂಕಿನ ಬೂದುಗುಂಪಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗೇಶನಹಳ್ಳಿ ಗ್ರಾಮದಲ್ಲಿ ಕಳೆದ ಹಲವು ದಿನಗಳಿಂದ ತೀವ್ರ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು, ಗ್ರಾಮಸ್ಥರು ನೀರಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಗ್ರಾಮದಲ್ಲಿ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆಯಾಗದ ಕಾರಣ ಮಹಿಳೆಯರು, ವಯೋವೃದ್ಧರು ಹಾಗೂ ಮಕ್ಕಳು ಸೇರಿದಂತೆ ಗ್ರಾಮಸ್ಥರು ದೂರದ ಪ್ರದೇಶಗಳಿಂದ ನೀರು ತಂದು ದಿನನಿತ್ಯದ ಅಗತ್ಯಗಳನ್ನು ಪೂರೈಸಬೇಕಾದ ಅನಿವಾರ್ಯತೆ ಎದುರಿಸುತ್ತಿದ್ದಾರೆ. ಖಾಲಿ ಕೊಡಗಳನ್ನು ಹಿಡಿದು ಗ್ರಾಮಸ್ಥರು ಪ್ರತಿಭಟನೆ ನಡೆಸಿ ತಮ್ಮ ಅಳಲನ್ನು ವ್ಯಕ್ತಪಡಿಸಿದ್ದಾರೆ.

ಗ್ರಾಮಸ್ಥರ ಹೇಳುವಂತೆ, ಈ ಸಮಸ್ಯೆಯನ್ನು ಹಲವು ಬಾರಿ ಗ್ರಾಮ ಪಂಚಾಯಿತಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಶಾಶ್ವತ ಪರಿಹಾರ ದೊರೆತಿಲ್ಲ. ದಿನದಿಂದ ದಿನಕ್ಕೆ ನೀರಿನ ಬಿಕ್ಕಟ್ಟು ಹೆಚ್ಚಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ ಎಂದು ಅವರು ಆರೋಪಿಸಿದ್ದಾರೆ.

“ಕುಡಿಯುವ ನೀರು ಪ್ರತಿಯೊಬ್ಬ ನಾಗರಿಕನ ಮೂಲಭೂತ ಹಕ್ಕಾಗಿದ್ದು, ಸುರಕ್ಷಿತ ಹಾಗೂ ನಿರಂತರ ನೀರು ಪೂರೈಕೆ ಮಾಡುವುದು ಸರ್ಕಾರದ ಜವಾಬ್ದಾರಿಯಾಗಿದೆ. ಆದ್ದರಿಂದ ಕೊಪ್ಪಳ ಜಿಲ್ಲಾಧಿಕಾರಿಗಳು, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆಯನ್ನು ಪರಿಶೀಲಿಸಿ, ನಾಗೇಶನಹಳ್ಳಿ ಗ್ರಾಮಕ್ಕೆ ನಿರಂತರ ಹಾಗೂ ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು”

:- ಕಾಶೀಮ್ ನಾಗೇಶನಹಳ್ಳಿ 

ಗ್ರಾಮದಲ್ಲಿ ತುರ್ತು ನೀರು ಸರಬರಾಜು ವ್ಯವಸ್ಥೆ ಕಲ್ಪಿಸುವುದರ ಜೊತೆಗೆ, ಭವಿಷ್ಯದಲ್ಲಿ ಇಂತಹ ಸಮಸ್ಯೆ ಮರುಕಳಿಸದಂತೆ ಶಾಶ್ವತ ಯೋಜನೆ ರೂಪಿಸಿ ಅನುಷ್ಠಾನಗೊಳಿಸಬೇಕೆಂದು ನಾಗೇಶನಹಳ್ಳಿ ಗ್ರಾಮಸ್ಥರು ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದಾರೆ.

Prajavikshane

Chandru R Bhanapaur

Leave a Reply

error: Content is protected !!