ಮುದಗಲ್ಲ:- ಪಟ್ಟಣದ ಮೇಗಳಪೇಟೆ ಶ್ರೀ ದುರ್ಗಮ್ಮ ದೇವಸ್ಥಾನದಲ್ಲಿ ದುಷ್ಕರ್ಮಿಗಳು ಕಳ್ಳತನ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ.
ಮುದಗಲ್ಲ :- ಮುದಗಲ್ ಪಟ್ಟಣದ ಮೇಗಳಪೇಟೆ ಶ್ರೀ ದುರ್ಗಮ್ಮ ದೇವಸ್ಥಾನದಲ್ಲಿ ದುಷ್ಕರ್ಮಿಗಳು ಕಳ್ಳತನ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ.ಕಳ್ಳರು ದೇವಿಯ ಮೂಗುತಿ, ತಾಳಿ ಹಾಗೂ ದೇವಸ್ಥಾನದ ಕಾಣಿಕೆ ಹುಂಡಿಯನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದಾರೆ.

ಘಟನೆ ತಿಳಿಯುತ್ತಿದ್ದಂತೆಯೇ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಭಕ್ತರು ಸ್ಥಳಕ್ಕೆ ಆಗಮಿಸಿ ಆಕ್ರೋಶ ವ್ಯಕ್ತಪಡಿಸಿದರು. ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ತನಿಖೆ ಆರಂಭಿಸಿದ್ದಾರೆ. ದೇವಸ್ಥಾನದಲ್ಲಿ ನಡೆದ ಈ ಕಳ್ಳತನದ ಘಟನೆ ಭಕ್ತರಲ್ಲಿ ಆತಂಕ ಮತ್ತು ಆಕ್ರೋಶಕ್ಕೆ ಕಾರಣವಾಗಿದ್ದು, ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಿ ಕಳವಾದ ವಸ್ತುಗಳನ್ನು ವಶಪಡಿಸಿಕೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
ವರದಿ:-ಮಂಜುನಾಥ ಕುಂಬಾರ