BREAKING : ಜಂತರ್ ಮಂತರ್ ಪ್ರತಿಭಟನೆಗೆ ತೆರೆ: ಧರ್ಮೇಂದ್ರ ಪ್ರಧಾನ್ ರಾಜೀನಾಮೆಯ ಬಳಿಕ ಸ್ಥಳ ತೆರವು ಕಾರ್ಯ ಆರಂಭ

PV NEWS ಕನ್ನಡ 24×7 :
ನವದೆಹಲಿ, ಜು. 26 (PV NEWS ಕನ್ನಡ 24×7): ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯ ಬೆನ್ನಲ್ಲೇ, ದೆಹಲಿಯ ಜಂತರ್ ಮಂತರ್‌ನಲ್ಲಿ ಕಳೆದ ಹಲವು ವಾರಗಳಿಂದ ನಡೆಯುತ್ತಿದ್ದ ಕಾಕ್ರೋಚ್ ಜನತಾ ಪಾರ್ಟಿ (CJP) ನೇತೃತ್ವದ ಪ್ರತಿಭಟನೆಗೆ ಅಧಿಕೃತ ತೆರೆ ಬಿದ್ದಿದೆ. ಭಾನುವಾರ ಬೆಳಗ್ಗೆಯಿಂದ ಪ್ರತಿಭಟನಾ ಸ್ಥಳದಲ್ಲಿದ್ದ ಟೆಂಟ್‌ಗಳು, ಬ್ಯಾನರ್‌ಗಳು ಹಾಗೂ ಇತರೆ ಸಾಮಗ್ರಿಗಳನ್ನು ತೆರವುಗೊಳಿಸುವ ಕಾರ್ಯ ಆರಂಭವಾಗಿದೆ.
