ಬೆಳಿಗ್ಗೆ 6 ರಿಂದ ರಾತ್ರಿ 10 ರವರೆಗೆ ಪಡಿತರ ವಿತರಣೆ ಕಡ್ಡಾಯ..
ಮುದಗಲ್ಲ : ರಾಜ್ಯದ ಎಲ್ಲ ಸರ್ಕಾರಿ ನ್ಯಾಯಬೆಲೆ ಅಂಗಡಿಗಳು
ಬೆಳಿಗ್ಗೆ 6ರಿಂದ ರಾತ್ರಿ 10ರವರೆಗೆ ಕಡ್ಡಾಯವಾಗಿ ತೆರೆದಿರಬೇಕು
ಎಂದು ಆಹಾರ ಇಲಾಖೆಯು ಆದೇಶಿಸಿದೆ.

ನ್ಯಾಯಬೆಲೆ ಅಂಗಡಿಗಳಿಗೆ ಅಗತ್ಯ ಪಡಿತರ ಪೂರೈಕೆ ಯಾಗಿದ್ದರೂ ಫಲಾನುಭವಿಗಳಿಗೆ ಪಡಿತರ ವಿತರಣೆಯಲ್ಲಿ ವಿಳಂಬ ವಾಗುತ್ತಿರುವ ಬಗ್ಗೆ ದೂರುಗಳು ಬಂದಿವೆ. ಜುಲೈ ತಿಂಗಳ ಪಡಿತರವು ಬಹುತೇಕ ನ್ಯಾಯಬೆಲೆ ಅಂಗಡಿಗಳಿಗೆ ಈಗಾಗಲೇ ಪೂರೈಕೆಯಾಗಿದೆ. ಈ ತಿಂಗಳ ಅಂತ್ಯದ ಒಳಗೇ ಎಲ್ಲ ಫಲಾನುಭವಿಗಳಿಗೂ ಪಡಿತರ ವಿತರಿಸಬೇಕಿದೆ. ಇದಕ್ಕಾಗಿ ಎಲ್ಲ ಅಂಗಡಿಗಳು ಬೆಳಿಗ್ಗೆ 6ರಿಂದ ರಾತ್ರಿ 10 ರವರೆಗೆ ಕಾರ್ಯನಿರ್ವಹಿಸ ಬೇಕು ಎಂದು ಸೂಚಿಸಿದೆ.

ಇಲಾಖೆಯ ಹೆಚ್ಚುವರಿ ನಿರ್ದೇಶಕರು ಎಲ್ಲ ಜಂಟಿ/ಉಪ
ನಿರ್ದೇಶಕರಿಗೆ ಪತ್ರ ಬರೆದಿದ್ದು, ಈ ಆದೇಶವನ್ನು ಕಟ್ಟುನಿಟ್ಟಾಗಿ
ಪಾಲಿಸುವಂತೆ ನೋಡಿಕೊಳ್ಳಬೇಕು. ಈ ಆದೇಶವನ್ನು ಉಲ್ಲಂಘಿಸುವ ನ್ಯಾಯಬೆಲೆ ಅಂಗಡಿಗಳ ವಿತರಕರ ವಿರುದ್ಧ ನಿಯಮಾನುಸಾರ ಕ್ರಮ ತೆಗೆದುಕೊಳ್ಳಬೇಕು ಎಂದು
ಸೂಚಿಸಿದ್ದಾರೆ.
ವರದಿ:-ಮಂಜುನಾಥ ಕುಂಬಾರ
