PV NEWS : ಶಾಸಕ ಬಸವರಾಜ ರಾಯರೆಡ್ಡಿಗೆ ಸಚಿವ ಸ್ಥಾನ: ಕುಕನೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮ
PV NEWS KANNDA 24×7:
ಕುಕನೂರು, ಜುಲೈ 03: ರಾಜ್ಯ ಸಚಿವ ಸಂಪುಟದಲ್ಲಿ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕ ಬಸವರಾಜ ರಾಯರೆಡ್ಡಿ ಅವರಿಗೆ ಸಚಿವ ಸ್ಥಾನ ದೊರೆತ ಹಿನ್ನೆಲೆಯಲ್ಲಿ ಕುಕನೂರು ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ಸಂಭ್ರಮಾಚರಣೆ ನಡೆಸಿದರು.
ಪಟ್ಟಣದ ವೀರಭದ್ರಪ್ಪ ಸರ್ಕಲ್‌ನಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಚಿವ ಸ್ಥಾನ ಲಭಿಸಿದ್ದನ್ನು ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಹಿರಿಯ ಕಾಂಗ್ರೆಸ್ ಮುಖಂಡ ನೂರ ಅಹ್ಮದ್ ಗುಡಿ ಹಿಂದಲ್, “ಬಸವರಾಜ ರಾಯರೆಡ್ಡಿ ಅವರಿಗೆ ಸಚಿವ ಸ್ಥಾನ ದೊರೆತಿರುವುದು ಯಲಬುರ್ಗಾ ಕ್ಷೇತ್ರ ಹಾಗೂ ಕೊಪ್ಪಳ ಜಿಲ್ಲೆಗೆ ಹೆಮ್ಮೆಯ ಸಂಗತಿಯಾಗಿದೆ. ಅವರ ನೇತೃತ್ವದಲ್ಲಿ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಮತ್ತಷ್ಟು ವೇಗ ಸಿಗುವ ವಿಶ್ವಾಸವಿದೆ” ಎಂದು ಹೇಳಿದರು.
ಸಂಭ್ರಮಾಚರಣೆಯಲ್ಲಿ ಯಮನೂರಪ್ಪ ಗೊರಲೇಕೊಪ್ಪ, ನೂರ ಅಹ್ಮದ್ ಗುಡಿ ಹಿಂದಲ್, ದೇವಿಂದ್ರ ತೊಂಡಿಹಾಳ, ರಫಿ ಹಿರೇಹಾಳ, ಭರಮಪ್ಪ ತಳವಾರ, ಫಕೀರಸಾಬ್ ರಾಜೂರು, ದೇವಿಂದ್ರಪ್ಪ ಬಡಿಗೇರ, ಸಿರಾಜ್ ಕರಮುಡಿ, ದಸ್ತಗಿರಸಾಬ್ ರಾಜೂರು ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.