ಬೆಂಗಳೂರು : ಕಳೆದ ಮಾರ್ಚ್‌ನಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಮೌಲ್ಯಮಾಪನಗೊಂಡ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿಗಳನ್ನು ಪಡೆಯಲು ಅರ್ಜಿ ಸಲ್ಲಿಸಲು ಇದೇ 27ರ ವರೆಗೆ ಕಾಲವಕಾಶ ನೀಡಲಾಗಿತ್ತು. ಇದೀಗ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳಿಗೆ ಹಂತ ಹಂತವಾಗಿ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪುತಿಗಳನ್ನು ಡೌನ್ ಲೋಡ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಿದೆ ಎಂದು ರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷರು ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಪ್ರಥಮ ಹಂತವಾಗಿ ಇದೇ ತಂಗಳ 29 ರಂದು ಡೌನ್ ಲೋಡ್ ಮಾಡಬಹುದಾಗಿದೆ. ಮೊದಲ ಹಂತದಲ್ಲಿ ಸ್ಕ್ಯಾನ್ ಪ್ರತಿ ಅಪ್ ಲೋಡ್ ಆಗಿಲ್ಲದಿದ್ದಲ್ಲಿ, ಎರಡನೇಯ ಹಂತದಲ್ಲಿ ಸ್ಕ್ಯಾನ್ ಪ್ರತಿ ಅಪ್ ಲೋಡ್ ಮಾಡಿದಾಗ ವಿದ್ಯಾರ್ಥಿಗಳು ಸ್ಕ್ಯಾನ್ ಪತಿಗಳನ್ನು ಡೌನ್ ಲೋಡ್ ಮಾಡಿಕೊಳ್ಳಬಹುದು ಎಂದು ಅವರು ಮಾಹಿತಿ ನೀಡಿದ್ದಾರೆ.